ಆತ್ಮೀಯ ರೈತ ಬಾಂಧವರೇ ಸರ್ಕಾರಿ ಯೋಜನೆಗಳು ಹವಾಮಾನ ಮುನ್ಸೂಚನೆಗಳು ಹಾಗೂ ಕೃಷಿಯ ಬಗ್ಗೆ ಸಂಬಂಧಿಸಿದ ಎಲ್ಲ ರೀತಿಯ ಮಾಹಿತಿಗಳನ್ನು ನೀಡುವ ಕೃಷಿವಾಣಿ ಸಾಮಾಜಿಕ ಜಾಲತಾಣಕ್ಕೆ ಭೇಟಿ ನೀಡಿದ ನಿಮ್ಮೆಲ್ಲರಿಗೂ ಧನ್ಯವಾದಗಳು. ಇಂದು ನಾವು ಕೇಂದ್ರ ಸರ್ಕಾರದ ಕೃಷಿ ಕೀಟನಾಶಕಕ್ಕೆ ಸಂಬಂಧಿಸಿದ ಒಂದು ಹೊಸ ವಿನೂತನ ಯೋಜನೆಯ ಮಾಹಿತಿಯನ್ನು ನಿಮಗೆ ನೀಡಲಿದ್ದೇವೆ. ಈಗಾಗಲೇ ಕೇಂದ್ರ ಸರ್ಕಾರ ಜನೌಷಧಿ ಕೇಂದ್ರಗಳ ಮೂಲಕ ಯಾವ ರೀತಿ ರಿಯಾಯತಿ ದರದಲ್ಲಿ ಔಷಧ ನೀಡುತ್ತಿದೆ. ಎಂಬುದು ನಮಗೆಲ್ಲರಿಗೂ ತಿಳಿದಿದೆ ಹಾಗೂ ಬಡಜನರು ಹಾಗೂ ಮಾಧ್ಯಮ ವರ್ಗದವರು ಇದರ ಸದುಪಯೋಗವನ್ನು ಪಡೆದುಕೊಳ್ಳುತ್ತಿದ್ದಾರೆ.
ಹಾಗಾದರೆ ಸರ್ಕಾರದ ಹೊಸ ಯೋಜನೆ ಏನು?
ಅದೇ ರೀತಿ ಕೇಂದ್ರ ಸರ್ಕಾರದ ಹೊಸ ಯೋಜನೆ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲೂ ಕೀಟನಾಶಕ ಕೇಂದ್ರ (ಫೆಸ್ಟಿಸೈಡ್ ಸೆಂಟರ್) ಸ್ಥಾಪಿಸುವ ಚಿಂತನೆ ಇದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸ್ಪಷ್ಟಪಡಿಸಿದರ
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಜನೌಷಧಿ ಕೇಂದ್ರಗಳ ಮೂಲಕ ಕೇಂದ್ರ ಸರ್ಕಾರ ಕಡಿಮೆ ದರದಲ್ಲಿ ಔಷಧಿಗಳನ್ನು ನೀಡುತ್ತಿದೆ. ಅದೇ ರೀತಿ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಕೀಟನಾಶಕ ಕೇಂದ್ರಗಳನ್ನು ಸ್ಥಾಪಿಸಿ ರೈತರಿಗೆ ಕಡಿಮೆ ದರದಲ್ಲಿ ಉತ್ಪನ್ನಗಳನ್ನು ಒದಗಿಸಿ ರೈತರಿಗೆ ತಮ್ಮ ವೆಚ್ಚದ ಖರ್ಚನ್ನು ಕಡಿಮೆ ಮಾಡಲು ಸರ್ಕಾರ ಚಿಂತನೆ ನಡೆಸಲಾಗುತ್ತದೆ ಎಂದು ಅವರು ಹೇಳಿದರು. ಈ ಬಗ್ಗೆ ಸರ್ಕಾರ ತುರಿತಾಗಿ ಚಿಂತನೆ ನಡೆಸಲಾಗುತ್ತಿದೆ ಎಂದು ವಿವರಿಸಿದರು.
ಇವೆಲ್ಲ ವಿಷಯವನ್ನು ಚರ್ಚಿಸುವಾಗ ರಾಜ್ಯದಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಸುದ್ದಿಗಾರರವರಿಗೆ ಕೇಳಿದಾಗ ಅವರಿಂದ ಬಂದ ಉತ್ತರ ಮಂಡ್ಯ, ತುಮಕೂರು, ಹಾಸನ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ತೆಂಗು ಬೆಳೆಯುವ ರೈತರು ಸಂಕಷ್ಟದಲ್ಲಿದ್ದಾರೆ. ಅಧಿಕಾರಿಗಳೊಂದಿಗೆ ಸುದೀರ್ಘ ಸಭೆ ನಡೆಸಿ ಸಮಸ್ಯೆಯ ತೀವ್ರತೆ ತಿಳಿದುಕೊಳ್ಳಲಾಗಿದೆ. ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಶುಕ್ರವಾರ ಸಂಜೆ ನಗರಕ್ಕೆ ಆಗಮಿಸುತ್ತಿದ್ದು ತೆಂಗು ಬೆಳೆಗಾರರ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.
ತೆಂಗು ಬೆಳೆಗಾರರ ಸಮಸ್ಯೆ ಏನು?
ಕಪ್ಪು ತಲೆ ಹುಳು ಬಾಧೆ ಚರ್ಚೆ: ಕಪ್ಪು ತಲೆ ಹುಳು(ಬ್ಲ್ಯಾಕ್ ಹೆಡ್ಡೆಡ್ ಕ್ಯಾಟ್‌ಪಿಲ್ಲರ್)ವಿನ ಬಾಧೆಯಿಂದ ರಾಜ್ಯದ ಬಹಳಷ್ಟು ಜಿಲ್ಲೆಗಳ ರೈತರು ಸಂಕಷ್ಟಕ್ಕೆ ಒಳಗಾಗಿದ್ದು ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಈ ಬಗ್ಗೆ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆದಿದೆ. ‘ರೋಗಬಾಧೆಯಿಂದಾಗಿ ಯಾವ್ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಮಾಣದಲ್ಲಿ ತೆಂಗಿಗೆ ಹಾನಿಯಾಗಿದೆ ಎಂದು ಸಮೀಕ್ಷೆ ನಡೆಸಲಾಗುತ್ತಿದೆ. ಎರಡು ವಾರದಲ್ಲಿ ಸಮೀಕ್ಷೆ ವರದಿ ಬರಲಿದೆ’ ಎಂದು ಅಧಿಕಾರಿಗಳು ಸಭೆಯಲ್ಲಿ ತಿಳಿಸಿದ್ದಾರೆ. ವರದಿ ಬಂದ ಬಳಿಕ ಯಾವ ಕ್ರಮ ಕೈಗೊಳ್ಳಬೇಕು ಎಂಬುದನ್ನು ನಿರ್ಧರಿಸುವ ಬಗ್ಗೆ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು ಎಂದು ಮೂಲಗಳು ತಿಳಿಸಿವೆ.
ರೈತರಿಗೆ ಸಹಾಯ
ಕೀಟನಾಶಕ ಕೇಂದ್ರಗಳ ಸ್ಥಾಪನೆಯಿಂದ ರೈತರಿಗೆ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಉತ್ಪನ್ನಗಳು ಲಭ್ಯವಾಗಲಿವೆ. ಇದರಿಂದ ತೆಂಗು ಬೆಳೆಗಾರರಿಗೆ ಕಪ್ಪು ತಲೆ ಹುಳು ಸಮಸ್ಯೆಯನ್ನು ನಿಯಂತ್ರಿಸಲು ಸಹಾಯವಾಗಲಿದೆ. ಕೇಂದ್ರ ಸರ್ಕಾರದ ಈ ಯೋಜನೆಯು ಕರ್ನಾಟಕದ ರೈತರಿಗೆ ಆರ್ಥಿಕ ಒತ್ತಡವನ್ನು ಕಡಿಮೆ ಮಾಡಲು ಮತ್ತು ಕೃಷಿ ಉತ್ಪಾದಕತೆಯನ್ನು ಹೆಚ್ಚಿಸಲು ಸಹಕಾರಿಯಾಗಲಿದೆ.
ನಮ್ಮ ಈ ಸುದ್ದಿಯನ್ನು ಓದಿದ ಸುದ್ದಿಯನ್ನು ಓದಿದ ನಿಮಗೆ ಧನ್ಯವಾದಗಳು.