ರೈತರೇ ಇವತ್ತು ಮುಂಗಾರು ಮಳೆ ಆರಂಭ ಜೋರಾಗಿದೆ. ಮುಂಗಾರು ಮಳೆ ಈಗಾಗಲೇ ಪ್ರವೇಶ ಪಡೆದಿದೆ. ಎಲ್ಲಾಕಡೆ ವರುಣನ ಆರ್ಭಟ ಜೋರಾಗಿದೆ. ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣಕನ್ನಡಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಕೊಡಗು, ಚಿಕ್ಕಮಗಳೂರು ಸೇರಿ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಚಾರ್ಮಾಡಿ ಘಾಟ್‌ನಲ್ಲಿ ದಟ್ಟ ಮಂಜು ಕವಿದ ವಾತಾವರಣವಿದೆ. ಪಶ್ಚಿಮ ಘಟ್ಟದಲ್ಲಿ ಮಳೆ ಕೊಂಚ ಬಿಡುವು ನೀಡಿದ್ದು, ಪ್ರವಾಸಿಗರು ಜಲಪಾತಗಳ ಬಳಿ ಮೋಜು ಮಸ್ತಿ ಮಾಡುತ್ತಿದ್ದಾರೆ. ಇತರ ಜಿಲ್ಲೆಗಳಾದ ಬಾಗಲಕೋಟೆ, ಯಾದಗಿರಿ, ಹಾವೇರಿ, ಗದಗ, ಹಾಸನದಲ್ಲಿ ಯಲ್ಲೋ ಅಲರ್ಟ್, ಹಾಗೆಯೇ ಬೆಳಗಾವಿ, ಕಲಬುರಗಿ, ವಿಜಯಪುರ, ಬೀದರ್ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಒಂದು ವಾರ ಮುಂಚೆಯೇ ಕೇರಳದ ಮೂಲಕ
ನೈಋತ್ಯ ಮುಂಗಾರು ಕರ್ನಾಟಕದ ಕರಾವಳಿಯನ್ನು ಪ್ರವೇಶ ಮಾಡಿದ್ದು, ರಾಜ್ಯದ ಬಹುತೇಕ ಎಲ್ಲ ಭಾಗಗಳ ಮೇಲೂ ಇದರ ಪರಿಣಾಮ ಆಗುತ್ತಿದೆ. ಒಂದು ವಾರ ರಾಜ್ಯದ ಹಲವು ಕಡೆ ವ್ಯಾಪಕವಾಗಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಳೆದೊಂದು ವಾರದಿಂದ ಧೋ ಎಂದು ಸುರಿಯುತ್ತಿದ್ದ ಮಳೆರಾಯ ಸದ್ಯ ಕೊಂಚ ಬ್ರೇಕ್ ಕೊಟ್ಟಿದ್ದಾನೆ. ಕರ್ನಾಟಕದಲ್ಲಿ ಮಳೆ ಬಿಡುವು ನೀಡಿದ್ದು, ಜೂನ್ 8 ರವರೆಗೂ ಸಾಧಾರಣ ಮಳೆ ಮುಂದುವರಿಯಲಿದೆ.
ರಾಜ್ಯದಲ್ಲಿ ಮುಂಗಾರಿನ ಆರ್ಭಟ ಸಹ ತಗ್ಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡಕ್ಕೆ ಜೂನ್ 3 ರಿಂದ ಮತ್ತೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ಪೂರ್ವ ಮಳೆಗಾಲದಲ್ಲಿ ಸುರಿದ ಅತಿಯಾದ ಮಳೆಯಿಂದಾಗಿ ಸುಮಾರು 75 ಮನೆಗಳು ಸಂಪೂರ್ಣವಾಗಿ ಹಾನಿಗೊಳಗಾಗಿದ್ದರೆ, 1,993 ಮನೆಗಳು ಭಾಗಶಃ ಹಾನಿಗೊಳಗಾಗಿವೆ.ಒಟ್ಟು 15,378.32 ಹೆಕ್ಟೇರ್ ಬೆಳೆಗಳು ಹಾನಿಗೊಳಗಾಗಿವೆ. ಸುಮಾರು 11,915.66 ಹೆಕ್ಟೇರ್ ಕೃಷಿ ಬೆಳೆಗಳು ಮತ್ತು 3,462 ಹೆಕ್ಟೇರ್ ತೋಟಗಾರಿಕಾ ಬೆಳೆಗಳು ಹಾನಿಗೊಳಗಾಗಿವೆ. ಬೆಳೆ ಹಾನಿಯ ವಿವರಗಳನ್ನು ಪರಿಹಾರ ಸಾಫ್ಟ್‌ವೇರ್‌ನಲ್ಲಿ ನಮೂದಿಸಲು ಒದಗಿಸಲಾಗಿದ್ದು, ಪರಿಹಾರ ಪಾವತಿ ಪ್ರಕ್ರಿಯೆಯು ಪ್ರಗತಿಯಲ್ಲಿದೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ.
ಜಾಗತಿಕ ಮಟ್ಟದಲ್ಲಿ ಡಿಬೆಟಲ್, ಕೃತಕ ಬುದ್ಧಿಮತ್ತೆ ಹಾಗೂ ಜಿಯೋ ಸ್ಟೇಷಿಯಲ್ ಕ್ಷೇತ್ರದಲ್ಲಿನ ಕ್ರಾಂತಿಕಾರಕ ಆವಿಷ್ಕಾರಗಳನ್ನು ಕೃಷಿ ಕ್ಷೇತ್ರಕ್ಕೆ ಪರಿಚಯಿಸುವ ಮಹತ್ವಾಕಾಂಕ್ಷಿ ಪ್ರಯತ್ನಕ್ಕೆ ರಾಜ್ಯ ಸರಕಾರ ಕೈಹಾಕಿದೆ. ರೈತರು ಹಾಗೂ ನೀತಿ ನಿರೂಪಕರಿಗೆ ಅನುಕೂಲವಾಗುವಂತೆ ಬೆಳೆ ಮಾಹಿತಿ ವ್ಯವಸ್ಥೆ ಬಲಪಡಿಸಲು ಹಾಗೂ ಬೆಳೆಗಳಲ್ಲಿ ಉತ್ಪಾದಕತೆ ಹೆಚ್ಚಿಸುವ ಉದ್ದೇಶದಿಂದ ‘ಡಿಜಿಟಲ್ ಕೃಷಿ ಸೇವೆಗಳ ಕೇಂದ್ರ’ ಸ್ಥಾಪನೆಗೆ ಸರಕಾರ ಆದೇಶ ಹೊರಡಿಸಿದ್ದು, ಈ ಉದ್ದೇಶಕ್ಕೆ ಅನುದಾನ ಬಿಡುಗಡೆ ಮಾಡಿದೆ.
ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ನೈಋತ್ಯ ಮುಂಗಾರು ಶನಿವಾರ ಕೇರಳಕ್ಕೆ ಆಗಮಿಸಿದೆ, ಇದು ಜೂನ್ 1 ರ ನಿರೀಕ್ಷಿತ ಆಗಮನದ ದಿನಾಂಕಕ್ಕಿಂತ ಸುಮಾರು ಒಂದು ವಾರ ಮುಂಚಿತವಾಗಿ ಆಗಮಿಸಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, “ಮುಂದಿನ 7 ದಿನಗಳಲ್ಲಿ ಪಶ್ಚಿಮ ಕರಾವಳಿಯಲ್ಲಿ (ಕೇರಳ, ಕರ್ನಾಟಕ, ಕರಾವಳಿ ಮಹಾರಾಷ್ಟ್ರ ಮತ್ತು ಗೋವಾ) ಭಾರೀಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.