ಅಕ್ಟೋಬರ್ 1 ರವರೆಗೆ ನಿರಂತರ ಮಳೆ‌ : ಹವಾಮಾನ ಇಲಾಖೆ

ಹವಾಮಾನ ಇಲಾಖೆ : ಪ್ರೀಯ ರೈತರೇ ನೀವು ನೋಡುತ್ತಿರುವ ಹಾಗೆ ಸದ್ಯದ ಮಟ್ಟಿಗೆ ಎಲ್ಲೆಡೆ ವರುಣನ ಆರ್ಭಟ ಜೋರಾಗಿದೆ. ಸದ್ದಿಲ್ಲದೆ ಮಳೆ ಸುರಿಯುತ್ತಿದೆ. ಹಾಗೂ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಕೂಡ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದೇ ರೀತಿ ಮೇಲ್ಕಾಣಿಸಿದ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖದನ್ವಯ ಭಾರತ ಹವಾಮಾನ ಇಲಾಖೆ, ಹವಾಮಾನ ಕೇಂದ್ರ ಬೆಂಗಳೂರು ಹಾಗೂ ಕೆ.ಎಸ್.ಎನ್.ಡಿ.ಎಂ.ಸಿ ರವರು ಮುಂದಿನ 10 ದಿನಗಳ ಹವಾಮಾನ ಮುನ್ನೆಚ್ಚರಿಕೆಗಳ ಕುರಿತು ವರದಿಯನ್ನು ನೀಡಿದ್ದಾರೆ.

ಯಾವ ಯಾವ ದಿನಾಂಕದಂದು ಜಾಸ್ತಿ ಮಳೆಯಾಗುವ ಸಾಧ್ಯತೆ ಇದೆ?

ದಿನಾಂಕ:26-09-2025 ರಿಂದ 28-09-2025 ರವರೆಗೆ ವಿಜಯಪುರ ಜಿಲ್ಲೆಯಲ್ಲಿ ಬಿರುಗಾಳಿಯೊಂದಿಗೆ (ಗಂಟೆಗೆ 30-40 ಕಿ.ಮೀ) ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹಾಗೂ ದಿನಾಂಕ:29-09-2025 ರಿಂದ 03-10-2025 ರವರೆಗೆ ರಾಜ್ಯದ ಕೆಲವು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಅಂತಾ ತಿಳಿಸಿರುತ್ತಾರೆ.

ಈ ಕೆಟ್ಟ ವಾತಾವರಣದಿಂದ ಪಾರಾಗಲು ಮೂನ್ಸೂಚನೆ ಕ್ರಮಗಳು –

ಈ ಮಳೆಯಿಂದ ಜನ-ಜಾನುವಾರುಗಳಿಗೆ ಯಾವುದೇ ರೀತಿಯ ತೊಂದರೆ ಹಾಗೂ ಅನಾನುಕೂಲತೆ ಆಗದಂತೆ ಮುನ್ನೆಚ್ಚರಿಕೆ ಕ್ರಮವಹಿಸುವುದು ಹಾಗೂ ಜಿಲ್ಲಾ/ಉಪವಿಭಾಗ/ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಪ್ರವಾಹ ಪರಿಸ್ಥಿತಿ ನಿಯಂತ್ರಣ ನೋಡಲ್ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲಿದ್ದು 24*7 ಕಾರ್ಯನಿರ್ವಹಿಸಿ, ಯಾವುದೇ ರೀತಿಯ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮವಹಿಸಿ, ರಕ್ಷಣೆ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಲು ಸನ್ನದ್ಧರಾಗಿರಲು ಮತ್ತು ರಜೆ ಮೇಲೆ ತೆರಳಲು/ಕೇಂದ್ರ ಸ್ಥಾನ ಬಿಡುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರಿಯವರ ಪೂರ್ವಾನುಮತಿ ಪಡೆಯತಕ್ಕದ್ದು ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟವಾಗಿ ತಿಳಿಸಿದ್ದಾರೆ.

ಅದೇ ರೀತಿ ಈಗ ಸದ್ಯಕ್ಕೆ ರಾಜ್ಯದಲ್ಲಿ ಮಳೆ ಅಬ್ಬರ ಇನ್ನೂ ಮುಂದುವರೆಯಲಿದ್ದು, ಅಕ್ಟೋಬರ್ 1 ರವರೆಗೆ 16 ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಅದಕ್ಕಾಗಿ ರೈತರು ಜಾನುವಾರುಗಳಿಗೆ ಹಾಗೂ ಬೆಳೆಗಳ ಉತ್ಪನ್ನಗಳ ಸಂರಕ್ಷಣೆ ಬಹಳ ಮುಖ್ಯವಾಗಿದೆ. ಹಾಗೂ ಶಾಲಾ ಮಕ್ಕಳು ಕೂಡ ಈ ವಾತಾವರಣದಿಂದ ಪಾರಾಗಲು ಮುನ್ನೆಚ್ಚರಿಕೆ ವಹಿಸಬೇಕು.

ಯಾವ ಯಾವ ಜಿಲ್ಲೆಗಳಲ್ಲಿ ಜಾಸ್ತಿ ಮಳೆ ಇದೆ.?

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ವಿಜಯಪುರ, ಬೀದ‌ರ್, ಕಲಬುರಗಿ, ರಾಯಚೂರು, ಯಾದಗಿರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ಬಾಗಲಕೋಟೆ, ಧಾರವಾಡ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ 16 ಜಿಲ್ಲೆಗಳಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಯಾವ ಯಾವ ಜಿಲ್ಲೆಗಳಲ್ಲಿ ಕಡಿಮೆ ಮಳೆ ಇದೆ?

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮ ರಾಜನಗರ, ಹಾಸನ, ದಾವಣಗೆರೆ, ಚಿತ್ರದುರ್ಗ, ಹಾವೇರಿ, ಗದಗ ಜಿಲ್ಲೆಗಳಿಯೂ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಹಗುರ ಮಳೆಯಾಗಲಿದೆ. ಸಪ್ಟೆಂಬರ್ 27 ರಿಂದ ಹೆಚ್ಚು ಮಳೆ ಸುರಿಯಲಿದೆ ಎಂದು ಇಲಾಖೆ ಅಂದಾಜಿಸಿದೆ. ಯೆಲ್ಲೋ ಆಲರ್ಟ್ ಘೋಷಿಸಲಾಗಿರುವ ಜಿಲ್ಲೆಗಳಲ್ಲಿ 120 ಮಿ. ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದೆ.

ವಾಯುಭಾರ ಕುಸಿತವು ಹವಾಮಾನ ವ್ಯವಸ್ಥೆಯಲ್ಲಿ ಒಂದು ಪ್ರಮುಖ ಘಟನೆಯಾಗಿದ್ದು, ಇದು ಕಡಿಮೆ ಒತ್ತಡದ ಪ್ರದೇಶಗಳಿಂದ ಉಂಟಾಗುತ್ತದೆ. ಸೆಪ್ಟೆಂಬರ್ 22, 2025ರಂದು, ಬಂಗಾಳದ ಉಪಸಾಗರದ ಮೇಲ್ಮಯಲ್ಲಿ ರೂಪುಗೊಂಡ ಕಡಿಮೆ ವಾಯುಭಾರ ವ್ಯವಸ್ಥೆಯು ದಕ್ಷಿಣ-ಪೂರ್ವ ಬಂಗಾಳದ ತೀರಗಳಲ್ಲಿ ತೀವ್ರಗೊಂಡಿದೆ. ಈ ವ್ಯವಸ್ಥೆಯು ಮಧ್ಯಪ್ರದೇಶ ಮತ್ತು ಒಡಿಷಾ ತೀರಗಳ ಕಡೆಗೆ ಸಾಗುತ್ತಿದ್ದು, ಇದರಿಂದ 40-50 ಕಿ.ಮೀ. ಪ್ರತಿ ಗಂಟೆಗೆ ಗಾಳಿ ವೇಗವು ಹೆಚ್ಚಾಗುತ್ತದೆ. IMDಯ ಪ್ರಕಾರ, ಈ ಕುಸಿತವು ಮುಂಗಾರು ಮಳೆಯ ಉಳ್ಳಿಕೆಯಾಗಿ ಮತ್ತು ಉಷ್ಣತೆಯ ಹೆಚ್ಚಳದಿಂದ ಉಂಟಾಗಿದ್ದು, ಮುಂದಿನ ಐದು ದಿನಗಳಲ್ಲಿ (ಸೆಪ್ಟೆಂಬರ್ 22ರಿಂದ 26ರವರೆಗೆ) ಭಾರಿ ಮಳೆಯನ್ನು ತರಲಿದೆ. ಈ ಘಟನೆಯು ಭಾರತದ ಬಹುತೇಕ ಭಾಗಗಳ ಹವಾಮಾನದಲ್ಲಿ ಬದಲಾವಣೆಯನ್ನು ತರಲಿದ್ದು, ವಿಶೇಷವಾಗಿ ದಕ್ಷಿಣ ರಾಜ್ಯಗಳಲ್ಲಿ ಗ್ರಾಹಕರಿಗೆ ಎಚ್ಚರಿಕೆಯ ಅಗತ್ಯವಿದೆ.

ಸೆಪ್ಟೆಂಬರ್‌ನಲ್ಲಿ ಸುರಿದ ಮಳೆಯಿಂದಾಗಿ ಸುಮಾರು 30 ಹೆಕ್ಟೇ‌ರ್ ಕೃಷಿ ಭೂಮಿಗೆ ಹಾನಿಯಾಗಿದೆ. ಇದಕ್ಕೆ ಸಂಬಂದಪಟ್ಟಂತೆ ಶೀಘ್ರದಲ್ಲಿ ಬೆಳೆ ನಷ್ಟ ಸಮೀಕ್ಷೆ ಪೂರ್ಣಗೊಳಿಸಲಾಗುವುದು. ದೀಪಾವಳಿ ಒಳಗೆ ಪರಿಹಾರ ಹಣವನ್ನು ಬ್ಯಾಂಕ್‌ ಖಾತೆಗೆ ಜಮಾ ಮಾಡಲಾಗುವುದು. ನಷ್ಟ ಉಂಟಾದ ಜಾಗಗಳಲ್ಲಿ ಸಾಲ ವಸೂಲಿಯನ್ನು ನಿಲ್ಲಿಸುವಂತೆ ಸೂಚಿಸಲಾಗಿದ್ದು, ಬ್ಯಾಂಕ್‌ಗಳಿಗೆ ಮುಂದಿನ ಪ್ರಕ್ರಿಯೆ ಮತ್ತು ಅಗತ್ಯ ಸೂಚನೆಗಳನ್ನು ಸರ್ಕಾರ ನೀಡಲಿದೆ ಎಂದು ವಿವರಿಸಿದರು.

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಗಮನಕ್ಕೆ:

ಗ್ರಾಮ ಪಂಚಾಯಿತಿಯ ಚುನಾವಣೆಗಾಗಿ ನೀವು ಮಾಡುವ ಪ್ರಚಾರ ಹಾಗೂ ಪ್ರತಿನಿತ್ಯದ ಕೆಲಸಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿಕೊಳ್ಳುವುದರಿಂದ ಜನಾಕರ್ಷಣೆ ಆಗುತ್ತದೆ. ಹಾಗೂ ನಿಮ್ಮ ಕಾರ್ಯ ವೈಖರಿ ಜನರಿಗೆ ತಿಳಿದು ಜನ ನಿಮ್ಮನ್ನು ಬೆಂಬಲಿಸಲು ಮುಂದಾಗುತ್ತಾರೆ. ಆದ್ದರಿಂದ ನಿಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಬೇಕಾದ ಪೋಸ್ಟರ್ಗಳು ಹಾಗೂ ವಿಡಿಯೋಗಳನ್ನು ನಾವು ಅತ್ಯುತ್ತಮ ಕಡಿಮೆ ದರದಲ್ಲಿ ಮಾಡಿಕೊಡುತ್ತೇವೆ ನಿಮಗೆ ಹಬ್ಬಗಳಿಗೆ ವಿಶೇಷ ಸಂದರ್ಭಗಳಲ್ಲಿ ಅಥವಾ ಹುಟ್ಟುಹಬ್ಬಗಳಲ್ಲಿ ಶುಭಕೋರುವ ಪೋಸ್ಟರ್ಗಳು ಬೇಕಿದ್ದರೆ ಈ ಕೆಳಗೆ ನೀಡಿರುವ ನಂಬರನ್ನು ಸಂಪರ್ಕಿಸಿ. 9845499218

Spread positive news

Leave a Reply

Your email address will not be published. Required fields are marked *