ಪ್ರೀಯ ರೈತರೇ ಇವತ್ತಿನ ಈ ಲೇಖನದಲ್ಲಿ ನಾವು ಮಳೆಯ ಮೂನ್ಸೂಚನೆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ. ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆಯು ಹಲವು ಜಿಲ್ಲೆಗಳಿಗೆ ರೆಡ್, ಯೆಲ್ಲೋ, ಆರೆಂಜ್ ಘೋಷಿಸಲಾಗಿದೆ.
ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ 9 ಜಿಲ್ಲೆಗಳಿಗೆ ರೆಡ್ ಅಲರ್ಟ್ಘೋಷಿಸಲಾಗಿದ್ದು, ಐದು ಜಿಲ್ಲೆಗಳಲ್ಲಿ ಶಾಲೆ, ಕಾಲೇಜು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವು ಸೈಕ್ಲೋನ್ಗೆ ಕಾರಣವಾಗಿದ್ದು, ಸಮುದ್ರದಲ್ಲಿ 5.8 ರಿಂದ 8 ಅಡಿ ಎತ್ತರದ ಸುಳಿಗಾಳಿ ಬೀಸುತ್ತಿದೆ. ಈ ಸೈಕ್ಲೋನ್ ಪರಿಣಾಮದಿಂದ ಕರ್ನಾಟಕದ ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಈ ಕಾರಣದಿಂದಾಗಿ ರಾಜ್ಯದ 9 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ಚಿಕ್ಕಮಗಳೂರು
ಕೊಡಗು
ಹಾಸನ
ಮೈಸೂರು
ಚಾಮರಾಜನಗರ
ಭಾರೀ ಮಳೆಯ ಹಿನ್ನೆಲೆಯಲ್ಲಿ ಐದು ಜಿಲ್ಲೆಗಳಾದ ಧಾರವಾಡ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ಮತ್ತು ಕೊಡಗು ಜಿಲ್ಲೆಗಳಲ್ಲಿ ಅಂಗನವಾಡಿ, ಶಾಲೆ, ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಜನರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ರಾಜ್ಯದ ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ:
ಬಾಗಲಕೋಟೆ
ಗದಗ
ವಿಜಯಪುರ
ದಾವಣಗೆರೆ
ಹಾಸನ
ಮೈಸೂರು
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ ಸೇರಿದಂತೆ ಇತರ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮುಂಗಾರು ಮಳೆ ಜೋರಾಗಿ ಸುರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತವಾಗಿವೆ. ರಸ್ತೆ ಸಂಚಾರದಲ್ಲಿ ಜನರು ತೊಂದರೆ ಎದುರಿಸುತ್ತಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಶಾಲೆ ಮತ್ತು ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತವು ಸೈಕ್ಲೋನ್ ರೂಪ ತಾಳಿದ್ದು, ದಿನದಿಂದ ದಿನಕ್ಕೆ ಇದರ ತೀವ್ರತೆ ಹೆಚ್ಚುತ್ತಿದೆ. ಆಂಧ್ರ ಪ್ರದೇಶದ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರ ಪರಿಣಾಮ ಕರ್ನಾಟಕದ ಕರಾವಳಿ ಭಾಗಗಳ ಮೇಲೂ ಬೀಳಲಿದೆ.
ಸಮುದ್ರದಲ್ಲಿ ಎತ್ತರದ ಅಲೆಗಳು ಏಳಲಿವೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ಸಮುದ್ರ ದಡದ ಬಳಿ ಪ್ರವಾಸಿಗರು ತೆರಳದಂತೆ ಇಲಾಖೆ ಎಚ್ಚರಿಕೆ ಕೊಟ್ಟಿದೆ. ಇನ್ನು ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿಯೂ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಆರೇಂಜ್ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಕೊಪ್ಪಳ, ದಾವಣಗೆರೆ, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಇಂದು, ನಾಳೆ ಯೆಲ್ಲೋ ಆಲರ್ಟ್ ಘೋಷಿಸಲಾಗಿದೆ.
ಮುಂಗಾರು ಆರಂಭವಾದ ಜೂನ್ ಮೊದಲವಾರವೇ ರೈತರು ಮೆಕ್ಕೆ ಜೋಳ, ಹೆಸರು, ತೊಗರಿ, ಶೇಂಗಾ ಇನ್ನಿತರ ಖಾರೀಫ್ ಬೆಳೆ ಬಿತ್ತಿದ್ದಾರೆ. ಸದ್ಯ ಒಂದು ಅಡಿಯಷ್ಟು ಎತ್ತರ ಬೆಳೆದ ಪೈರಿಗೆ ನೀರಿನ ಅಗತ್ಯವಿದೆ. ಸಕಾಲಕ್ಕೆ ಮಳೆ ಆಗದೇ ಇದೇ ವಾತವರಣ ಮುಂದುವರಿದರೆ, ಬೆಳೆ ಒಣಗುವ ಭಯದಲ್ಲಿ ರೈತರಿದ್ದಾರೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ಹಲವೆಡೆ ಮಳೆಯಾಗಲಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂಗಾರು ಮಳೆಯ ಆರ್ಭಟ ಜೋರಾಗಿದೆ. ನಿರಂತರ ಮಳೆಯಿಂದಾಗಿ ಜನರು ಕಂಗೆಟ್ಟಿದ್ದಾರೆ. ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಎಲ್ಲಾ ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆಯು ಸಹ ಭಾರೀ ಗಾಳಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಕರಾವಳಿಯಲ್ಲಿ ರೆಡ್ ಅಲರ್ಟ್ ನೀಡಿದೆ. ಜೊತೆಗೆ ಜನರಿಗೆ ಎಚ್ಚರಿಕೆ ವಹಿಸಲಾಗಿದೆ.