SSLC RESULT LIVE! ತಕ್ಷಣ ನೋಡಲು ಇಲ್ಲಿ ಕ್ಲಿಕ್ ಮಾಡಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ (SSLC result 2025) ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಪರೀಕ್ಷೆ ಮೌಲ್ಯಮಾಪನ ಕಾರ್ಯ ಪೂರ್ಣಗೊಳಿಸಿರುವ ಕರ್ನಾಟಕ ರಾಜ್ಯ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು (ಮೇ 2) ಫಲಿತಾಂಶ ಪ್ರಕಟಿಸಿದೆ.

SSLC ಫಲಿತಾಂಶ ಚೆಕ್ ಮಾಡುವ ಲಿಂಕ್ ಕೆಳಗಡೆ ಇದೆ.

ಶುಕ್ರವಾರ ಬೆಳಗ್ಗೆ 11.30ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಬಿಡುಗಡೆ ಮಾಡಲಿದ್ದು, ಮಧ್ಯಾಹ್ನ 12.30ಕ್ಕೆ ಕೆಎಸ್‌ಇಎಬಿ ವೆಬ್‌ಸೈಟ್‌ನಲ್ಲಿ ರಿಸಲ್ಟ್‌ ಲಭ್ಯವಾಗಲಿದೆ.

ಮಾರ್ಚ್ 21ರಿಂದ ಏಪ್ರಿಲ್ 04 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸೂಸೂತ್ರವಾಗಿ ನಡೆದಿತ್ತು. ರಾಜ್ಯದ 2818 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಪರೀಕ್ಷೆಗೆ 8 ಲಕ್ಷದ 96 ಸಾವಿರ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಹೆಚ್ಚಿನ ಪ್ರಮಾಣದ ವಿದ್ಯಾರ್ಥಿಗಳು ಹಾಜರಾಗಿದ್ದರು.

ಫಲಿತಾಂಶ ಬಿಡುಗಡೆ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷ ಎಚ್.ಬಸವರಾಜೇಂದ್ರ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, 2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಪರೀಕ್ಷೆಗಳು ಮಾ. 21ರಿಂದ ಏ. 4ರವರೆಗೆ ನಡೆಸಲಾಗಿತ್ತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ. ಹೀಗಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ಮೇ 2ರಂದು ಬೆಳಗ್ಗೆ 11-30 ಗಂಟೆಗೆ ಕರ್ನಾಟಕ ಶಾಲಾ ವರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ಶುಕ್ರವಾರ 2024-25ನೇ ಸಾಲಿನ SSLC-1 ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದೆ.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು ಬೆಳಗ್ಗೆ 11:30ಕ್ಕೆ ಬೆಂಗಳೂರಿನ KSEAB ಕಚೇರಿಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ SSLC ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ. ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಕರ್ನಾಟಕದಾದ್ಯಂತ 2,818 ಪರೀಕ್ಷಾ ಕೇಂದ್ರಗಳಲ್ಲಿ SSLC ಪರೀಕ್ಷೆ ನಡೆಸಲಾಗಿತ್ತು. ಒಟ್ಟು ಸುಮಾರು 8.96 ಲಕ್ಷ ವಿದ್ಯಾರ್ಥಿಗಳು, 4,61,563 ಬಾಲಕರು ಮತ್ತು 4,34,884 ಬಾಲಕಿಯರು ಪರೀಕ್ಷೆ ಬರೆದಿದ್ದಾರೆ.

ಫಲಿತಾಂಶ ವೀಕ್ಷಿಸುವ ಲಿಂಕ್ ಇಲ್ಲಿದೆ!

ಚೆಕ್ ಮಾಡುವ ವಿಧಾನ

ಫಲಿತಾಂಶಕ್ಕಾಗಿ ಸರ್ಕಾರದ ಅಧಿಕೃತ ವೆಬ್‌ಸೈಟ್‌ https://karresults.nic.in/ ನಲ್ಲಿ ಭೇಟಿ ನೀಡಿ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ 2025 ಲಿಂಕ್ ಆಯ್ಕೆ ಮಾಡಿಕೊಳ್ಳಬೇಕು.
ನಂತರ ನಿಮ್ಮ ಪರೀಕ್ಷಾ ನೋಂದಣಿ ಸಂಖ್ಯೆ, ಜನ್ಮ ದಿನಾಂಕ ಸೇರಿ ಅಗತ್ಯ ಮಾಹಿತಿ ದಾಖಲಿಸಬೇಕು.
ನಂತರ ಅಂಕಟ್ಟಿ ತೆರೆದುಕೊಳ್ಳಲಿದ್ದು, ಡೌನ್‌ಲೋಡ್ ಮಾಡಿಕೊಳ್ಳಬಹುದು.

ರಾಜ್ಯಾದ್ಯಂತ ಎಲ್ಲರೂ ಈ ಫಲಿತಾಂಶವನ್ನು ವೀಕ್ಷಿಸುವುದರಿಂದ Server Busy ಇರುತ್ತದೆ. ಸತತವಾಗಿ ಪ್ರಯತ್ನಿಸಿ

ಧನ್ಯವಾದಗಳು, ಕೃಷಿತಾಣ

SSLC ಫಲಿತಾಂಶ ನೋಡಿದ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕಿವಿಮಾತು:

ಇನ್ನೂ ಎಸ್ ಎಸ್ ಎಲ್ ಸಿ ಪರಿಕ್ಷೆ ಫಲಿತಾಂಶ ಪ್ರಕಟವಾಗುತ್ತಿರುವ ಹಿನ್ನೆಲೆಯಲ್ಲಿ ಸಚಿವ ಮಧು ಬಂಗಾರಪ್ಪ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ್ದು, ಆತ್ಮೀಯ ವಿದ್ಯಾರ್ಥಿ ಮಿತ್ರರೇ, ಎಸ್. ಎಸ್. ಎಲ್. ಸಿ. ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಪರೀಕ್ಷೆ ಬರೆದಿರುವ ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ನನ್ನ ಶುಭ ಹಾರೈಕೆಗಳು. ಫಲಿತಾಂಶ ಏನೇ ಬರಲಿ, ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ… ಶುಭವಾಗಲಿ… ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ-02-05-2025ರ ಮಧ್ಯಾಹ್ನ 12-30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಾದಂತ ಹೆಚ್.ಬಸವರಾಜೇಂದ್ರ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಪರೀಕ್ಷೆಗಳು ದಿನಾಂಕ: 21-03-2025 ರಿಂದ 04-04-2025ರವರೆವಿಗೆ ನಡೆಸಲಾಯಿತು ಎಂದಿದ್ದಾರೆ. ಇನ್ನೂ ಪರೀಕ್ಷೆ ಬರೆದ ವಿದ್ಯಾರ್ಥಿಗಳು ತಮ್ಮ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು https://karresults.nic.in ಜಾಲತಾಣಕ್ಕೆ ಭೇಟಿ ನೀಡಿ, ತಮ್ಮ ನೋಂದಣಿ ಸಂಖ್ಯೆ ಸೇರಿದಂತೆ ಇತರೆ ಮಾಹಿತಿಯನ್ನು ನಮೂದಿಸಿ ಪಡೆಯಬಹುದಾಗಿದೆ. ಈ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ 02-05-2025ರ ಮಧ್ಯಾಹ್ನ 12-30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ಅಂತ ಮಾಹಿತಿ ನೀಡಿದ್ದಾರೆ.

Spread positive news

Leave a Reply

Your email address will not be published. Required fields are marked *