ತೊಗರಿ ಬೇಳೆಗೆ ಸರ್ಕಾರದಿಂದ ರೂ.450 ಪ್ರೋತ್ಸಾಹಧನ ಘೋಷಣೆ

ತೊಗರಿ ಬೆಳೆಗಾರರಿಗೆ ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಕೇಂದ್ರ‌ ಸರ್ಕಾರದ ನಿಗದಿತ ಬೆಂಬಲ ಬೆಲೆ ಜೊತೆಗೆ ರಾಜ್ಯ ಸರ್ಕಾರ ಬೋನಸ್ 450 ರೂ.ಗಳ ಸಹಾಯಧನ ನೀಡಲು ನಿರ್ಧರಿಸಿದ್ದು. ಆರ್ಥಿಕ ಇಲಾಖೆಯ ಅನುಮೋದನೆ ದೊರೆತಿದೆ.

ಬರದಿಂದ ತತ್ತರಿಸಿದ್ದ ತೊಗರಿ ಬೆಳೆಗಾರರಿಗೆ ದರ ಕೈ ಹಿಡಿದಿರುವುದು ಈ ಬಾರಿಯ ವಿಶೇಷ. ರಾಜ್ಯದಲ್ಲಿಅತ್ಯಂತ ಹೆಚ್ಚಿನ ತೊಗರಿಯನ್ನು ಜಿಲ್ಲೆಯಲ್ಲಿಬೆಳೆಯಲಾಗುತ್ತದೆ. ಆದರೆ, ಈ ಬಾರಿ ಬರದ ಹಿನ್ನೆಲೆ ಗರಿಷ್ಠ ಪ್ರಮಾಣದಲ್ಲಿ ತೊಗರಿ ಹಾಳಾಗಿತ್ತು.

ಇದು ತೊಗರಿ ನಾಡಿನ ರೈತರಿಗೆ ಗಾಯದ ಮೇಲೆ ಬರೆ ಎಳೆದಂತೆ ಮಾಡಿತ್ತು. ಆದರೀಗ ತೊಗರಿ ಬೆಲೆ ಏರಿಕೆ ಕಾಣುತ್ತಿರುವುದು ರೈತರ ಮೊಗದಲ್ಲಿ ಒಂದಷ್ಟು ಸಂತಸ ಕಾಣುವಂತೆ ಮಾಡಿದೆ.

2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್ಎಕ್ಯೂ ಗುಣಮಟ್ಟದ ತೊಗರಿ ಖರೀದಿಗೆ ಸಂಬಂಧಿಸಿದಂತೆ. ಕೇಂದ್ರ ಸರ್ಕಾರದ ಬೆಂಬಲ ಬೆಲೆ 7,550 ರೂ. ಜೊತೆಗೆ ರಾಜ್ಯ ಸರ್ಕಾರದ ಪ್ರೋತಾಹ ಧನ 450 ರೂ.
ಸೇರಿ. ಪ್ರತಿ ಕ್ವಿಂಟಾಲ್ಗೆ ಒಟ್ಟು 8,000 ರೂ. ನೀಡುವುದಾಗಿ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ. ಶಿವಾನಂದ ಪಾಟೀಲ್ ಕಳೆದ ಜನವರಿಯಲ್ಲಿ ಭರವಸೆ ನೀಡಿದ್ದರು.

ತೊಗರಿಗೆ ಕರ್ನಾಟಕ ಸರ್ಕಾರದಿಂದ ಕನಿಷ್ಠ ಬೆಂಬಲ ಬೆಲೆ ಘೋಷಣೆ ಮಾಡಿದೆ. ಕೇಂದ್ರ ಸರ್ಕಾರ ಈಗಾಗಲೇ 7,550 ರೂ. ನಿಗದಿ ಪಡಿಸಿತ್ತು. ಕೇಂದ್ರ, ರಾಜ್ಯದ ನೆರವು ಸೇರಿ ಕ್ವಿಂಟಾಲ್‌ಗೆ 8,000 ರೂ. ಲಭ್ಯವಾಗಲಿದೆ.

ಇತ್ತ ಬೆಂಬಲ ಬೆಲೆಯಡಿ ಶೇಂಗಾ ಖರೀದಿ ಅವಧಿಯನ್ನು ಫೆಬ್ರವರಿ 15 ರವರೆಗೆ ವಿಸ್ತರಿಸಲಾಗಿದೆ. ಈ ಬಗ್ಗೆ ವಿವರ ಇಲ್ಲಿದೆ.

ರಾಜ್ಯದ ಪ್ರಮುಖ ತೊಗರಿ ಬೆಳೆಯುವ ಜಿಲ್ಲೆಗಳಾದ ಕಲಬುರಗಿ, ಯಾದಗಿರಿ, ಬೀದರ್‌, ರಾಯಚೂರು, ವಿಜಯಪುರ. ಕೊಪ್ಪಳ, ಬಳ್ಳಾರಿ, ವಿಜಯನಗರ, ಬಾಗಲಕೋಟೆ, ಬೆಳಗಾವಿ, ಚಿತ್ರದುರ್ಗ, ಕೋಲಾರ ಹಾಗೂ ಚಿಕ್ಕಬಳ್ಳಾಪುರ. ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಭಾಗದಲ್ಲಿಅಂದಾಜು 330 ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲು ಕ್ರಮ ವಹಿಸಲಾಗಿದೆ.

ರೈತ ಬಾಂಧವರು ತಮ್ಮ ಹತ್ತಿರದ ಪಿಎಸಿಎಸ್‌, ಎಫ್‌ಪಿಒ, ಟಿಎಪಿಸಿಎಂಎಸ್‌ಗಳಿಗೆ ಭೇಟಿ ನೀಡಿ ನೋಂದಣಿ ಮಾಡಿ. ಬೆಂಬಲ ಬೆಲೆ ಯೋಜನೆ ಹಾಗೂ ರಾಜ್ಯ ಸರಕಾರದ ಪ್ರೋತ್ಸಾಹ ಧನದ ಸದುಪಯೋಗ ಪಡೆದುಕೊಳ್ಳಲು ಕೋರಿದೆ.

ಖರೀದಿ ಅವಧಿ ಮೇ 1ಕ್ಕೆ ಅಂತ್ಯವಾಗಲಿದ್ದು, ನಿಗದಿತ ಖರೀದಿ ಪ್ರಮಾಣ ಇನ್ನೂ ಆಗದ. ಕಾರಣ ಖರೀದಿ ಅವಧಿ ವಿಸ್ತರಣೆ ಮಾಡಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದ್ದು, ಒಂದು ತಿಂಗಳು ವಿಸ್ತರಣೆ ಮಾಡಲಾಗಿದೆ.

ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆಯಲ್ಲಿ 3.06 ಲಕ್ಷ ಮೆಟ್ರಿಕ್ ಟನ್ ತೊಗರಿ ಖರೀದಿಗೆ ಅನುಮತಿ ನೀಡಿದ್ದು. ಇದುವರೆಗೆ ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ 1.83 ಲಕ್ಷ ಮೆಟ್ರಿಕ್ ಟನ್ ಖರೀದಿ ಮಾಡಲಾಗಿದೆ.

ಇನ್ನೂ 2.70 ಲಕ್ಷ ಮೆಟ್ರಿಕ್ ಟನ್ ಪ್ರಮಾಣದಷ್ಟು ತೊಗರಿಯನ್ನು ರೈತರು ನೋಂದಣಿ ಮಾಡಿಸಿಕೊಂಡಿದ್ದು. ಇನ್ನೂ ಸುಮಾರು 93 ಸಾವಿರ ಮೆಟ್ರಿಕ್ ಟನ್ ಖರೀದಿ ಮಾಡಬೇಕಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಸಂಕ್ರಾಂತಿ ನಂತರ ತೊಗರಿ ದರದಲ್ಲಿಏರಿಕೆ ಕಾಣುತ್ತ ಸಾಗಿದೆ. ಜ.19 ರಂದು ಕಲಬುರಗಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ 10,323 ರೂ. ಮಾರಾಟ ಕಂಡಿದೆ. ಇದು 2024ರ ಗರಿಷ್ಠ ದರವಾಗಿದೆ. ಇದು ಹೀಗೆ ಮುಂದುವರಿಯುತ್ತದೆ ಎಂದು ರೈತರು ಖುಷಿಯಲ್ಲಿದ್ದಾರೆ.

ಇದರ ಜತೆಗೆ ಮಾರುಕಟ್ಟೆಗೆ ತೊಗರಿ ಆವಕ ಕೂಡ ಹೆಚ್ಚಳ ಕಂಡಿದೆ. ದರ ಮತ್ತೆ ಕಡಿಮೆಯಾಗುವ ಆತಂಕವೂ ಇದೆ. ಆದರೆ ಸದ್ಯದ ಮಟ್ಟಿಗೆ ಖುಷಿ ಮೂಡಿದ್ದು, ತೊಗರಿ ಮಾರಾಟ ಜೋರಾಗಿದೆ.

Spread positive news

Leave a Reply

Your email address will not be published. Required fields are marked *