ರೈತರೇ ಪೂರ್ವ ಮುಂಗಾರು ಮಳೆ ಅಬ್ಬರ ಮುಂದುವರಿದಿದೆ. ಕರಾವಳಿ ಜಿಲ್ಲೆಗಳು ಹಾಗೂ ಒಳನಾಡಿನ ಜಿಲ್ಲೆಗಳಾದ್ಯಂತ ಆಗಾಗ ಭಾರೀ ಮಳೆ ಆಗುತ್ತಿದೆ. ಗುಡುಗು ಸಹಿತ ಅತ್ಯಧಿಕ ಮಳೆ ಆರ್ಭಟ ಇಂದಿನಿಂದ ಮುಂದಿನ 05 ದಿನಗಳವರೆಗೆ (ಮೇ 23) ಕಂಡು ಬರಲಿದೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಉಳುವರೆ ಗ್ರಾಮದಲ್ಲಿ ಸಿಡಿಲು ಬಡಿದು ರೈತನೊಬ್ಬರು ಮೃತಪಟ್ಟಿದ್ದಾರೆ. ಉಳುವರೆ ಗ್ರಾಮದ ರೈತ ತಮ್ಮಣ್ಣಿ ಅನಂತ ಗೌಡ (65) ಮೃತರು. ಸೋಮವಾರ ಸಂಜೆ ಮನೆ ಬಳಿ ಸಿಡಿಲುಬಡಿದು ರೈತ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಉತ್ತರ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್
ಜಿಲ್ಲೆಯಲ್ಲಿ ಮೂರ್ನಾಲ್ಕು ದಿನಗಳಿಂದ ಆಗಾಗ ಬಿರುಸಿನ ಮಳೆ ಬೀಳುತ್ತಿದೆ. ಕರಾವಳಿ ಭಾಗದ ತಾಲೂಕುಗಳಲ್ಲಿ ಮಳೆ ಪ್ರಮಾಣ ಹೆಚ್ಚಿದ್ದು, ಜಿಲ್ಲೆಯಾದ್ಯಂತ ದಟ್ಟ ಮೋಡ ಕವಿದ ವಾತಾವರಣವಿದೆ.
ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಆರ್ಭಟ ಜೋರಾಗಿದ್ದು, ಮುಂದಿನ ಮೂರು ದಿನ ರಾಜ್ಯದ ಗಾಳಿ ಸಹಿತ ಭಾರೀ ಮಳೆಯಾಗಲಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದ ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಮಳೆ ಅಬ್ಬರಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಮಂಗಳವಾರ ಆರೆಂಜ್ ಮತ್ತು ಬುಧವಾರ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿ ಭಾಗದಲ್ಲಿ ಮೇ 25ರವರೆಗೆ ಬಿರುಗಾಳಿ ಸಹಿತ ಮಳೆ ಬೀಳಲಿದೆ. ಮೇ 23ರವರೆಗೆ ಪ್ರತಿ ಗಂಟೆಗೆ ಸರಾಸರಿ 35 ರಿಂದ 45 ಕಿ.ಮೀ ವೇಗದ ಗಾಳಿ ಬೀಸಲಿದ್ದು, ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಬಾರದು’ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಸಿಡಿಲಿನಿಂದ ತಪ್ಪಿಸಿಕೊಳ್ಳುವುದು ಹೇಗೆ?
1. ಗುಡುಗು-ಮಿಂಚು ಬರಲಿದೆ ಎಂದು ಗೊತ್ತಾದಾಗ ನೀವು ಬಯಲಿನಲ್ಲಿದ್ದರೆ. ತಕ್ಷಣವೇ ಇರುವುದರಲ್ಲಿ ತಗ್ಗು ಪ್ರದೇಶಕ್ಕೆ ಹೋಗಿ ಕುಳಿತುಕೊಳ್ಳಿ.ನಿಲ್ಲ ಬೇಡಿ.
2. ತಗ್ಗು ಪ್ರದೇಶ ಇಲ್ಲದೆ ಬಯಲಿನಲ್ಲೆ ಇರಬೇಕಾದರೆ. ನಿಮ್ಮ ತಲೆಯನ್ನು ಮೊಣಕಾಲುಗಳ ನಡುವೆ ಹುದುಗಿಸಿಕೊಳ್ಳಿ, ಇದು ಮಿಂಚಿನಿಂದ ಮೆದುಳಿಗೂ, ಹೃದಯಕ್ಕೂ ಆಗುವ ಹಾನಿಯನ್ನು ತಪ್ಪಿಸುತ್ತದೆ.
3. ಮರಗಳಿದ್ದ ಪ್ರದೇಶದಲ್ಲಿ ನೀವು ಇದ್ದರೆ, ಅಲ್ಲಿಂದ ಬೇಗನೆ ಹೊರಬರುವುದು ಒಳ್ಳೆಯದು. (ಯಾಕೆಂದರೆ ಸಿಡಿಲು ಮೋಡದಿಂದ ಭೂಮಿಗೆ ಹರಿಯಲು ಮರದಂತಹ ಹಸಿ, ಒದ್ದೆ ವಸ್ತುವನ್ನೇ ಆರಿಸಿಕೊಳ್ಳುತ್ತದೆ.)
4. ಎತ್ತರದ ಗುಡ್ಡದ ಮೇಲಿದ್ದರೆ ತಗ್ಗಿಗೆ ಇಳಿರಿ.
5. ಕುರಿ ಮಂದೆ ಅಥವಾ ಜಾನುವಾರುಗಳ ಮಧ್ಯ ನಿಂತಿದ್ದರೆ, ಅವುಗಳ ಮಧ್ಯದಲ್ಲಿ ಬಗ್ಗಿ ಕುಳಿತುಕೊಳ್ಳಿ, ( ಯಾಕೆಂದರೆ ಮಿಂಚು ಪ್ರಾಣಿಗಳಿಗಿಂತ ಎತ್ತರವಿರುವ ಮನುಷನನ್ನೇ ಆರಿಸಿಕೊಳ್ಳುತ್ತದೆ.)
6. ಕೆರೆಯಲ್ಲಿ ಈಜುವುದು, ಸ್ನಾನ ಮಾಡುವುದು ಬೇಡ, ನೀರಿನಲ್ಲಿದ್ದರೆ ತಕ್ಷಣ ಹೊರಬನ್ನಿ .
7. ವಿದ್ಯುತ್ ಕಂಬ, ಎಲಕ್ಟ್ರಿಕಲ್ ಟವರ್, ಮೊಬೈಲ್ ಟವರ್, ಟ್ರಾನ್ಸ್ ಫಾರ್ಮರ್ ಮುಂತಾದವುಗಳ ಹತ್ತಿರವೂ ಇರಬೇಡಿ.
8. ತಂತಿಬೇಲಿ, ಭಟ್ಟ ಒಣಹಾಕುವ ತಂತಿ, ಇವುಗಳಿಂದ ದೊರವಿರಿ.
9. ಮಳೆ ಬರುವ ಸಮಯದಲ್ಲಿ ಮನೆಯ ಟೆರೇಸನ್ನು ಸ್ವಚ್ಛ ಮಾಡುವ ಸಾಹಸ ಬೇಡ.
10. ಮನೆಯ ಕಿಟಕಿಯ ಬಳಿ ನಿಲ್ಲುವುದಕ್ಕಿಂತಲೂ ಮನೆಯ ಮಧ್ಯದಲ್ಲಿರುವುದು ಸುರಕ್ಷಿತ.
11. ಗುಡುಗು-ಸಿಡಿಲಿನ ಸಂದರ್ಭದಲ್ಲಿ ಫೋನ್ ಮಾಡಬೇಡಿ. ಅದನ್ನು ಚಾರ್ಜ್ ಮಾಡುವ ಸಹಸವೂ ಬೇಡ.
12. ಕಾರಿನಲ್ಲಿ ಪ್ರಯಾಣಿಸುತ್ತಿದ್ದರೆ ಗಾಜನ್ನು ಮುಚ್ಚಿಕೊಳ್ಳಿ. ಕಾರಿನ ಬಾಡಿಯನ್ನು ಸಾಧ್ಯವಾದಷ್ಟು ಸ್ಪರ್ಶಿಸದೆ ಮಧ್ಯದಲ್ಲಿ ಕುಳಿತುಕೊಳ್ಳುವುದು ಒಳ್ಳೆಯದು.
13. ಕಂಪ್ಯೂಟರ್ ಗಳಿಂದ ದೂರ ಇರಿ.
14. ಮನೆಯ ಕಾoಕ್ರೇಟ್ ಗೋಡೆಗಳನ್ನು ಸ್ಪೆರ್ಶಿಸದೆ ಕೋಣೆಯ ಮಧ್ಯದಲ್ಲಿದ್ದರೆ ಹೆಚ್ಚು ಸುರಕ್ಷಿತ.
ಮರಗಳಿದ್ದ ಪ್ರದೇಶದಲ್ಲಿ ನೀವು ಇದ್ದರೆ ಅಲ್ಲಿಂದ ಬೇಗನೆ ಹೊರಬರುವುದು ಒಳ್ಳೆಯದು. ಏಕೆಂದರೆ ಸಿಡಿಲು ಮೋಡದಿಂದ ಭೂಮಿಗೆ ಹರಿಯಲು ಮರದಂತಹ ಹಸಿ, ಒದ್ದೆ ವಸ್ತುವನ್ನೇ ಆರಿಸಿಕೊಳ್ಳುತ್ತದೆ.
- ಎತ್ತರದ ಗುಡ್ಡದ ಮೇಲಿದ್ದರೆ ತಗ್ಗಿಗೆ ಇಳಿರಿ.ಕುರಿ ಮಂದೆ ಅಥವಾ ಜಾನುವಾರುಗಳ ಮಧ್ಯ ನಿಂತಿದ್ದರೆ ಅವುಗಳ ಮಧ್ಯದಲ್ಲಿ ಬಗ್ಗಿ ಕುಳಿತುಕೊಳ್ಳಿ. ಏಕೆಂದರೆ ಮಿಂಚು ಪ್ರಾಣಿಗಳಿಗಿಂತ ಎತ್ತರವಿರುವ ಮನುಷನನ್ನೇ ಆರಿಸಿಕೊಳ್ಳುತ್ತದೆ.
- ಕೆರೆಯಲ್ಲಿ ಈಜುವುದು, ಸ್ನಾನ ಮಾಡುವುದು ಬೇಡ, ನೀರಿನಲ್ಲಿದ್ದರೆ ತಕ್ಷಣ ಹೊರಬನ್ನಿ.
- ವಿದ್ಯುತ್ ಕಂಬ, ಏಲೆಕ್ಟ್ರಿಕಲ್ ಟವರ್, ಮೊಬೈಲ್ ಟವರ್, ಟ್ರಾನ್ಸ್ ಫಾರ್ಮರ್ ಮುಂತಾದವುಗಳ ಹತ್ತಿರವೂ ಇರಬೇಡಿ.
- ತಂತಿಬೇಲಿ, ಬಟ್ಟೆ ಒಣಹಾಕುವ ತಂತಿ, ಇವುಗಳಿಂದ ದೊರವಿರಿ
- ಮಳೆ ಬರುವ ಸಮಯದಲ್ಲಿ ಮನೆಯ ಟೆರೇಸ್ ಅನ್ನು ಸ್ವಚ್ಛ ಮಾಡುವ ಸಾಹಸ ಬೇಡ.
- ಮನೆಯ ಕಿಟಕಿಯ ಬಳಿ ನಿಲ್ಲುವುದಕ್ಕಿಂತಲೂ ಮನೆಯ ಮಧ್ಯದಲ್ಲಿರುವುದು ಸುರಕ್ಷಿತ.
- ಗುಡುಗು-ಸಿಡಿಲಿನ ಸಂದರ್ಭದಲ್ಲಿ ಫೋನ್‌ನಲ್ಲಿ ಮಾತನಾಡಬೇಡಿ. ಅದನ್ನು ಚಾರ್ಜ್ ಮಾಡುವ ಸಹಸವೂ ಬೇಡ.
- ಕಾರಿನಲ್ಲಿ ಪ್ರಯಾಣಿಸುತ್ತಿದ್ದರೆ ಗಾಜನ್ನು ಮುಚ್ಚಿಕೊಳ್ಳಿ. ಕಾರಿನ ಬಾಡಿಯನ್ನು ಸಾಧ್ಯವಾದಷ್ಟು ಸ್ಪರ್ಶಿಸದೆ ಮಧ್ಯದಲ್ಲಿ ಕುಳಿತುಕೊಳ್ಳುವುದು ಒಳ್ಳೆಯದು.
- ಕಂಪ್ಯೂಟರ್, ಲ್ಯಾಪ್‌ಟಾಪ್‌ಗಳಿಂದ ದೂರ ಇರಿ.
- ಮನೆಯ ಕಾoಕ್ರೇಟ್ ಗೋಡೆಗಳನ್ನು ಸ್ಪರ್ಶಿಸದೆ, ಕೋಣೆಯ ಮಧ್ಯದಲ್ಲಿದ್ದರೆ ಹೆಚ್ಚು ಸುರಕ್ಷಿತ ಎಂದುರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಪ್ರಕಟಣೆಯಲ್ಲಿ ತಿಳಿಸಿದೆ.
200 ಮಿ.ಮೀ.ಗೂ ಹೆಚ್ಚು ಮಳೆ:
ರೆಡ್ ಅಲರ್ಟ್ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮೇ 21 ಮತ್ತು 22ರಂದು ಅತೀ ಹೆಚ್ಚು ಮಳೆ ಅಂದರೆ ಗರಿಷ್ಠ 200 ಮಿಲಿ ಮೀಟರ್ ಗೂ ಹೆಚ್ಚು ಮಳೆ ಬರಲಿರುವ ಹಿನ್ನೆಲೆಯಲ್ಲಿ ಮೂರು ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’ ಘೋಷಿಸಲಾಗಿದೆ.
ಇನ್ನೂ ಮೇ 21ರವರೆಗೆ ಕರಾವಳಿ ಈ ಜಿಲ್ಲೆಗಳು ಸೇರಿದಂತೆ ಬೆಳಗಾವಿ, ಬಾಗಲಕೋಟ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆ ಆಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಈ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ನೀಡಿದೆ.
ಚಿಕ್ಕಬಳ್ಳಾಪುರದಲ್ಲಿ ಮೂರು ಗಂಟೆಗೂ ಹೆಚ್ಚು ಕಾಲ ಸುರಿದ ಭಾರೀ ಮಳೆಗೆ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ, ನೂರಾರು ಮನೆಗಳಲ್ಲಿ ಅವಾಂತರ ಸೃಷ್ಟಿಯಾಗಿದೆ. ಗುಡಿಬಂಡೆ ತಾಲೂಕಿನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಂಡು ಹೂವುಗಳು ನಾಶವಾಗಿವೆ.
ಕಲಬುರಗಿಯಲ್ಲಿ ಭಾರೀ ಮಳೆಯಿಂದ ಬಾಳೆ ತೋಟಗಳಿಗೆ ಭಾರೀ ಹಾನಿಯಾಗಿದ್ದು, ನೂರಾರು ಎಕರೆಯಲ್ಲಿ ಬೆಳೆದ ಲಕ್ಷಕ್ಕೂ ಹೆಚ್ಚು ಬಾಳೆ ಗಿಡಗಳು ಹಾನಿಗೊಳಗಾಗಿವೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ, ಕುಮಟಾ ಮತ್ತು ಗೋಕರ್ಣದಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಭಾರೀ ಮಳೆ ಸುರಿದಿದ್ದು, ಕೆಲವೆಡೆ ವಿದ್ಯುತ್ ಮತ್ತು ದೂರವಾಣಿ ಸಂಪರ್ಕ ವ್ಯತ್ಯಯಗೊಂಡಿದೆ.