ಪ್ರೀಯ ರೈತರೇ ನಿಮಗೊಂದು ಸಂತಸದ ಸುದ್ದಿ. ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈತರಿಗೆ ನೇರವಾಗಿ ಪಿಎಂ ಕಿಸಾನ್ ಹಣವನ್ನು ಬಿಡುಗಡೆ ಮಾಡಿದ್ದಾರೆ. ಸಣ್ಣ ರೈತರಿಗೆ ಆರ್ಥಿಕ ನೆರವು ನೀಡುವ ಗುರಿಯೊಂದಿಗೆ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯನ್ನು ಜಾರಿಗೆ ತಂದಿದ್ದು, ಇದೀಗ 20ನೇ ಕಂತಿನ ಹಣ ಜಮಾ ಪ್ರಕ್ರಿಯೆ ಆರಂಭವಾಗುತ್ತಿದೆ. ಈ ವಾರದಲ್ಲಿ ಫಲಾನುಭವಿ ರೈತರ ಖಾತೆಗೆ ₹2,000 ಹಣ ನೇರವಾಗಿ ಜಮಾಗೊಳ್ಳಲಿದೆ.
ಪಿಎಂ ಕಿಸಾನ್ ಯೋಜನೆಯಲ್ಲಿ ಒಂದು ವರ್ಷದಲ್ಲಿ 6,000 ರೂ ಹಣವನ್ನು ರೈತರಿಗೆ ನೀಡಲಾಗುತ್ತಿದೆ. ಅಂದರೆ, ತಲಾ 2,000 ರೂಗಳಂತೆ ಮೂರು ಕಂತುಗಳಲ್ಲಿ ಈ ಹಣವನ್ನು ನೀಡಲಾಗುತ್ತಿದೆ. ಈಗ ಒಂದು ಕಂತು ಹೆಚ್ಚು ಮಾಡಬಹುದು. 2,000 ರೂಗಳ ನಾಲ್ಕು ಕಂತುಗಳನ್ನು ರೈತರ ಖಾತೆಗಳಿಗೆ ಹಾಕಬಹುದು. ಒಟ್ಟು ಒಂದು ವರ್ಷದಲ್ಲಿ 8,000 ರೂ ಹಣವು ರೈತರಿಗೆ ಸಿಗಲಿದೆ.
ರೈತರ ಭವಿಷ್ಯದ ಸುರಕ್ಷತೆ, ಭಾರತದ ಕೃಷಿಯ ಸಮೃದ್ಧಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಪ್ರಯೋಜನ ಪಡೆಯಲು ರೈತರು ಈ ಕೆಳಗೆ ನೀಡಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು.
ನಿಯಮಗಳು –
* ಇ-ಕೆವೈಸಿ ಪೂರ್ಣಗೊಳಿಸಿ.
* ಬ್ಯಾಂಕ್ ಖಾತೆ ಜೊತೆ ಆಧಾರ್ ಸಂಯೋಜನೆ ಖಾತ್ರಿಪಡಿಸಿಕೊಳ್ಳಿ.
* ಬ್ಯಾಂಕ್ ಖಾತೆ ವಿವರಗಳನ್ನು ಪರಿಶೀಲಿಸಿಕೊಳ್ಳಿ.
* ಬಾಕಿ ಇರುವ ಭೂ ದಾಖಲೆಗಳ ವಿವಾದ ಪರಿಹರಿಸಿಕೊಳ್ಳಿ.
* pmkisan.gov.in ನಲ್ಲಿ ಫಲಾನುಭವಿ ಸ್ಥಿತಿಗತಿ ಪರಿಶೀಲಿಸಿ.
* ಒಟಿಪಿ ಹಾಗೂ ಅಧಿಸೂಚನೆಗಳಿಗಾಗಿ ಮೊಬೈಲ್ ನಂಬರ್ ಅನ್ನು ಅಪ್ ಡೇಟ್ ಮಾಡಿ.
ಪ್ರತಿ ವರ್ಷ ರೈತರ ಬ್ಯಾಂಕ್ ಖಾತೆಗೆ ₹6,000 ನಗದು ಸಹಾಯಧನವನ್ನು ಮೂರು ಕಂತುಗಳಲ್ಲಿ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಇದು ನೇರ ಲಾಭಾಂಶ ಜಮಾ ವ್ಯವಸ್ಥೆಯ (DBT) ಮೂಲಕ ಜಮಾಗೊಳ್ಳುತ್ತದೆ. ವರ್ಷದ ಮೂರು ಕಂತುಗಳ ವಿವರ ಹೀಗಿದೆ. ಈ ಕಾರ್ಯಕ್ರಮದಲ್ಲಿ ದೇಶಾದ್ಯಂತ 2.41 ಕೋಟಿ ಮಹಿಳಾ ರೈತರು ಸೇರಿದಂತೆ 9.8 ಕೋಟಿಗೂ ಹೆಚ್ಚು ರೈತರು 19 ನೇ ಕಂತಿನ ಬಿಡುಗಡೆಯ ಮೂಲಕ ಪ್ರಯೋಜನ ಪಡೆಯಲಿದ್ದಾರೆ, ಯಾವುದೇ ಮಧ್ಯವರ್ತಿಗಳ ಒಳಗೊಳ್ಳುವಿಕೆ ಇಲ್ಲದೆ ನೇರ ಲಾಭ ವರ್ಗಾವಣೆ (ಡಿಬಿಟಿ) ಮೂಲಕ ₹22,000 ಕೋಟಿಗಿಂತ ಹೆಚ್ಚಿನ ನೇರ ಆರ್ಥಿಕ ಸಹಾಯವನ್ನು ಪಡೆಯಲಿದ್ದಾರೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ, ಒಂದು ಕುಟುಂಬದ ಒಬ್ಬ ಸದಸ್ಯರಿಗೆ ಮಾತ್ರ ಪ್ರಯೋಜನವನ್ನು ನೀಡಲಾಗುತ್ತದೆ. ರೈತ ಮತ್ತು ಅವನ ಮಗ ಇಬ್ಬರೂ ಕೃಷಿ ಮಾಡುತ್ತಿದ್ದರೂ ಸಹ, ಇಬ್ಬರೂ ಒಟ್ಟಿಗೆ ಈ ಪ್ರಯೋಜನವನ್ನು ಪಡೆಯಲು ಸಾಧ್ಯವಿಲ್ಲ. ಈ ಯೋಜನೆಯ ಪ್ರಯೋಜನವನ್ನು ಕೃಷಿ ಭೂಮಿಯನ್ನು ಯಾರ ಹೆಸರಿನಲ್ಲಿ ನೋಂದಾಯಿಸಲಾಗಿದೆಯೋ ಆ ಸದಸ್ಯರಿಗೆ ಮಾತ್ರ ನೀಡಲಾಗುತ್ತದೆ, ಅಂದರೆ, ಭೂಮಿಯನ್ನು ಯಾರ ಹೆಸರಿನಲ್ಲಿ ನೋಂದಾಯಿಸಲಾಗಿದೆಯೋ ಅವರನ್ನು ಅರ್ಹರೆಂದು ಪರಿಗಣಿಸಲಾಗುತ್ತದೆ.
ಇದು ರೈತರ ಕಲ್ಯಾಣ ಮತ್ತು ಕೃಷಿ ಸಮೃದ್ಧಿಗೆ ಸರ್ಕಾರದ ಬದ್ಧತೆಯನ್ನು ಬಲಪಡಿಸುತ್ತದೆ. ಈ ಕಂತಿನೊಂದಿಗೆ, ಈ ಯೋಜನೆಯು ದೇಶಾದ್ಯಂತ ರೈತರಿಗೆ ಬೆಂಬಲ ನೀಡಲಿದೆ ಮತ್ತು ಗ್ರಾಮೀಣ ಅಭಿವೃದ್ಧಿ ಮತ್ತು ಕೃಷಿ ಸಮೃದ್ಧಿಗೆ ಸರ್ಕಾರದ ಬದ್ಧತೆಯನ್ನು ಮತ್ತಷ್ಟು ದೃಢೀಕರಿಸಲಿದೆ.
ಪಿಎಂ ಕಿಸಾನ್ ಕೇಂದ್ರ ಸರ್ಕಾರದ PM-KISAN Portal ನಲ್ಲಿ ಹಾಗೂ ಮೊಬೈಲ್ (https://pmkisan.gov.in)ಈ ಲಿಂಕ್ ಮೂಲಕ ಸಹ ನೀವು ನಿಮ್ಮ ಪಿಎಂ ಕಿಸಾನ್ ಹಣ ಹೊಸ ಅಪ್ಡೇಟ್ ಹಾಗೂ ಈ ಕೆವೈಸಿ ಮಾಡಬಹುದು. ಪಿ.ಎಂ.ಕಿಸಾನ್ ಯೋಜನೆಯಡಿ ರೈತ ಬಂಧುಗಳು ಆರ್ಥಿಕ ನೆರವು ಪಡೆಯಲು e-KYC ಕಡ್ಡಾಯಗೊಳಿಸಲಾಗಿದೆ. e-KYC ಮಾಡಿಸಲು ಬಾಕಿ ಇರುವ ರೈತರು ಕೂಡಲೇ e-KYC ಮಾಡಿಸಿಕೊಳ್ಳಲು ಕೋರಿದೆ.
ರೈತರು ತಮ್ಮ ಆಧಾರ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ನಲ್ಲಿ ನೋಂದಾಯಿಸಿರುವ ಮೊಬೈಲ್ ನೊಂದಿಗೆ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ ಅಥವಾ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸುವುದು. ಹಾಗೂ ಈಗಾಗಲೇ ಕೃಷಿ ಇಲಾಖೆಯಿಂದ ತಮ್ಮ ಗ್ರಾಮಗಳಿಗೆ ಗ್ರಾಮ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು ಕೇಂದ್ರ ಸರ್ಕಾರವು ಬಿಡುಗಡೆಗೊಳಿಸಿರುವ PMKISAN e-KYC through Face Recognition App ಮೂಲಕ ಇ-ಕೆವೈಸಿ ಮಾಡಿಸುವಲ್ಲಿ ಗ್ರಾಮ ನೋಡಲ್ ಅಧಿಕಾರಿಗಳೊಂದಿಗೆ ಸಹಕರಿಸುವಂತೆ ತಿಳಿಸಿರುತ್ತಾರೆ.