30 ಲಕ್ಷ ರೈತರಿಗೆ ಗುಡ್ ನ್ಯೂಸ್: ಡಿಸೆಂಬರ್ ಒಳಗೆ 2 ಲಕ್ಷ ಜಮೀನಿಗೆ ಪೋಡಿ ಗುರಿ

ರೈತರಿಗೆ ನಮ್ಮ ಸರ್ಕಾರ ನೀಡಿದ ಸರಳೀಕೃತ ದರ್ಖಾಸ್ತು ಪೋಡಿ ʼನನ್ನ ಭೂಮಿʼ ಗ್ಯಾರಂಟಿ ಅಭಿಯಾನದಡಿ ಕೇವಲ 8 ತಿಂಗಳಲ್ಲಿ 1.09 ಲಕ್ಷ ಜಮೀನುಗಳನ್ನು ಅಳತೆಗೆ ತೆಗೆದುಕೊಳ್ಳಲಾಗಿದ್ದು, ಡಿಸೆಂಬರ್‌ನೊಳಗೆ 2 ಲಕ್ಷ ಜಮೀನುಗಳಿಗೆ ಪೋಡಿ ಮಾಡಿಕೊಡುವ ಗುರಿ ಹೊಂದಲಾಗಿದೆ.

ಈ ಮೂಲಕ 30 ಲಕ್ಷ ರೈತರಿಗೆ ಅನುಕೂಲವಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.

ರೈತರಿಗೆ ಸರ್ಕಾರ ನೀಡಿದ ಸರಳೀಕೃತ ದರ್ಖಾಸ್ತು ಪೋಡಿ ನನ್ನ ಭೂಮಿ ಗ್ಯಾರಂಟಿ ಅಭಿಯಾನದಡಿ ಡಿಸೆಂಬರ್ ಒಳಗೆ ಎರಡು ಲಕ್ಷ ಜಮೀನುಗಳಿಗೆ ಪೋಡಿ ಮಾಡಿಕೊಡುವ ಗುರಿ ಹೊಂದಲಾಗಿದೆ. ಹಿಂದಿನ ಎಲ್ಲಾ ಸರ್ಕಾರದ ಅವಧಿಯಲ್ಲಿ ಮೂರು ವರ್ಷದಲ್ಲಿ ಕೇವಲ 5801 ಪ್ರಕರಣಗಳಲ್ಲಿ ರೈತರಿಗೆ ಪೋಡಿ ದುರಸ್ತಿಯಾಗಿತ್ತು. ನಮ್ಮ ಸರ್ಕಾರ 9 ತಿಂಗಳಲ್ಲಿ 1.09 ಲಕ್ಷ ಜಮೀನುಗಳನ್ನು ಅಳತೆಗೆ ತೆಗೆದುಕೊಂಡಿದ್ದು, ಇನ್ನೂ 50ರಿಂದ 70 ಸಾವಿರ ಪೋಡಿ ಪ್ರಕರಣಗಳು ದಾಖಲಾಗುವ ನಿರೀಕ್ಷೆ ಇದೆ ಎಂದು ತಿಳಿಸಿದ್ದಾರೆ.

ಮೃತ ರೈತರ ಹೆಸರಿನಲ್ಲೇ 52 ಲಕ್ಷ ಪಹಣಿಗಳಿದ್ದು, ಅವರ ಕಾನೂನುಬದ್ಧ ವಾರಸುದಾರರಿಗೆ ಪೌತಿಖಾತೆ ಮಾಡಿಕೊಡಲು ಪ್ರತಿ ಜಿಲ್ಲೆಯಲ್ಲೂ ಅಭಿಯಾನ ಹಮ್ಮಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ‘ಮೃತರ ಹೆಸರಿನಲ್ಲಿರುವ ಜಮೀನುಗಳಿಗೆ ಪಿ.ಎಂ ಕಿಸಾನ್, ಹನಿ ನೀರಾವರಿ ಹಾಗೂ ಯಂತ್ರೋಪಕರಣ ಖರೀದಿ ಸಬ್ಸಿಡಿ ನೀಡದಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಕೇಂದ್ರದ ಈ ಆದೇಶದಿಂದ ಮೃತ ರೈತರ ಕುಟುಂಬಗಳಿಗೆ ತೊಂದರೆಯಾಗುತ್ತದೆ. ಹಾಗಾಗಿ, ಕಂದಾಯ ಇಲಾಖೆ ಅಧಿಕಾರಿಗಳೇ ರೈತರ ಮನೆ ಬಾಗಿಲಿಗೆ ತೆರಳಿ ಪೌತಿಖಾತೆ ಮಾಡಿಕೊಡಲಿದ್ದಾರೆ. ಈಗಾಗಲೇ 2.30 ಲಕ್ಷ ಪಹಣಿಗಳನ್ನು ಖಾತೆ ಮಾಡಲಾಗಿದೆ. ಪ್ರಗತಿ ಸಾಧಿಸುವ ಗ್ರಾಮ ಆಡಳಿತ ಅಧಿಕಾರಿಗಳಿಗೆ ಪ್ರತಿ ಪ್ರಕರಣಕ್ಕೂ ₹6 ನೀಡಲು ನಿರ್ಧರಿಸಲಾಗಿದೆ’ ಎಂದು ಮಾಹಿತಿ ನೀಡಿದರು.

ರೈತರಿಗೆ ಕಾಂಗ್ರೆಸ್ ಸರಕಾರ ನೀಡಿದ ಸರಳೀಕೃತ ದರ್ಖಾಸ್ತು ಪೋಡಿ ‘ನನ್ನ ಭೂಮಿ’ ಗ್ಯಾರಂಟಿ ಅಭಿಯಾನ ವೇಗ ಪಡೆದುಕೊಂಡಿದ್ದು, ಈವರೆಗೆ ಕೇವಲ 8 ತಿಂಗಳಲ್ಲಿ 1.09 ಲಕ್ಷ ಜಮೀನುಗಳನ್ನು ಅಳತೆಗೆ ತೆಗೆದುಕೊಳ್ಳಲಾಗಿದೆ. ಮುಂದಿನ ಡಿಸೆಂಬರ್ ಒಳಗಾಗಿ 2 ಲಕ್ಷ ಜಮೀನುಗಳಿಗೆ ಪೋಡಿ ಮಾಡಿಕೊಡುವ ಗುರಿ ಹೊಂದಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಸೋಮವಾರ ವಿಕಾಸಸೌಧದಲ್ಲಿ ಎಲ್ಲ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಹಿಂದಿನ ಸರಕಾರದ ಅವಧಿಯಲ್ಲಿ ಮೂರು ವರ್ಷಕ್ಕೆ ಕೇವಲ 5,801 ಪ್ರಕರಣಗಳಲ್ಲಿ ಮಾತ್ರ ರೈತರಿಗೆ ಪೋಡಿ ದುರಸ್ಥಿ ಮಾಡಿಕೊಡಲಾಗಿತ್ತು. ಆದರೆ, ಪ್ರಸಕ್ತ ಕಳೆದ ಡಿಸೆಂಬರ್‍ನಲ್ಲಿ ‘ನನ್ನ ಭೂಮಿ’ ಹೆಸರಿನಲ್ಲಿ ಪೋಡಿ ಅಭಿಯಾನ ಕೈಗೊಂಡಿದ್ದು, ಕೇವಲ 9 ತಿಂಗಳಲ್ಲಿ 1.09 ಲಕ್ಷ ಜಮೀನುಗಳನ್ನು ಅಳತೆಗೆ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

ಇನ್ನೂ 50 ರಿಂದ 70 ಸಾವಿರ ಪೋಡಿ ಪ್ರಕರಣಗಳು ದಾಖಲಾಗುವ ನಿರೀಕ್ಷೆ ಇದ್ದು, ಮುಂದಿನ ಡಿಸೆಂಬರ್ ಒಳಗೆ 2 ಲಕ್ಷ ಪ್ರಕರಣಗಳಲ್ಲಿ ರೈತರಿಗೆ ದರ್ಖಾಸ್ತು ಪೋಡಿ ಮಾಡಿಕೊಡಲು ನಿರ್ಧರಿಸಲಾಗಿದೆ. ಈ ಗುರಿ ಸಾಧ್ಯವಾದರೆ ಕನಿಷ್ಠ 7 ಲಕ್ಷ ಕುಟುಂಬಗಳಿಗೆ 30 ಲಕ್ಷಕ್ಕೂ ಹೆಚ್ಚು ರೈತರಿಗೆ ಅನುಕೂಲವಾಗಲಿದೆ ಎಂದು ಅವರು ಮಾಹಿತಿ ನೀಡಿದರು.

1.62 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ: 1.62 ಲಕ್ಷ ಕುಟುಂಬದ ಫಲಾನುಭವಿಗಳಿಗೆ ಇ-ಖಾತಾ ನೋಂದಣಿ ಮಾಡಿಸಿದ ಪಕ್ಕಾ ಹಕ್ಕುಪತ್ರ ನೀಡುವ ಗುರಿಯನ್ನು ನವೆಂಬರ್ ತಿಂಗಳ ಅಂತ್ಯದೊಳಗೆ ಯಶಸ್ವಿಗೊಳಿಸುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಗುರಿ ನೀಡಲಾಗಿದೆ ಎಂದು ಕೃಷ್ಣ ಬೈರೇಗೌಡ ಹೇಳಿದರು.

ಹಾಡಿ, ಹಟ್ಟಿ, ತಾಂಡಾ, ಮಜರೆ ಗ್ರಾಮಗಳಲ್ಲಿ ವಾಸಿಸುತ್ತಿರುವವರು ಸಾಮಾಜಿಕವಾಗಿ ಹಾಗೂ ಆರ್ಥಿವಾಗಿ ಸಾಕಷ್ಟು ಹಿಂದುಳಿದವರು. ಆದರೆ, ಈ ಗ್ರಾಮಗಳನ್ನು ಕಂದಾಯ ಗ್ರಾಮಗಳಾಗಿ ಘೋಷಿಸದ ಕಾರಣ ದಶಕಗಳಿಂದಲೂ ಇವರು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ ಎಂದು ಅವರು ತಿಳಿಸಿದರು.

ಹೀಗಾಗಿ ಇಂತಹ ದಾಖಲೆ ರಹಿತ ವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಕೆಲಸವನ್ನು ನಮ್ಮ ಸರಕಾರ ಮಾಡುತ್ತಿದೆ. 4,250 ಅರ್ಹ ದಾಖಲೆ ರಹಿತ ಜನ ವಸತಿ ಪ್ರದೇಶಗಳನ್ನು ಗುರುತಿಸಲಾಗಿದೆ. ಡಿಸೆಂಬರ್ ತಿಂಗಳ ಒಳಗೆ ಇಷ್ಟೂ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಲು ಸೂಚಿಸಲಾಗಿದೆ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ಇನ್ನೂ 952 ಗ್ರಾಮ ಲೆಕ್ಕಿಗರಿಗೆ ಕಚೇರಿ ನೀಡುವ ಕೆಲಸ ಬಾಕಿ ಇದ್ದು, ಶೀಘ್ರದಲ್ಲೇ ಅವರಿಗೂ ಕಚೇರಿ ನೀಡಲು ಸೂಕ್ತ ಕ್ರಮ ವಹಿಸಲಾಗುವುದು. ಈಗಾಗಲೇ 4 ಸಾವಿರ ಗ್ರಾಮ ಲೆಕ್ಕಿಗರಿಗೆ ಲ್ಯಾಪ್ ಟಾಪ್ ನೀಡಲಾಗಿದ್ದು, ಉಳಿದವರಿಗೂ ಶೀಘ್ರದಲ್ಲೆ ನೀಡಲಾಗುವುದು ಎಂದು ಅವರು ಹೇಳಿದರು.

ಫೌತಿ ಖಾತೆ ಆಂದೋಲನಕ್ಕೆ ವೇಗ: ರಾಜ್ಯದಲ್ಲಿ 52 ಲಕ್ಷ ಜಮೀನುಗಳು ಮೃತರ ಹೆಸರಿನಲ್ಲಿ ಮುಂದುವರೆಯುತ್ತಿದೆ. ಇದರಲ್ಲಿ ಯಾವುದೆಲ್ಲ ಸಾಧ್ಯವಿದೆ ಆ ಎಲ್ಲವನ್ನೂ ಫೌತಿ ಖಾತೆ ಅಭಿಯಾನದ ಮೂಲಕ ಈಗಿನ ವಾರಸುದಾರರ ಹೆಸರಿಗೆ ಬದಲಿಸುವ ಪ್ರಕ್ರಿಯೆಗೆ ವೇಗ ತುಂಬುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ಮೃತರ ಹೆಸರಿನಲ್ಲಿರುವ ಜಮೀನುಗಳಿಗೆ ಪಿಎಂ ಕಿಸಾನ್, ಹನಿ ನೀರಾವರಿ ಹಾಗೂ ಯಂತ್ರೋಪಕರಣ ಖರೀದಿ ಸಬ್ಸಿಡಿ ನೀಡದಂತೆ ಕೇಂದ್ರ ಸರಕಾರ ಆದೇಶ ಹೊರಡಿಸಿದೆ. ಹೀಗಾಗಿ ಜನರಿಂದ ಅರ್ಜಿ ಕರೆಯದೆ ನಾವೆ ರೈತರ ಮನೆ ಬಾಗಿಲಿಗೆ ತೆರಳಿ ಅಭಿಯಾನ ಮಾದರಿಯಲ್ಲಿ ಫೌತಿ ಖಾತೆ ಮಾಡಿಕೊಡುತ್ತಿದ್ದೇವೆ ಎಂದು ಅವರು ಹೇಳಿದರು.

ಈವರೆಗೆ 2.30 ಲಕ್ಷ ಜಮೀನುಗಳನ್ನು ಫೌತಿ ಖಾತೆ ಮಾಡಿಕೊಡಲಾಗಿದೆ. ಮುಂದಿನ ದಿನಗಳಲ್ಲಿ ಈ ಅಭಿಯಾನಕ್ಕೆ ಮತ್ತಷ್ಟು ವೇಗ ತುಂಬಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಅಲ್ಲದೆ, ಇ-ಫೌತಿ ಆಂದೋಲನದಲ್ಲಿ ಪ್ರಗತಿ ಸಾಧಿಸುವ ಗ್ರಾಮ ಲೆಕ್ಕಿಗರಿಗೆ ಪ್ರತಿ ಫೌತಿ ಪ್ರಕರಣಕ್ಕೆ 6 ರೂಪಾಯಿ ನೀಡಲು ನಿರ್ಧರಿಸಲಾಗಿದೆ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ಸಭೆಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ವಿಪತ್ತು ನಿರ್ವಹಣಾ ಇಲಾಖೆ ಪ್ರಧಾನ ಕಾರ್ಯದರ್ಶಿ ಮುನೀಶ್ ಮೌದ್ಗಿಲ್, ಬೆಂಗಳೂರು ಕಂದಾಯ ವಿಭಾಗ ಆಯುಕ್ತ ಆದಿತ್ಯ ಆಮ್ಲನ್ ಬಿಶ್ವಾಸ್ ಹಾಗೂ ಕಂದಾಯ ಆಯುಕ್ತ ಸುನೀಲ್ ಕುಮಾರ್ ಉಪಸ್ಥಿತರಿದ್ದರು.
ಜಲಾಶಯಗಳ ನಿರ್ವಹಣೆ ಬಗ್ಗೆ ಇರಲಿ ಎಚ್ಚರ: ‘ಪ್ರಸಕ್ತ ವರ್ಷ ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆ ಮಳೆಯಾಗಿದೆ. ಒಂದೆರಡು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಿದ್ದರೆ, 6-7 ಜಿಲ್ಲೆಗಳಲ್ಲಿ ವಾಡಿಕೆಗಿಂತ ತುಸು ಕಡಿಮೆ ಮಳೆಯಾಗಿದೆ. ಕಡಿಮೆ ಮಳೆಯಾಗಿರುವ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗುವ ಸೂಚನೆ ಇದೆ. ಆಗಸ್ಟ್ ಅಂತ್ಯದ ವೇಳೆಗೆ ಮಳೆ ಪ್ರಮಾಣ ಈ ಭಾಗಗಳಲ್ಲಿ ಸುಧಾರಣೆಯಾಗಲಿದೆ. ಜಲಾಶಯಗಳಿಗೆ ಒಳಹರಿವು ಉತ್ತಮವಾಗಿದೆ. ಆದರೆ, ಸೆಪ್ಟೆಂಬರ್, ಅಕ್ಟೋಬರ್ ತಿಂಗಳಲ್ಲೂ ಪರಿಸ್ಥಿತಿ ಹೀಗೆ ಇರುತ್ತದೆ ಎಂದು ಹೇಳಲಾಗದು. ಹೀಗಾಗಿ ಜಿಲ್ಲಾಧಿಕಾರಿಗಳು ಜಲಾಶಯಗಳಲ್ಲಿನ ನೀರಿನ ಬಳಕೆಯ ಮೇಲೆ ಹೆಚ್ಚು ನಿಗಾವಹಿಸುವುದು ಉತ್ತಮ’

-ಕೃಷ್ಣ ಬೈರೇಗೌಡ, ಕಂದಾಯ ಸಚಿವ

‘ನನ್ನ ಭೂಮಿ’ ಯೋಜನೆಯಲ್ಲಿ ದರ್ಖಾಸ್ತು ಪೋಡಿಗಾಗಿ ಎಂಟು ತಿಂಗಳಲ್ಲಿ 1,09,000 ಜಮೀನುಗಳ ಅಳತೆ ಮಾಡಲಾಗಿದೆ. ಡಿಸೆಂಬರ್ ಒಳಗಾಗಿ 2 ಲಕ್ಷ ಜಮೀನುಗಳಿಗೆ ಪೋಡಿ ಮಾಡಿಕೊಡುವ ಗುರಿ ನಿಗದಿ ಮಾಡಲಾಗಿದೆ. ಇದರಿಂದ 30 ಲಕ್ಷ ರೈತರಿಗೆ ಅನುಕೂಲವಾಗಲಿದೆ ಎಂದರು.

ಹಾಡಿ, ಹಟ್ಟಿ, ತಾಂಡಾ, ಮಜರೆ ಗ್ರಾಮಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸಿ, 1.62 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲಾಗಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಅರ್ಹತೆ ಇದ್ದರೂ ಬಿಟ್ಟುಹೋಗಿದ್ದ 4,250 ಅರ್ಹ ಜನವಸತಿ ಪ್ರದೇಶಗಳನ್ನು ಗುರುತಿಸಲಾಗಿದೆ. ಡಿಸೆಂಬರ್ ಒಳಗೆ ಎಲ್ಲ ಗ್ರಾಮಗಳಿಗೂ ಕಂದಾಯ ಸ್ಥಾನಮಾನ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಕೃಷ್ಣ ಬೈರೇಗೌಡ ಕಂದಾಯ ಸಚಿವಒಳ ಹರಿವು ಉತ್ತಮವಾಗಿದ್ದರೂ ಜಲಾಶಯಗಳ ನೀರಿನ ನಿರ್ವಹಣೆ ಬಗ್ಗೆ ಎಚ್ಚರವಹಿಸಬೇಕು. ಮುಂದಿನ ದಿನಗಳಲ್ಲಿ ಮಳೆ ಕುಠಿತವಾದರೂ ನೀರಿನ ಕೊರತೆಯಾಗದಂತೆ ಜಿಲ್ಲಾಧಿಕಾರಿಗಳು ನಿಗಾವಹಿಸಬೇಕು.

ಹತ್ತೂವರೆ ಗಂಟೆ ನಿರಂತರ ಸಭೆ

ಸಚಿವ ಕೃಷ್ಣ ಬೈರೇಗೌಡ ಅಧ್ಯಕ್ಷತೆಯಲ್ಲಿ ಬೆಳಗ್ಗೆ 10ಕ್ಕೆ ಆರಂಭವಾದ ಎಲ್ಲಾ ಜಿಲ್ಲೆಗಳ ತಿಂಗಳ ಪ್ರಗತಿ ಪರಿಶೀಲನಾ ಸಭೆ ರಾತ್ರಿ 8.30ಕ್ಕೆ ಮುಕ್ತಾಯವಾಯಿತು. ಸತತ ಹತ್ತೂವರೆ ಗಂಟೆ ನಡೆದ ಸಭೆಯಲ್ಲಿ ದರ್ಖಾಸ್ತು ಪೋಡಿ ಪೌತಿಖಾತೆ ಕಂದಾಯ ಗ್ರಾಮ ಘೋಷಣೆ ಭೂ ಸುರಕ್ಷಾ ಸೇರಿದಂತೆ ಸರ್ಕಾರದ ಎಲ್ಲಾ ಅಭಿಯಾನಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು. ಜಿಲ್ಲಾಧಿಕಾರಿಗಳಿಗೆ ಮುಂದಿನ ಗುರಿ ನಿಗದಿ ಮಾಡುವ ಜತೆಗೆ ಸವಾಲುಗಳ ಕುರಿತೂ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಿದರು.

Spread positive news

Leave a Reply

Your email address will not be published. Required fields are marked *