ಈ ಬಾರಿ ಮುಂಗಾರು ಹೊಸ ದಾಖಲೆ ಮಾಡಲಿದೆ, ಏನಿದರ ವಿಶೇಷ ನೋಡಿ

ಈ ಬಾರಿ ಪ್ರಕೃತಿ ಬೇಸಿಗೆಯಲ್ಲೇ ಮಳೆ ನೀಡುವ ಮೂಲಕ ಉತ್ತಮ ಮಳೆಯ ಸೂಚನೆ ನೀಡಿದೆ. ಇದಕ್ಕೆ ಇನ್ನೊಂದು ಸೇರ್ಪಡೆ ಎಂಬಂತೆ ಈ ಬಾರಿ ಮುಂಗಾರು ಕೂಡಾ ಹೊಸ ದಾಖಲೆ ಮಾಡಲಿದೆ. ಅದೇನದು ಈ ವರದಿ ನೋಡಿ. ಹವಾಮಾನ ವರದಿಗಳು ಈಗಾಗಲೇ ಹೇಳಿದಂತೆ ಈ ಬಾರಿ ಮುಂಗಾರು ಮಳೆ ಎಂದಿಗಿಂತ ಮೊದಲೇ ಕೇರಳ ಪ್ರವೇಶ ಮಾಡಲಿದೆ.

ಈ ಮೊದಲು ಮೇ 27 ರಂದು ಮುಂಗಾರು ಪ್ರವೇಶ ಮಾಡಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಈಗ ಇನ್ನೂ ಮೊದಲು ಅಂದರೆ ಮೇ 23 ಅಥವಾ 24 ರಂದೇ ಮುಂಗಾರು ಆಗಮನವಾಗಲಿದೆ ಎಂದು ಲೇಟೆಸ್ಟ್ ಹವಾಮಾನ ವರದಿಗಳು ಹೇಳಿವೆ.

ತುಮಕೂರು, ರಾಮನಗರ, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರುನಗರ, ಬೆಂಗಳೂರು ಗ್ರಾಮಾಂತರ, ಬೀದ‌ರ್, ವಿಜಯಪುರ, ಕೊಪ್ಪಳ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಾವಣಗೆರೆ, ಮೈಸೂರು ಜಿಲ್ಲೆಗಳಿಗೆ ಮುಂದಿನ ಎರಡು ದಿನಕ್ಕೆ ‘ಆರೆಂಜ್ ಅಲರ್ಟ್’ ನೀಡಲಾಗಿದೆ.

ಮೇ 24 ರಿಂದ ಐದು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಧಾರವಾಡದಲ್ಲಿ ಮುಂದಿನ 2 ದಿನಗಳಲ್ಲಿ ಕೇರಳದಲ್ಲಿ ಮಾನ್ಸೂನ್ ಪ್ರಾರಂಭವಾಗುವ ಸಾಧ್ಯತೆ ಇದೆ ದಕ್ಷಿಣ ಅರೇಬಿಯನ್ ಸಮುದ್ರದ ಕೆಲವು ಭಾಗಗಳು ಮಾಲ್ಡೀವ್ಸ್ ಮತ್ತು ಕೊಮೊರಿನೇರಿಯಾದ ಉಳಿದ ಭಾಗಗಳು, ಲಕ್ಷದ್ವೀಪದ ಕೆಲವು ಭಾಗಗಳು, ಕೇರಳ, ಕರ್ನಾಟಕದ ಕೆಲವು ಭಾಗಗಳು ಮತ್ತು ತಮಿಳುನಾಡಿನ ಕೆಲವು ಭಾಗಗಳು, ಬಂಗಾಳದ ದಕ್ಷಿಣ ಮತ್ತು ಮಧ್ಯ ಕೊಲ್ಲಿ, ಬಂಗಾಳದ ಉತ್ತರ ಕೊಲ್ಲಿ ಮತ್ತು ಈಶಾನ್ಯ ರಾಜ್ಯಗಳ ಕೆಲವು ಭಾಗಗಳಲ್ಲಿ ಇದೇ ಅವಧಿಯಲ್ಲಿ ಪರಿಸ್ಥಿತಿಗಳು ಮಾನ್ಸೂನ್ ಮಳೆಗೆ ಅನುಕೂಲಕರವಾಗುವ ಸಾಧ್ಯತೆಯಿದೆ.

ಈ ವಾರಂತ್ಯದಿಂದ ಕರ್ನಾಟಕಕ್ಕೂ ಮಳೆಯಾಗುವ ನಿರೀಕ್ಷೆಯಿದೆ. ಈ ಮೂಲಕ ಮುಂಗಾರು ಹೊಸ ದಾಖಲೆ ಮಾಡಲಿದೆ. ಸಾಮಾನ್ಯವಾಗಿ ಜೂನ್ ಮೊದಲ ವಾರದಲ್ಲಿ ಮುಂಗಾರು ಕರ್ನಾಟಕಕ್ಕೆ ಪ್ರವೇಶವಾಗುತ್ತದೆ. ಆದರೆ ಈ ಬಾರಿ ಮೇ ತಿಂಗಳಲ್ಲೇ ಆಗಮನವಾಗುವ ಮೂಲಕ ಹೊಸ ದಾಖಲೆಯಾಗಲಿದೆ.

ಕಳೆ 16 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಮುಂಗಾರು ಮೇ ತಿಂಗಳಲ್ಲಿ ಪ್ರವೇಶ ಮಾಡುವ ಮೂಲಕ ದಾಖಲೆ ಮಾಡುತ್ತಿದೆ. ಈ ಬಾರಿ ಸೆಪ್ಟೆಂಬರ್ ವರೆಗೂ ಉತ್ತಮ ಮಳೆ ನಿರೀಕ್ಷಿಸಲಾಗಿದೆ. ಅರೆಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತು, ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಅಬ್ಬರ ಕಡಿಮೆಯಾಗಿರುವುದರಿಂದ ಈ ಬಾರಿ ಬೇಗ ಮಳೆಯಾಗಲಿದೆ ಎಂದು ಹೇಳಲಾಗಿದೆ. ಬೇಸಿಗೆ ಮಳೆಯೂ ಧಾರಾಕಾರವಾಗಿ ಸುರಿದಿದ್ದರಿಂದ ಈ ವರ್ಷ ಕಳೆದ ವರ್ಷಕ್ಕೆ ಹೋಲಿಸಿದರೆ ನೀರಿನ ಸಮಸ್ಯೆ ಕಡಿಮೆಯಾಗಿತ್ತು ಎನ್ನಬಹುದು.

ರೈತರಿಗೆ ಸಮಗ್ರ ಕೃಷಿ ಪದ್ಧತಿ, ಹನಿ ನೀರಾವರಿ ಅಳವಡಿಕೆ ಹಾಗೂ ವಿವಿಧ ಬೆಳೆಗಳ ಕೋಲ್ಲೋತ್ತರ ಚರ್ಚೆ ಮಾಡಬೇಕಿದೆ. ಅದರಲ್ಲೂ ಮಣ್ಣಿನ ಫಲವತ್ತತೆಯಲ್ಲಿ, ನೀರಿನ ಸೌಲಭ್ಯದಲ್ಲಿ ಜಿಲ್ಲೆಯು ಶ್ರೀಮಂತಿಕೆಯನ್ನು ಹೊಂದಿದೆ. ಅದರ ಸದುಪಯೋಗ ಪಡೆದುಕೊಂಡು ಪ್ರತಿಯೊಬ್ಬ ರೈತರು ಒಂದೇ ರೀತಿಯ ಬೆಳೆಗಳನ್ನು ಬೆಳೆಯದೆ ಇತರೆ ಲಾಭದಾಯಕ ಬೆಳೆಗಳನ್ನು ಸಹ ಬೆಳೆಯಲು ರೈತರು ಮುಂದೆ ಬರಬೇಕು.

ರೈತರು ಉದ್ದಿಮೆದಾರರಾಗಬೇಕು, ಆರ್ಥಿಕವಾಗಿ ಸದೃಢರಾಗಬೇಕು ಎಂಬುದು ಕಾರ್ಯಾಗಾರದ ಮುಖ್ಯ ಉದ್ದೇಶವಾಗಿದ್ದು, ಯಾವ ಮಣ್ಣಿಗೆ ಯಾವ ಬೆಳೆ ಬೆಳೆಯಬೇಕು, ಯಾವ ವರ್ತಮಾನದಲ್ಲಿ ಯಾವ ಬೆಳೆ ಉತ್ತಮ, ಯಾವುದು ಲಾಭದಾಯಕ ಎಂಬುದನ್ನು ಅರಿತು ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳಿ ಎಂದರು.

ಮೀನು ಅರೋಗ್ಯಕರ ಆಹಾರವಾಗಿದೆ ಆದರೆ ಜಿಲ್ಲೆಯಲ್ಲಿ ಮೀನುಗಾರಿಕೆ ಹಾಗೂ ಮೀನು ಮಾರಾಟ ಕಡಿಮೆಯಿದೆ. ರೈತ ಮಹಿಳೆಯರಿಗೆ ಸ್ವ-ಸಹಾಯ ಸಂಘಗಳ ಮೂಲಕ ಮೀನುಗಾರಿಕೆ ಕುರಿತು ತರಬೇತಿಗಳನ್ನು ನೀಡಿ ಹಾಗೂ ಮೀನು ಮಾರಾಟ ಮಳಿಗೆಗಳನ್ನು ತೆರೆಯಲು ಲೈಸನ್ಸ್ ಸೇರಿತಂತೆ ಇತರೆ ಸಹಾಯಗಳನ್ನು ದೊರಕಿಸಿಕೊಡಲು ಮುಂದಾಗಬೇಕಿದೆ.

Spread positive news

Leave a Reply

Your email address will not be published. Required fields are marked *