
ಈ ಜಿಲ್ಲೆಗಳಿಗೆ ಮತ್ತೆ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
ಹವಾಮಾನ : ರಾಜ್ಯದ ವಿವಿಧೆಡೆ ಮಳೆ ನಿರಂತರವಾಗಿ ಸುರಿಯುತ್ತಿರುವ ನಡುವೆಯೇ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ವಿವಿಧೆಡೆ ಬುಧವಾರ ಸಾಧಾರಣ ಮಳೆಯಾಗಿದೆ. ಹಗಲಿನ ಹೆಚ್ಚಿನ ಅವಧಿಯಲ್ಲಿ ಮೋಡ ಮತ್ತು ಬಿಸಿಲಿನ ವಾತಾವರಣವಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಬಂಟ್ವಾಳ ತಾಲೂಕಿನ ವಿವಿಧೆಡೆ ಮಂಗಳವಾರ ತಡರಾತ್ರಿ ಮತ್ತು ಬುಧವಾರ ಸಂಜೆ ಬಳಿಕ ಸಾಧಾರಣ ಮಳೆ ಸುರಿದಿದೆ. ಮಂಗಳೂರು ತಾಲೂಕಿನ ವಿವಿಧೆಡೆ ಹಗಲು ಮೋಡ ಮತ್ತು ಬಿಸಿಲಿನ ವಾತಾವರಣ ಇದ್ದರೆ, ಸಂಜೆಯ ವೇಳೆ ಕೆಲವೆಡೆ ಲಘು ಮಳೆಯಾಗಿದೆ….