ರೈತರು ತಮ್ಮ ಜಮೀನುಗಳನ್ನು ಪೌತಿ ಮಾಡಿಸಿಕೊಳ್ಳಲು ಇನ್ಮುಂದೆ ಕಂದಾಯ ಇಲಾಖೆ ಕಚೇರಿವರೆಗೂ ಅಲೆಯಬೇಕಿಲ್ಲ. ಸರಕಾರವೇ ಇ-ಪೌತಿ ಆಂದೋಲನದ ಮೂಲಕ ನಿಮ್ಮ ಮನೆ ಬಾಗಿಲಿಗೆ ಬರಲಿದೆ.
ರಾಜ್ಯದಲ್ಲಿ ಮೃತಪಟ್ಟ ಜಮೀನು ಮಾಲೀಕರ ಹೆಸರಿನಲ್ಲಿರುವ ಪಹಣಿಗಳನ್ನು ವಾರಸುದಾರರ ಹೆಸರಿಗೆ ನೋಂದಣಿ ಮಾಡಿಕೊಡಲು ಈ ಹಿಂದಿನಿಂದಲೂ ಅಭಿಯಾನಗಳು ನಡೆದಿವೆ.
ಹೋಬಳಿ, ಗ್ರಾಮ ಮಟ್ಟದಲ್ಲಿ ಅಭಿಯಾನ ನಡೆದಿವೆ. ಆದರೂ ಇನ್ನು ಕೆಲವು ಪ್ರಕರಣ ಬಾಕಿ ಇದ್ದು, ಕಂದಾಯ ಇಲಾಖೆ ಸಚಿವರ ನಿರ್ದೇಶನದ ಮೇರೆಗೆ ಮನೆ ಬಾಗಿಲಿಗೆ ಕಂದಾಯ ಸೇವೆಗಳ ‘ಇ-ಪೌತಿ’ ಆಂದೋಲನ ಆರಂಭಿಸಲಾಗಿದೆ.
ಈ ಯೋಜನೆಯಡಿ ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಅಭಿವೃದ್ಧಿ ಅಧಿಕಾರಿಗಳು ರೈತರ ಮನೆ ಬಾಗಿಲಿಗೆ ತೆರಳಿ, ವಾರಸುದಾರರಿಗೆ ಮೊಬೈಲ್ ಮೂಲಕ ಪೌತಿ ಖಾತೆಯನ್ನು ನೋಂದಾಯಿಸಲಿದ್ದಾರೆ. ಈ ಪ್ರಕ್ರಿಯೆಯಲ್ಲಿ ಆಧಾರ್ ಸೀಡಿಂಗ್‌ನ ಮೂಲಕ ಭೂಮಿ ಹಿಡುವಳಿಯ ನಿಖರ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ.
ಜಿಲ್ಲೆಯಲ್ಲಿ ಮೃತಪಟ್ಟ 75,000 ಜಮೀನುಗಳ ಮಾಲೀಕರ ಪಹಣಿಗಳನ್ನು ವಾರಸುದಾರರ ಹೆಸರಿಗೆ ನೋಂದಣಿ ಮಾಡಿಕೊಡಲು ಇ-ಪೌತಿ ಆಂದೋಲನವನ್ನು ಆರಂಭಿಸಿದೆ. ಆಧಾರ್ ಜೋಡಣೆಯಿಂದ ಕೃಷಿ ಭೂಮಿಯ ಪ್ರಮಾಣ, ರೈತರ ಭೂ ಹಿಡುವಳಿ, ಮತ್ತು ಸಣ್ಣ ಹಾಗೂ ಅತಿ ಸಣ್ಣ ರೈತರ ಸಂಖ್ಯೆಯ ಬಗ್ಗೆ ನಿಖರ ಅಂಕಿ-ಅಂಶಗಳು ಲಭ್ಯವಾಗಲಿವೆ.
ಮರಣ ಹೊಂದಿದ ವ್ಯಕ್ತಿಯ ಹೆಸರಿನಲ್ಲಿರುವ ಆಸ್ತಿಯನ್ನು ತಮ್ಮ ಕಾನೂನು ಬದ್ದ ವಾರಸುದಾರರ ಹೆಸರಿಗೆ ಜಮೀನಿನ ಖಾತೆಯನ್ನು ವರ್ಗಾವಣೆ ಮಾಡುವುದನ್ನು ಪೌತಿ ಖಾತೆ ಎನ್ನಲಾಗುವುದು.
ಮನೆ ಬಾಗಿಲಿಗೆ ಹೋಗಿ ಪೌತಿ ಖಾತೆ ಅಭಿಯಾನ ನಡೆಸುತ್ತಿರುವುದರಿಂದ ಅರ್ಹರಿಗೆ ಸುಲಭವಾಗಿ ಪೌತಿ ಖಾತೆ ಲಭ್ಯವಾಗುತ್ತದೆ. ಜಮೀನಿನ ವಾರಸುದಾರಿಕೆಯ ಪಹಣಿ ಸಿಗುತ್ತದೆ.
ಇ-ಪೌತಿ ಆಂದೋಲನಕ್ಕಾಗಿ ಕಂದಾಯ ಇಲಾಖೆಯು ಪ್ರತ್ಯೇಕ ತಂತ್ರಾಂಶ ಅಭಿವೃದ್ಧಿಪಡಿಸಿದೆ. ಈ ತಂತ್ರಾಂಶವು ವಂಶವೃಕ್ಷದ ಆಧಾರದ ಮೇಲೆ ವಾರಸುದಾರರ ಮಾಹಿತಿಯನ್ನು ಸಂಗ್ರಹಿಸಿ, ಆಧಾರ್ ಸಂಖ್ಯೆಯ ಮೂಲಕ ಒಟಿಪಿ ಪರಿಶೀಲನೆ ನಡೆಸುತ್ತದೆ.
ಈ ಪ್ರಕ್ರಿಯೆಯು ಪೌತಿ ಖಾತೆ ನೋಂದಣಿಯಲ್ಲಿ ಸಂಭವಿಸಬಹುದಾದ ಅಕ್ರಮ ಕಡಿವಾಣ ಹಾಕಲು ಮತ್ತು ರೈತರಿಗೆ ತಮ್ಮ ಆಸ್ತಿಯ ದಾಖಲೆಗಳನ್ನು ಸರಿಪಡಿಸಿಕೊಳ್ಳಲು ಈ ಯೋಜನೆಯು ಸರಳ ಮತ್ತು ಪಾರದರ್ಶಕ ವೇದಿಕೆಯಾಗಿದೆ.
ಪ್ರೀಯ ರೈತರೇ ಇವತ್ತು ನಾವು ಒಂದು ಹೊಸ ಸುದ್ದಿ ಕೊಡುತ್ತೇನೆ. ರೈತರು ಇನ್ನೂ ಯಾರೂ ಪೌತಿ ಖಾತೆ ಮಾಡಿಸಿಲ್ಲ ಬೇಗನೆ ಪೌತಿ ಖಾತೆ ಮಾಡಿಸಬೇಕೆಂದು ಸರ್ಕಾರವು ಆದೇಶಿಸಿದೆ. ಪೌತಿ ಖಾತೆ ಮಾಡದಿದ್ದರೆ ಜಮೀನಿನ ವಾರಸುದಾರರಿಗೆ ಬಹಳ ತೊಂದರೆ ಆಗುತ್ತದೆ ಎಂದು ಸರ್ಕಾರ ಎಚ್ಚರಿಕೆ ನೀಡಿದೆ.
ಜಮೀನಿನ ವರ್ಗಾವಣೆ:
ಮರಣ ಹೊಂದಿದ ವ್ಯಕ್ತಿಯ ಹೆಸರಿನಲ್ಲಿರುವ ಜಮೀನಿನ ಹಕ್ಕನ್ನು ಅವರ ಕಾನೂನುಬದ್ಧ ವಾರಸುದಾರರಿಗೆ ಅಥವಾ ಕುಟುಂಬದ ಸದಸ್ಯರಿಗೆ ವರ್ಗಾಯಿಸಲಾಗುತ್ತದೆ.
ಖಾತೆ ವರ್ಗಾವಣೆ:
ಜಮೀನಿನ ಮಾಲೀಕತ್ವದ ದಾಖಲೆಯಲ್ಲಿ (ಖಾತೆಯಲ್ಲಿ) ವ್ಯಕ್ತಿಯ ಹೆಸರು ಬದಲಾಗಿ ವಾರಸುದಾರರ ಹೆಸರು ನಮೂದಾಗುತ್ತದೆ.
ವಾರಸುದಾರರ ಹಕ್ಕು:
ಈ ಪ್ರಕ್ರಿಯೆಯು ಮರಣ ಹೊಂದಿದ ವ್ಯಕ್ತಿಯ ಕುಟುಂಬದವರಿಗೆ ಆಸ್ತಿಯಲ್ಲಿ ಹಕ್ಕು ಪಡೆಯಲು ಸಹಾಯ ಮಾಡುತ್ತದೆ.
ಪೌತಿ ಖಾತೆ ಮಾಡುವುದರಿಂದ ಮರಣ ಹೊಂದಿದ ವ್ಯಕ್ತಿಯ ಹೆಸರಿನಲ್ಲಿರುವ ಆಸ್ತಿಯನ್ನು ಅವರ ಕುಟುಂಬದವರು ಕಾನೂನುಬದ್ಧವಾಗಿ ಬಳಸಲು ಮತ್ತು ನಿರ್ವಹಿಸಲು ಸಾಧ್ಯವಾಗುತ್ತದೆ.
ಹೀಗಾಗಿ ಸಂಬಂಧಪಟ್ಟ ಕುಟುಂಬದ ವಾರಸುದಾರರು ಇ-ಪೌತಿ ಆಂದೋಲನದಲ್ಲಿ ಭಾಗವಹಿಸಿ ತಮ್ಮ ಜಮೀನನ್ನು ವರ್ಗಾಯಿಸಿಕೊಳ್ಳಲು ಅವಕಾಶವಿದೆ. ಹೀಗಾಗಿ ರೈತರು ಯಾವುದೇ ಕಾರಣಕ್ಕೂ ಇದನ್ನು ತಪ್ಪಿಸಿಕೊಳ್ಳಬೇಡಿ ಎಂಬುದಾಗಿ ಸರ್ಕಾರ ಮನವಿ ಮಾಡಿದೆ.
ಪೌತಿ ಖಾತೆ ಏಕೆ ಬೇಕು?
ಆಸ್ತಿ ಮಾಲೀಕರು ಅಕಾಲಿಕ ನಿಧನ ಹೊಂದಿದ ನಂತರ ಅವರ ವಾರಸುದಾರರು ಜಮೀನನ್ನು ತಮ್ಮ ಹೆಸರಿಗೆ ಮಾಡಿಸಿಕೊಳ್ಳುವುದು ಸಾಮಾನ್ಯ. ಆದರೆ, ಬಹುತೇಕ ವಾರಸುದಾರರು ಯಾವಾಗಲಾದರೂ ಮಾಡಿಸಿಕೊಂಡರೆ ಆಯಿತು ಎಂಬ ನಿರ್ಲಕ್ಷ್ಯ ತೋರುತ್ತಾರೆ. ನೆನಪಿರಲಿ, ಪೌತಿ ಖಾತೆಯಡಿ ಜಮೀನು ವರ್ಗಾವಣೆ ಮಾಡಿಕೊಳ್ಳದಿದ್ದರೆ ಹಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
ಆಸ್ತಿ ಮಾಲೀಕರು ನಿಧನ ಹೊಂದಿದ ಬಳಿಕ ಪೌತಿ ಖಾತೆಯಡಿ ಜಮೀನು ವರ್ಗಾವಣೆ ಮಾಡಿಕೊಳ್ಳದಿದ್ದರೆ ಜಮೀನುಗಳ ಸ್ವಾಧೀನ ಹೊಂದಿದ್ದರೂ ಉಪಯೋಗವಿಲ್ಲದಂತೆ ಆಗುತ್ತದೆ. ಪ್ರಕೃತಿ ವಿಕೋಪದಿಂದಾಗಿ ಬೆಳೆ ನಷ್ಟವಾದರೆ ಬೆಳೆ ವಿಮೆಯಾಗಲಿ ಅಥವಾ ಬೆಳೆ ನಷ್ಟ ಪರಿಹಾರ ಪಡೆಯುವುದಕ್ಕೆ ಆಗಲಿ ಆಗುವುದಿಲ್ಲ. ಇನ್ನು ಬ್ಯಾಂಕ್ಗಳಿಂದ ಸಾಲ – ಸೌಲಭ್ಯ ಪಡೆಯಲು ಸಾಧ್ಯವಾಗುವುದಿಲ್ಲ. ಅದರ ಜೊತೆಗೆ ಮುಂದೆ ಹೊಸ ಹೊಸ ಕಾನೂನುಗಳು ಬಂದು ಕಚೇರಿಗಳಿಗೆ ಹಲವು ಬಾರಿ ಅಲೆದಾಡುವ ಸಂದರ್ಭಗಳು ಬರಬಹುದು. ಹಾಗಾಗಿ ಆಸ್ತಿಯನ್ನು ಪೌತಿ ಖಾತೆಯಡಿ ಬದಲಾವಣೆ ಮಾಡಿಕೊಳ್ಳುವುದು ಅಗತ್ಯವಾಗಿದೆ.
ರಾಜ್ಯದಲ್ಲಿ ಮೃತಪಟ್ಟ ಜಮೀನು ಮಾಲೀಕರ ಹೆಸರಿನಲ್ಲಿರುವ ಪಹಣಿಗಳನ್ನು ವಾರಸುದಾರರ ಹೆಸರಿಗೆ ನೋಂದಣಿ ಮಾಡಿಕೊಡಲು ಈ ಹಿಂದಿನಿಂದಲೂ ಅಭಿಯಾನಗಳು ನಡೆದಿವೆ. ಹೋಬಳಿ, ಗ್ರಾಮ ಮಟ್ಟದಲ್ಲಿ ಅಭಿಯಾನ ನಡೆದಿವೆ. ಆದರೂ ಇನ್ನು ಕೆಲವು ಪ್ರಕರಣ ಬಾಕಿ ಇದ್ದು, ಕಂದಾಯ ಇಲಾಖೆ ಸಚಿವರ ನಿರ್ದೇಶನದ ಮೇರೆಗೆ ಮನೆ ಬಾಗಿಲಿಗೆ ಕಂದಾಯ ಸೇವೆಗಳ ‘ಇ-ಪೌತಿ’ ಆಂದೋಲನ ಆರಂಭಿಸಲಾಗಿದೆ.
ಈ ಯೋಜನೆಯಡಿ ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಅಭಿವೃದ್ಧಿ ಅಧಿಕಾರಿಗಳು ರೈತರ ಮನೆ ಬಾಗಿಲಿಗೆ ತೆರಳಿ, ವಾರಸುದಾರರಿಗೆ ಮೊಬೈಲ್ ಮೂಲಕ ಪೌತಿ ಖಾತೆಯನ್ನು ನೋಂದಾಯಿಸಲಿದ್ದಾರೆ. ಈ ಪ್ರಕ್ರಿಯೆಯಲ್ಲಿ ಆಧಾರ್ ಸೀಡಿಂಗ್‌ನ ಮೂಲಕ ಭೂಮಿ ಹಿಡುವಳಿಯ ನಿಖರ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ.
ಜಿಲ್ಲೆಯಲ್ಲಿ ಮೃತಪಟ್ಟ 75,000 ಜಮೀನುಗಳ ಮಾಲೀಕರ ಪಹಣಿಗಳನ್ನು ವಾರಸುದಾರರ ಹೆಸರಿಗೆ ನೋಂದಣಿ ಮಾಡಿಕೊಡಲು ಇ-ಪೌತಿ ಆಂದೋಲನವನ್ನು ಆರಂಭಿಸಿದೆ. ಆಧಾರ್ ಜೋಡಣೆಯಿಂದ ಕೃಷಿ ಭೂಮಿಯ ಪ್ರಮಾಣ, ರೈತರ ಭೂ ಹಿಡುವಳಿ, ಮತ್ತು ಸಣ್ಣ ಹಾಗೂ ಅತಿ ಸಣ್ಣ ರೈತರ ಸಂಖ್ಯೆಯ ಬಗ್ಗೆ ನಿಖರ ಅಂಕಿ-ಅಂಶಗಳು ಲಭ್ಯವಾಗಲಿವೆ.