ರೈತ ಸಂಪರ್ಕ ಕೇಂದ್ರಗಳಲ್ಲಿ ಈ ಯೋಜನೆಗಾಗಿ ಅರ್ಜಿ ಆಹ್ವಾನ

ಪ್ರೀಯ ರೈತರೇ ಇವತ್ತು ನಾವು ನಿಮಗೆ ಒಂದು ಸಂತಸದ ಸುದ್ದಿ ತಂದಿದ್ದೇವೆ. ರೈತರಿಗೆ ಸರ್ಕಾರವು ಸಬ್ಸಿಡಿ ರೂಪದಲ್ಲಿ ತಾಡಪಲ್ ವಿತರಣೆ ಮಾಡಲು ಮುಂದಾಗಿದೆ. ಬನ್ನಿ ಯಾವ ಜಿಲ್ಲೆಯಲ್ಲಿ ಯಾವ ರೈತರ ಸಂಪರ್ಕ ಕೇಂದ್ರದಲ್ಲಿ ತಾಡಪಲ್ ಹಾಗೂ ಇತರೆ ಸಾಮಗ್ರಿಗಳು ಸಬ್ಸಿಡಿ ರೂಪದಲ್ಲಿ ಸಿಗುತ್ತದೆ ಎಂದು ಸಂಪೂರ್ಣ ಮಾಹಿತಿ ಪಡೆಯಲು ವಿನಂತಿಸುತ್ತೇವೆ.

ಆಧುನಿಕ ದಿನಗಳಲ್ಲಿ ರಾಶಿ ಸಮಯದಲ್ಲಾಗಲಿ,ಅಥವಾ ರೈತರು ಹೆಚ್ಚಾಗಿ ಬಳಸುವುದು ಕೃಷಿಹೊಂಡ ಗಳಿಗೆ, ತಡಪತ್ರಿ ಅತ್ಯಂತ ಅವಶ್ಯಕತೆ ಇದೆ ಹೀಗಾಗಿ ಮಾರುಕಟ್ಟೆಯಲ್ಲಿ ಅದರ ಬೆಲೆ ಕಡಿಮೆಯಂತೂ ಇರುವುದಿಲ್ಲ, ಹೀಗಾಗಿ ರೈತರಿಗೆ ಸಬ್ಸಿಡಿ ದರದಲ್ಲಿ ತಾಡಪತ್ರಿ ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ,ಅರ್ಜಿಯನ್ನು ಮೊದಲು ಸಲ್ಲಿಸಿದವರಿಗೆ ಹೆಚ್ಚು ಆದ್ಯತೆ ನೀಡಲಾಗುತ್ತದೆ.

ರೈತರ ಗಮನಕ್ಕೆ ರೈತ ಸಂಪರ್ಕ ಕೇಂದ್ರ ಕಟಕೋಳನಲ್ಲಿ ಈ ಕೆಳಗಿನ ಪರಿಕರ ಲಭ್ಯವಿರುತ್ತವೆ.

1)ಜಿಪ್ಸಮ್
2) ಅಡ್ಜೆಸ್ಟಮೆಂಟ ಕುಂಟೆ
3) ಜನರಲ್ ಕೆಟಗರಿ ತಾಡಪಲ
4) ಜಿಂಕ್
5) ಬೋರಾನ್
6)ನೀಲಿ ತಾಡಪಲ

ರೈತರು ಈ ಮೇಲೆ ತಿಳಿಸಿದ ಸಾಮಗ್ರಿ ಪಡೆಯಲು ಕೆಳಗೆ ನೀಡಿರುವ ದಾಖಲೆಗಳನ್ನು ತೆಗೆದುಕೊಂಡು ರೈತ ಸಂಪರ್ಕ ಕೇಂದ್ರ ಭೇಟಿ ನೀಡಿ, ದಾಖಲಾತಿಯೊಂದಿಗೆ ಬಂದು ತೆಗೆದುಕೊಂಡು ಹೋಗಲು ಈ ಮೂಲಕ ತಿಳಿಯಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ ಕಟಕೋಳಗೆ ಭೇಟಿ ನೀಡಿ.

ಟಾರ್ಪಲಿನ್ ಒಟ್ಟು ಮೊತ್ತ 2142 ರೂಪಾಯಿಆಗಿದ್ದು, ಇದರಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ. 50 ರಷ್ಟು ಸಹಾಯಧನ ಸಿಗಲಿದೆ. ಅಂದರೆ ರೈತರು 1071 ರೂಪಾಯಿ ವಂತಿಕೆ ಕಟ್ಟಿ ತಾಡಪತ್ರಿ ಪಡೆಯಬಹುದು. ಅದೇ ರೀತಿ ಪರಿಶಿಷ್ಚ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ. 90 ರಷ್ಟು ಸಹಾಯಧನ ಸಿಗಲಿದೆ. ಅಂದರೆ ಎಸ್.ಸಿ ಎಸ್.ಟಿ ರೈತರು ಕೇವಲ 214 ರೂಪಾಯಿ ಪಾವತಿಸಿ ತಾಡಪತ್ರಿ ಪಡೆಯಬಹುದು.

ರೈತರು ತಾವು ಸರ್ಕಾರದ ಕಡೆಯಿಂದ ಬರುವ ಯಾವುದೇ ಸಬ್ಸಿಡಿ ಪಡೆಯಲು ಎಲ್ಲ ದಾಖಲೆಗಳು ಕಡ್ಡಾಯವಾಗಿ ಹೊಂದಿರಬೇಕು. ರೈತರು ದಾಖಲೆಗಳನ್ನು ತೆಗೆದುಕೊಂಡು ಹತ್ತಿರ ಇರುವ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ನೊಂದಾಯಿಸಿಕೊಳ್ಳಬೇಕು.

ರೈತರು ಕೃಷಿಯಲ್ಲಿ ಹೆಚ್ಚಿನ ತಾಂತ್ರಿಕತೆಗೆ ಪ್ರೋತ್ಸಾಹ ನೀಡಿ ಉದ್ಯೋಗಾವಕಾಶ ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಸರ್ಕಾರವು ಹಲವಾರು ಯೋಜನೆಗಳನ್ನು ರೂಪಿಸುತ್ತಿದೆ. ರೈತರು ಸರ್ಕಾರದ ಯೋಜನೆಗಳನ್ನು ಅಳವಡಿಸಿಕೊಳ್ಳಬೇಕು.

ಅವಶ್ಯ ದಾಖಲಾತಿಗಳು ಈ ಕೆಳಗಿನಂತಿವೆ –

1) ಆಧಾರ ಪ್ರತಿ
2)ಉತಾರ/ಪಹಣಿ
3)ಬ್ಯಾಂಕ ಪಾಸ ಬುಕ ಪ್ರತಿ
4)ಇತ್ತೀಚಿನ ಭಾವಚಿತ್ರ 2 ಪ್ರತಿ
5)ನೀರಾವರಿ ಮೂಲ
6)ಚಿಕ್ಕ ಹಿಡುವಳಿ ಅಥವಾ ಭೂ ಹಿಡುವಳಿ ಪ್ರಮಾಣ ಪತ್ರ
7)NOC ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯಿಂದ
8)ಬಾಂಡ್ ವಿಥ್ ಮ್ಯಾಟರ್ ಮತ್ತು
9)ನಿಮ್ಮ ಅರ್ಜಿ ಸಲ್ಲಿಸಲು
ಈ ಮೂಲಕ ತಿಳಿಸಲಾಗಿದೆ.

ಅದೇ ರೀತಿ ರೈತರು ಸರ್ಕಾರರ ಯೋಜನೆ ಪಡೆದುಕೊಳ್ಳಲು ಕೆಲವು ನಿಯಮಗಳನ್ನು ಸರ್ಕಾರವು ರೂಪಿಸಿದೆ. ಸರ್ಕಾರವು ಕೃಷಿ ಹಾಗೂ ಹಲವಾರು ಯೋಜನೆಗಳನ್ನು ರೂಪಿಸಿದ್ದು ರೈತರ ಆದಾಯ ದ್ವಿಗುಣಗೊಳಿಸಲು ಸಹಕಾರ ಸಂಘಗಳ, ಹಾಗೂ ಸರ್ಕಾರವು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ.

ಅದೇ‌ ರೀತಿ ರೈತರು ಯಾವುದೇ ಸರ್ಕಾರದ ಸೌಲಭ್ಯ ಅಥವಾ ಸರ್ಕಾರದ ಕಡೆಯಿಂದ ಸಹಾಯಧನ ಪಡೆಯಲು ಅರ್ಜಿ ಸಲ್ಲಿಸಲು ಮುಖ್ಯವಾಗಿ ದಾಖಲೆಗಳ ಅವಶ್ಯಕತೆ ಇದೆ. ತಮ್ಮ ಕ್ಷೇತ್ರದಲ್ಲಿ ಕೇವಲ ಬೆರಳೆಣಿಕೆ ರೈತರಿಗೆ ಮಾತ್ರ ತಾಡಪಲ್ ವಿತರಣೆ ಮಾಡಲಾಗಿದೆ.

ಇನ್ನೂ ಬಹುತೇಕ ರೈತರಿಗೆ ಇದರ ಲಾಭ ದೊರೆತಿಲ್ಲ ಕೃಷಿ ಇಲಾಖೆ ಅಧಿಕಾರಿಗಳು ಎಲ್ಲಾ ಬಡ ರೈತರಿಗೆ ಸರಕಾರದ ವಿವಿಧ ಯೋಜನೆಗಳನ್ನು ತಲುಪಿಸಲು ಕ್ರಮಕೈಗೊಳ್ಳಬೇಕು.

ಕೇಂದ್ರ ಸರ್ಕಾರದ ಸೇವೆಗಳು ಸಾಲ ಮತ್ತು ಸಹಾಯಧನ ಅರ್ಜಿಗಳು –

* ಆಯುಷ್ಟಾನ್ ಕಾರ್ಡ್
* ವೋಟರ್ ಐಡಿ ಕಾರ್ಡ್
* ಈ-ಶ್ರಮ್ ಕಾರ್ಡ್
* ಈ-ಆಧಾರ್ ಕಾರ್ಡ್
* ಕಿಸಾನ್ ಕೆ.ವೈ.ಸಿ
* ರಿಜಿಸ್ಟರ್ ಪೋಸ್ಟ್ ಮತ್ತು ಪಾರ್ಸಲ್
* ಉದ್ಯಮ ರಿಜಿಸ್ಟ್ರೇಷನ್
* ಪಿ.ಎಫ್ ಹಣ ಅರ್ಜಿ
* ಹೊಸ ಜನ್-ಧನ್ ಖಾತೆ
* ಪಿ.ಎಮ್ ವಿಶ್ವಕರ್ಮ ಯೋಜನೆ (ಕರಕುಶಲ ಕರ್ಮಿಗಳಿಗೆ)
* ಪಿ.ಎಮ್ ಸಾವ್‌ನಿಧಿ ಯೋಜನೆ (ಬೀದಿಬದಿ ವ್ಯಾಪಾರಿಗಳಿಗೆ)
* ಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮ [PMEGP]
* ಎನ್.ಎಲ್.ಎಮ್ ಯೋಜನೆ ( ಕುರಿ, ಮೇಕೆ ಸಾಕಾಣಿಕೆ ಮತ್ತು)[NLM-Scheme]
* ಪ್ರಧಾನಮಂತ್ರಿ ಮುದ್ರಾ ಯೋಜನೆ
* ಫಸಲ್ ಭೀಮಾ ಯೋಜನೆ ( ಬೆಳೆ ವಿಮೆ ) [PMEBY
* ರಾಷ್ಟ್ರೀಯ ಪಿಂಚಣಿ ಯೋಜನೆ.

ಡಿಜಿಟಲ್ ಕೃಷಿ ಸೇವಾ ಕೇಂದ್ರವು ರೈತರು ಮತ್ತು ನೀತಿ ನಿರೂಪಕರಿಗೆ ಬೆಳೆಗಳ ಕುರಿತು ನಿಖರ ಮಾಹಿತಿ ನೀಡಲಿದೆ. ಆ ಮೂಲಕ ಬೆಳೆಗಳ ಉತ್ಪಾದನೆ ಹೆಚ್ಚಿಸಲು ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.

ಸಣ್ಣ ರೈತರಿಗೆ ಕೃಷಿಯನ್ನು ಸುಸ್ಥಿರ ಮತ್ತು ಲಾಭದಾಯಕವಾಗಿಸಲು ಸರ್ಕಾರವು ರೈತ ಸಮೃದ್ಧಿ ಯೋಜನೆ ಜಾರಿಗೊಳಿಸಿದೆ. 2025-26ನೇ ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 50 ಸಾವಿರ ರೈತರಿಗೆ ಸಹಾಯಧನ ಒದಗಿಸಲು 428 ಕೋಟಿ ರೂ. ಅನುದಾನ ಮೀಸಲಿರಿಸಲಾಗಿದೆ.

ರಾಜ್ಯದಲ್ಲಿ 5,000 ಕಿರು ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ಕ್ರಮ ವಹಿಸಲಾಗಿದೆ. ಕೃಷಿ ಭಾಗ್ಯ ಯೋಜನೆಯಡಿ ಪ್ರಸಕ್ತ ವರ್ಷ 12,000 ಕೃಷಿ ಹೊಂಡಗಳನ್ನು ನಿರ್ಮಿಸಲು ನಿರ್ಧರಿಸಲಾಗಿದೆ.

ಮಳೆಯಾಶ್ರಿತ ಕೃಷಿಯನ್ನು ಸುಸ್ಥಿರವನ್ನಾಗಿಸಲು ಹಾಗೂ ರೈತರ ಜೀವನೋಪಾಯವನ್ನು ಸುಧಾರಿಸಲು ʻಸಮಗ್ರ ಮಳೆಯಾಶ್ರಿತ ಕೃಷಿ ನೀತಿʼಯನ್ನು ಬಜೆಟ್‌ನಲ್ಲಿ ಘೋಷಿಸಲಾಗಿದೆ. ಜೈವಿಕ ಕೃಷಿ ಪರಿಕರ ಸ್ಟಾರ್ಟ್-ಅಪ್‌ಗಳು (Agri Start-up) ಉತ್ಪಾದಿಸುವ ಜೈವಿಕ ಪರಿಕರಗಳನ್ನು ರೈತ ಸಂಪರ್ಕ ಕೇಂದ್ರಗಳ ಮೂಲಕ ಮಾರಾಟಕಪ್ಕೆ ಉತ್ತೇಜಿಸಲು ನಿರ್ಧರಿಸಲಾಗಿದೆ.

ಮಂಡ್ಯ ಕೃಷಿ ವಿಶ್ವವಿದ್ಯಾಲಯಕ್ಕೆ ಮೂಲಸೌಕರ್ಯ ಕಲ್ಪಿಸಲು 25ಕೋಟಿ ರೂ. ಒದಗಿಸಿ, ಪ್ರಸಕ್ತ ಸಾಲಿನಲ್ಲಿ ತರಗತಿಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ವಿಜಯಪುರದ ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಕೃಷಿ ಸಂಶೋಧನಾ ಕೇಂದ್ರ ಸ್ಥಾಪಿಸಲಾಗುವುದು. ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನಲ್ಲಿ ಹೊಸ ಕೃಷಿ ಕಾಲೇಜನ್ನು ಸ್ಥಾಪಿಸಲು ತಜ್ಞರಿಂದ ಕಾರ್ಯಸಾಧ್ಯತಾ ವರದಿ ಪಡೆದುಕೊಳ್ಳಲು ಪ್ರಸ್ತಾಪಿಸಿದೆ.

ತೋಟಗಾರಿಕೆ ಇಲಾಖೆ

ಬೆಳೆ ಪದ್ಧತಿ, ಸಂಸ್ಕರಣೆ ಮತ್ತು ಮೌಲ್ಯವರ್ಧನೆ ತಂತ್ರಜ್ಞಾನದಲ್ಲಾದ ಆಧುನೀಕರಣದ ಅನುಕೂಲವನ್ನು ಬೆಳೆಗಾರರಿಗೆ ತಲುಪಿಸುವ ಉದ್ದೇಶದಿಂದ ಸಮಗ್ರ ತೋಟಗಾರಿಕಾ ಅಭಿವೃದ್ಧಿ ಯೋಜನೆ-2 ಜಾರಿಗೊಳಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಯೋಜನೆಯ ಸಾಕಾರಕ್ಕೆ 95 ಕೋಟಿ ರೂ. ಅನುದಾನ ಒದಗಿಸಲಾಗಿದೆ.

ತೋಟಗಾರಿಕಾ ಬೆಳೆಗಳ ಬಗ್ಗೆ ನೈಜ ಸಮಯದ (Real Time) ಆಧಾರದ ಮೇಲೆ ರೈತರಿಗೆ ಮಾಹಿತಿ ಒದಗಿಸಲು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸ್ಪೇಸ್ ಸೈನ್ಸ್ ಟೆಕ್ನಾಲಜಿ ಮತ್ತು ಖಾಸಗಿ ಸಹಯೋಗದಲ್ಲಿ ಜ್ಞಾನ ಕೋಶ ಸ್ಥಾಪಿಸಲು ನಿರ್ಧರಿಸಲಾಗಿದೆ.

ರಾಜ್ಯದ 20 GI ಟ್ಯಾಗ್ ಹೊಂದಿರುವ ಬೆಳೆಗಳು ಹಾಗೂ ಇತರೆ ದೇಸಿ ತಳಿಗಳು ಕಣ್ಮರೆಯಾಗಿ ನಶಿಸಿ ಹೋಗುವುದನ್ನು ತಪ್ಪಿಸಲು ದೇಶಿ ತಳಿಗಳ ಬೀಜ ಬ್ಯಾಂಕ್ ಸ್ಥಾಪಿಸಲಾಗುವುದು. ಬ್ಯಾಡಗಿ ಮೆಣಸಿನಕಾಯಿ ತಳಿಯ ಸಂರಕ್ಷಣೆ ಮತ್ತು ಎಲೆ ಮುಟುರು ರೋಗ, ತ್ರಿಪ್ಸ್ ಇತ್ಯಾದಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಶೋಧನೆ ಕೈಗೊಳ್ಳಲಾಗುವುದು.

ಗದಗ ಜಿಲ್ಲೆಯ ಡಂಬಳದಲ್ಲಿ ತೋಟಗಾರಿಕಾ ಕಾಲೇಜನ್ನು ಸ್ಥಾಪಿಸಲು ತಜ್ಞರಿಂದ ಕಾರ್ಯಸಾಧ್ಯತಾ ವರದಿಯನ್ನು ಪಡೆದುಕೊಳ್ಳಲಾಗುವುದು. ಮಲೆನಾಡು ಜಿಲ್ಲೆಗಳಲ್ಲಿ ಎಲೆ ಚುಕ್ಕೆ ರೋಗದ ಬಾಧೆ ನಿಯಂತ್ರಿಸಲು ಸಸ್ಯ ಸಂರಕ್ಷಣಾ ಕ್ರಮಗಳಿಗಾಗಿ 62 ಕೋಟಿ ರೂ. ಒದಗಿಸಲಾಗಿದೆ. ತೆಂಗು ಬೆಳೆಯುವ ಪ್ರದೇಶಗಳಲ್ಲಿ ಕಪ್ಪು ತಲೆ ಹುಳುವಿನ ಬಾಧೆಯ ಕುರಿತು ವೈಜ್ಞಾನಿಕ ಸಮೀಕ್ಷೆ ನಡೆಸಿ, ಇದರ ಆಧಾರದ ಮೇಲೆ ಸಸ್ಯ ಸಂರಕ್ಷಣಾ ಕ್ರಮಗಳನ್ನು ಕೈಗೊಳ್ಳಲು ತೀರ್ಮಾನಿಸಿದೆ.

ರೇಷ್ಮೆ ಇಲಾಖೆ

ಅಂತಾರಾಷ್ಟ್ರೀಯ ದರ್ಜೆಯ ದ್ವಿತಳಿ ಕಚ್ಚಾ ರೇಷ್ಮೆಯ ದೇಶೀಯ ಬೇಡಿಕೆಯನ್ನು ಪೂರೈಸಲು ಮಧ್ಯಮ ವರ್ಗದ ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ 120 ಕೊನೆಗಳ ಸ್ವಯಂಚಾಲಿತ ರೀಲಿಂಗ್ ಘಟಕಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ರಾಮನಗರ ಮತ್ತು ಶಿಡ್ಲಘಟ್ಟ ಹೈ-ಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆಯ ಮೊದಲನೇ ಹಂತದ ಕಾಮಗಾರಿಗಳು ಮುಕ್ತಾಯಗೊಳ್ಳಲಿದ್ದು, ಪ್ರಸಕ್ತ ಸಾಲಿನಲ್ಲಿ ಎರಡನೇ ಹಂತದ ಕಾಮಗಾರಿಗಳನ್ನು 250 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು. ಮೈಸೂರು ಮತ್ತು ಸುತ್ತಮುತ್ತಲಿನ ಭಾಗದ ರೇಷ್ಮೆ ಬೆಳೆಗಾರರಿಗೆ ಅನುಕೂಲವಾಗುವಂತೆ ಮೈಸೂರಿನಲ್ಲಿ ರೇಷ್ಮೆಗೂಡಿನ ಮಾರುಕಟ್ಟೆಯನ್ನು NABARD ಸಹಯೋಗದಲ್ಲಿ ಸ್ಥಾಪಿಸುವುದಾಗಿ ಸಿಎಂ ಘೋಷಿಸಿದ್ದಾರೆ.

ಪಶುಸಂಗೋಪನೆ ಇಲಾಖೆ

ಜಾನುವಾರುಗಳ ಆಕಸ್ಮಿಕ ಸಾವಿನ ಸಂದರ್ಭದಲ್ಲಿ ರೈತರು ಅನುಭವಿಸುತ್ತಿರುವ ಸಂಕಷ್ಟ ನಿವಾರಣೆಗೆ ʼಅನುಗ್ರಹʼ ಯೋಜನೆ ಜಾರಿಗೆ ತರಲಾಗಿದೆ. ಹಸು, ಎಮ್ಮೆ ಮತ್ತು ಎತ್ತುಗಳಿಗೆ ಸದ್ಯ ನೀಡುತ್ತಿರುವ ಪರಿಹಾರದ ಮೊತ್ತವನ್ನು 10 ಸಾವಿರ ರೂ. ಗಳಿಂದ 15 ಸಾವಿರ ರೂ., ಕುರಿ/ಮೇಕೆಗಳಿಗೆ ನೀಡುತ್ತಿರುವ 5 ಸಾವಿರ ರೂ. ಗಳಿಂದ 7,500 ರೂ. ಹಾಗೂ 3-6 ತಿಂಗಳ ಕುರಿ/ಮೇಕೆ ಮರಿಗಳಿಗೆ ನೀಡಲಾಗುತ್ತಿರುವ ಮೊತ್ತವನ್ನು 3,500 ರೂ.ಗಳಿಂದ 5,000 ರೂ.ಗಳಿಗೆ ಹೆಚ್ಚಿಸುವುದಾಗಿ ಬಜೆಟ್ನಲ್ಲಿ ಘೋಷಿಸಲಾಗಿದೆ.

ಕಳೆದ ಎರಡು ವರ್ಷಗಳಲ್ಲಿ 60 ಹೊಸ ಪಶು ಚಿಕಿತ್ಸಾಲಯಗಳನ್ನು ಕಾರ್ಯಾರಂಭಗೊಳಿಸಲಾಗಿದ್ದು, 2025-26ನೇ ಸಾಲಿನಲ್ಲಿ 50 ನೂತನ ಪಶು ಚಿಕಿತ್ಸಾಲಯಗಳನ್ನು ಪ್ರಾರಂಭಿಸಲಾಗುವುದು. ದೇಶಿ ದನದ ತಳಿಗಳಾದ ಹಳ್ಳಿಕಾರ್, ಕಿಲಾರಿ, ಅಮೃತ್ ಮಹಲ್ ಹಾಗೂ ಬಂಡೂರು ಕುರಿ ತಳಿಯ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ ಎರಡು ಕೋಟಿ ರೂ. ಒದಗಿಸಲಾಗುವುದು. ನಮ್ಮ ಸರ್ಕಾರವು ಅಸ್ತಿತ್ವಕ್ಕೆ ಬಂದ ನಂತರ ʼನಂದಿನಿʼ ಬ್ರ್ಯಾಂಡ್‌ ಮಾರುಕಟ್ಟೆಯನ್ನು ವಿಸ್ತರಿಸಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾರಾಜಿಸುವಂತೆ ಮಾಡಿದೆ. 2024-25ನೇ ಸಾಲಿನಲ್ಲಿ ಪ್ರತಿ ಒಂದು ಕೋಟಿಗೂ ಹೆಚ್ಚು ಲೀಟರ್ ಹಾಲನ್ನು ಶೇಖರಿಸಲಾಗಿದೆ ಎಂದು ಹೇಳಿದ್ದಾರೆ.

Spread positive news

Leave a Reply

Your email address will not be published. Required fields are marked *