ರೈತರೇಇವತ್ತು ಮುಂಗಾರು ಮಳೆ ಆರಂಭ ಜೋರಾಗಿದೆ. ಮುಂಗಾರು ಮಳೆ ಈಗಾಗಲೇ ಪ್ರವೇಶ ಪಡೆದಿದೆ. ಎಲ್ಲಾಕಡೆ ವರುಣನ ಆರ್ಭಟ ಜೋರಾಗಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್, ತೊರೆ, ಹಳ್ಳ, ನದಿಗಳಲ್ಲಿ ನೀರಿನ ಮಟ್ಟ ಏರಿಕೆ ಗಾಳಿ-ಮಳೆಯಿಂದಾಗಿ ಹಲವೆಡೆ ವಿದ್ಯುತ್ ವ್ಯತ್ಯಯ 31ರವರೆಗೆ ಮಳೆ ನಿಲ್ಲಲ್ಲ.
ಒಂದು ವಾರ ಮುಂಚೆಯೇ ಕೇರಳದ ಮೂಲಕ
ನೈಋತ್ಯ ಮುಂಗಾರು ಕರ್ನಾಟಕದ ಕರಾವಳಿಯನ್ನು ಪ್ರವೇಶ ಮಾಡಿದ್ದು, ರಾಜ್ಯದ ಬಹುತೇಕ ಎಲ್ಲ ಭಾಗಗಳ ಮೇಲೂ ಇದರ ಪರಿಣಾಮ ಆಗುತ್ತಿದೆ. ಒಂದು ವಾರ ರಾಜ್ಯದ ಹಲವು ಕಡೆ ವ್ಯಾಪಕವಾಗಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೇ 26ರಿಂದ ಮೇ 31 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸ ಲಿದ್ದು, ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಯಪುರ, ಗದಗ, ಬೀದರ್, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯ ಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಗಂಟೆಗೆ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಾ ನಿರಂತರ ಮಳೆಯಾಗುವ ಸಾಧ್ಯತೆ ಇದೆ.
ಮಳೆಯು ಜೂನ್ 2ರ ವರೆಗೂ ಮುಂದುವರಿಯುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ಹೇಳಿದೆ. ಮುಂದಿನ 3 ದಿನಗಳಲ್ಲಿ ಮಹಾರಾಷ್ಟ್ರ, ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದೂ ತಿಳಿಸಿದೆ.
ರೆಡ್ ಅಲರ್ಟ್ ಘೋಷಣೆ –
ಹವಾಮಾನ ಇಲಾಖೆಯು ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.
ಹಲವೆಡೆ ಅವಾಂತರ –
ದಕ್ಷಿಣ ಜಿಲ್ಲೆಯಲ್ಲಿ ಈಗಾಗಲೇ ಮಳೆಯಿಂದ ಅವಾಂತರಗಳು ಸೃಷ್ಟಿಯಾಗಿವೆ. ಎಲ್ಲೆಂದರಲ್ಲಿ ಮರಗಳು ಉರುಳಿ ಬೀಳುತ್ತಿವೆ, ರಸ್ತೆಯ ತಗ್ಗು ಪ್ರದೇಶಗಳಿಗೆ ನೀರು ಹರಿದು ಬಂದು ಕೃತಕ ಪ್ರವಾಹ ಸೃಷ್ಟಿಯಾಗುತ್ತಿದೆ. ಮತ್ತೊಂದು ಕಡೆ ಮರಗಳು ಬಿದ್ದು ವಾಹನಗಳು ಜಖಂ ಆಗುತ್ತಿವೆ. ನೀರಿನಲ್ಲಿ ವಾಹನ ಸಂಚಾರ ಮಾಡುವುದಕ್ಕೆ ಸವಾರರು ಪರದಾಡುತ್ತಿದ್ದಾರೆ.
ಬಂಟ್ವಾಳ, ಬೆಳ್ತಂಗಡಿ, ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ, ಪುತ್ತೂರು, ಮೂಡಬಿದ್ರೆ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದೆ. ಅರಬ್ಬಿ ಸಮುದ್ರದಲ್ಲಿ ಅಲೆಗಳ ಅರ್ಭಟಕ್ಕೆ ಕಡಲ್ಗೊರೆತ ಉಂಟಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತವು ಎಚ್ಚರಿಕೆ ಕೊಟ್ಟಿದೆ.
ಜಾಗತಿಕ ಮಟ್ಟದಲ್ಲಿ ಡಿಬೆಟಲ್, ಕೃತಕ ಬುದ್ಧಿಮತ್ತೆ ಹಾಗೂ ಜಿಯೋ ಸ್ಟೇಷಿಯಲ್ ಕ್ಷೇತ್ರದಲ್ಲಿನ ಕ್ರಾಂತಿಕಾರಕ ಆವಿಷ್ಕಾರಗಳನ್ನು ಕೃಷಿ ಕ್ಷೇತ್ರಕ್ಕೆ ಪರಿಚಯಿಸುವ ಮಹತ್ವಾಕಾಂಕ್ಷಿ ಪ್ರಯತ್ನಕ್ಕೆ ರಾಜ್ಯ ಸರಕಾರ ಕೈಹಾಕಿದೆ. ರೈತರು ಹಾಗೂ ನೀತಿ ನಿರೂಪಕರಿಗೆ ಅನುಕೂಲವಾಗುವಂತೆ ಬೆಳೆ ಮಾಹಿತಿ ವ್ಯವಸ್ಥೆ ಬಲಪಡಿಸಲು ಹಾಗೂ ಬೆಳೆಗಳಲ್ಲಿ ಉತ್ಪಾದಕತೆ ಹೆಚ್ಚಿಸುವ ಉದ್ದೇಶದಿಂದ ‘ಡಿಜಿಟಲ್ ಕೃಷಿ ಸೇವೆಗಳ ಕೇಂದ್ರ’ ಸ್ಥಾಪನೆಗೆ ಸರಕಾರ ಆದೇಶ ಹೊರಡಿಸಿದ್ದು, ಈ ಉದ್ದೇಶಕ್ಕೆ ಅನುದಾನ ಬಿಡುಗಡೆ ಮಾಡಿದೆ.
ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ನೈಋತ್ಯ ಮುಂಗಾರು ಶನಿವಾರ ಕೇರಳಕ್ಕೆ ಆಗಮಿಸಿದೆ, ಇದು ಜೂನ್ 1 ರ ನಿರೀಕ್ಷಿತ ಆಗಮನದ ದಿನಾಂಕಕ್ಕಿಂತ ಸುಮಾರು ಒಂದು ವಾರ ಮುಂಚಿತವಾಗಿ ಆಗಮಿಸಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, “ಮುಂದಿನ 7 ದಿನಗಳಲ್ಲಿ ಪಶ್ಚಿಮ ಕರಾವಳಿಯಲ್ಲಿ (ಕೇರಳ, ಕರ್ನಾಟಕ, ಕರಾವಳಿ ಮಹಾರಾಷ್ಟ್ರ ಮತ್ತು ಗೋವಾ) ಭಾರೀಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಕೇರಳಕ್ಕೆ ಮುಂಗಾರು ಬೇಗ ಪ್ರವೇಶ:
ಭಾರತೀಯ ಹವಾಮಾನ ಇಲಾಖೆ (IMD) ಶನಿವಾರ ಕೇರಳಕ್ಕೆ ನೈಋತ್ಯ ಮಾನ್ಸೂನ್ ಆಗಮನವನ್ನು ಘೋಷಿಸಿದೆ. ಇದು ತನ್ನ ಸಾಮಾನ್ಯ ವೇಳಾಪಟ್ಟಿಗಿಂತ ಎಂಟು ದಿನಗಳು ಮುಂಚಿತವಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ, ಇದು 2009ರ ನಂತರದ ಮೊದಲೇ ಆರಂಭವಾಗಿದೆ ಎಂದು ತಿಳಿಸಿದೆ. ಕೇರಳವು ಸಾಮಾನ್ಯವಾಗಿ ಜೂನ್ 1ರ ವೇಳೆಗೆ ಮಾನ್ಸೂನ್ ಮಳೆಯನ್ನು ಸ್ವಾಗತಿಸುತ್ತದೆ.