ಹೆಕ್ಟೇರಿಗೆ 30 ಸಾವಿರ ಬೆಳೆಹಾನಿ ಪರಿಹಾರ ಘೋಷಣೆ.

ಬೆಳೆಹಾನಿ : ಪ್ರೀಯ ರೈತರೇ ನೀವು ನೋಡುತ್ತಿರುವ ಹಾಗೆ ಉತ್ತರ ಕರ್ನಾಟಕದಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ರೈತರ ನೆರವಿಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಎನ್‌ಡಿಆರ್‌ಎಫ್‌ ಪರಿಹಾರದ ಜತೆಗೆ ಹೆಚ್ಚುವರಿ ಪ್ಯಾಕೇಜ್ ಅನ್ನು ಸಿಎಂ ಸಿದ್ದರಾಮಯ್ಯ ಬುಧವಾರ ಘೋಷಿಸಿದ್ದಾರೆ. ಈಗಾಗಲೇ ಹೆಕ್ಟೇರಿಗೆ 30 ಸಾವಿರ ಎಂದು ಯೋಚನೆ ನಡೆಸಿದ್ದು ಮಳೆಯ ಆಧಾರದ ಮೇಲೆ ಪರಿಹಾರ ಹಣ ವರ್ಗಾವಣೆ ಮಾಡಲಾಗುತ್ತದೆ.

ರೈತರಿಗೆ ಸಂದೇಶ ನೀಡಿದ ಸಚಿವರು –
ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ರೈತರಿಗೆ ಭರವಸೆ ನೀಡಿದ್ದು, ಸರ್ಕಾರವು ಯಾವುದೇ ಕಾರಣಕ್ಕೂ ರೈತರನ್ನು ಕೈಬಿಡುವುದಿಲ್ಲ ಎಂದು ತಿಳಿಸಿದ್ದಾರೆ. “ರೈತರು ನಮ್ಮ ರಾಜ್ಯದ ಬೆನ್ನೆಲುಬು. ಅವರಿಗೆ ಆಗಿರುವ ಯಾವುದೇ ನಷ್ಟಕ್ಕೆ ಸರ್ಕಾರವು ತಕ್ಷಣದ ಸಹಾಯವನ್ನು ಒದಗಿಸುತ್ತದೆ. ಎಲ್ಲಾ ರೈತರಿಗೂ ತಮ್ಮ ಬೆಳೆ ಹಾನಿಯ ಪರಿಹಾರವನ್ನು ಶೀಘ್ರವಾಗಿ ಒದಗಿಸಲು ನಾವು ಬದ್ಧರಾಗಿದ್ದೇವೆ,’ ಎಂದು ಅವರು ಹೇಳಿದ್ದಾರೆ. ರೈತರು ತಮ್ಮ ಬೆಳೆ ಹಾನಿಯ ವಿವರಗಳನ್ನು ಸ್ಥಳೀಯ ಕೃಷಿ ಅಧಿಕಾರಿಗಳಿಗೆ ಒದಗಿಸಿ, ಪರಿಹಾರ ಪಡೆಯಲು ಅಗತ್ಯವಾದ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕೆಂದು ಸಚಿವರು ಸೂಚಿಸಿದ್ದಾರೆ.

ರಾಜ್ಯದಲ್ಲಿ ಅತಿವೃಷ್ಟಿ ಮತ್ತು ನೆರೆ ಹಾವಳಿಯಿಂದ ಬೆಳೆ ಕಳೆದುಕೊಂಡ ರೈತರಿಗೆ ಪರಿಹಾರ ನೀಡುವ ಪ್ರಕ್ರಿಯೆ ಆರಂಭವಾಗಿದೆ. ಮುಂದಿನ 30 ದಿನಗಳಲ್ಲಿ ಎಲ್ಲ ಸಂತ್ರಸ್ತ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಹಣ ಜಮಾ ಆಗಲಿದೆ. ಸುಮಾರು 12.54 ಲಕ್ಷ ಹೆಕ್ಟೇರ್ ಬೆಳೆ ಹಾನಿಗೆ 2 ಸಾವಿರ ಕೋಟಿ ರೂ. ಪರಿಹಾರ ನೀಡಲಾಗುತ್ತಿದೆ. 10 ದಿನಗಳಲ್ಲಿ ಸಮೀಕ್ಷೆ ಪೂರ್ಣಗೊಳ್ಳಲಿದೆ.

ಸಮೀಕ್ಷೆ 10 ದಿನಗಳಲ್ಲಿ ಪೂರ್ಣಗೊಳ್ಳಲಿದೆ
ಸೆಪ್ಟೆಂಬರ್ ಮೊದಲ ವಾರದವರೆಗೆ ಸುರಿದ ಮಳೆಯಿಂದ ಸುಮಾರು 5.29 ಲಕ್ಷ ಹೆಕ್ಟೇರ್ ಬೆಳೆ ನಷ್ಟವಾಗಿತ್ತು. ಈ ಬೆಳೆ ಹಾನಿಗೆ ಪರಿಹಾರ ನೀಡಲು ಸಿದ್ಧತೆ ನಡೆಯುತ್ತಿದ್ದಾಗಲೇ, ಸೆಪ್ಟೆಂಬರ್ ಅಂತ್ಯದಲ್ಲಿ ಸುರಿದ ಭಾರಿ ಮಳೆ ಮತ್ತು ಭೀಮಾ ಜಲಾನಯನ ಪ್ರದೇಶದಲ್ಲಿ ಉಂಟಾದ ನೆರೆಯಿಂದಾಗಿ ಕಲಬುರಗಿ, ಯಾದಗಿರಿ, ಬೀದರ್ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸುಮಾರು 7.24 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ. ಹೀಗಾಗಿ, ಈ ನಾಲ್ಕು ಜಿಲ್ಲೆಗಳಲ್ಲಿ ಬೆಳೆ ಹಾನಿಯ ಜಂಟಿ ಸಮೀಕ್ಷೆಯನ್ನು ಮತ್ತೊಮ್ಮೆ ನಡೆಸಲಾಗುತ್ತಿದ್ದು, ಇದು 10 ದಿನಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಸಚಿವರು ಹೇಳಿದ್ದಾರೆ.

ಅತಿಯಾದ ಮಳೆಯಿಂದ ಆಗಿರುವ ಬೆಳೆ ಹಾನಿಯಾದ (Crop loss) ಕ್ಷೇತ್ರ ಮತ್ತು ರೈತರ ಕರಡು ಪಟ್ಟಿಯನ್ನು ಧಾರವಾಡ (Dharawad) ಜಿಲ್ಲಾಡಳಿತ ಪ್ರಕಟಿಸಿದ್ದು ಆಕ್ಷೇಪಣೆ ಸಲ್ಲಿಸಲು ಅಕ್ಟೋಬರ 10 ಕೊನೆಯ ದಿನವಾಗಿದೆ. ಹೀಗಾಗಿ ರೈತರು ಈಗಿನಿಂದಲೇ ಪಟ್ಟಿ ಪರಿಶೀಲನೆ ನಡೆಸಿ ಆಕ್ಷೇಪಣೆಗಳಿದ್ದರೆ ಸಲ್ಲಿಸಬೇಕಾಗಿದೆ. 2025ರ ಸಾಲಿನ ಅಗಸ್ಟ್ ತಿಂಗಳಿನಲ್ಲಿ ಧಾರವಾಡ ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದ ಉಂಟಾದ ಬೆಳೆಹಾನಿಗೆ ಸಂಬಂಧಿಸಿದಂತೆ ಪರಿಹಾರವನ್ನು ಪಾವತಿಸುವ ಕುರಿತು ಜಂಟಿ ಸಮೀಕ್ಷೆಯನ್ನು ನಡೆಸಲಾಗಿದೆ. ಸಮೀಕ್ಷಾ ವರದಿಯನ್ನು ಅಂತಿಮಗೊಳಿಸಲಾಗಿದ್ದು, ತಾಲ್ಲೂಕುವಾರು ಎಫ್ಐಡಿ ಹೊಂದಿದ ರೈತರ ಬೆಳೆಹಾನಿ ಕ್ಷೇತ್ರದ ವಿವರಗಳನ್ನು ಭೂಮಿ ಪರಿಹಾರ ತಂತ್ರಾಂಶದಲ್ಲಿ ದಾಖಲಿಸಲಾಗಿದೆ.

ವೈಮಾನಿಕ ಸಮೀಕ್ಷೆ ಮತ್ತು ಅಧಿಕಾರಿಗಳ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ, NDRF ಹಣದ ಜತೆಗೆ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ಪ್ರತೀ ಹೆಕ್ಟೇರ್‌ಗೆ ರೂ. 8500 ಪರಿಹಾರ ಕೊಡಲಿದೆ. ಎನ್‌ಡಿಆರ್‌ಎಫ್‌ ಮತ್ತು ರಾಜ್ಯ ಸರ್ಕಾರದ ಪ್ಯಾಕೇಜ್ ಸೇರಿ ರೂ. 2000 ರಿಂದ ರೂ. 2500 ಕ್ಕೂ ಹೆಚ್ಚು ಕೋಟಿ ಹಣ ಪರಿಹಾರ ಕೊಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಎನ್‌ಡಿಆರ್‌ಎಫ್‌ ನಿಯಮದ ಪ್ರಕಾರ ಖುಷ್ಕಿ ಜಮೀನಿಗೆ ಹೆಕ್ಟೇರ್‌ಗೆ 8500 ರೂ, ನೀರಾವರಿ ಜಮೀನಿಗೆ ಹೆಕ್ಟೇರ್‌ಗೆ 17 ಸಾವಿರ, ಬಹು ವಾರ್ಷಿಕ ಬೆಳೆಗೆ 22,500 ರೂ. ಪರಿಹಾರ ಇದೆ. ಈ ಹಣವನ್ನು ಸಮೀಕ್ಷೆ ಮುಗಿದ ತಕ್ಷಣ ಬಿಡುಗಡೆ ಮಾಡಲಾಗುತ್ತದೆ.

ಭೀಮಾ, ಕೃಷ್ಣಾ ನದಿ ಅಬ್ಬರಕ್ಕೆ ಕಲ್ಯಾಣ ಕರ್ನಾಟಕ ತತ್ತರಿಸಿ ಹೋಗಿದೆ. ಅಪಾರ ಬೆಳೆ, ಆಸ್ತಿ ಪಾಸ್ತಿ ನಾಶವಾಗಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಇಂದು ಕಲ್ಯಾಣ ಕರ್ನಾಟಕ ಭಾಗದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು. ಕಲ್ಯಾಣ ಕರ್ನಾಟಕದ ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ ವ್ಯಾಪಕ ಮಳೆಯಿಂದಾಗಿ ಅಪಾರ ಪ್ರಮಾಣ ಬೆಳೆ ಹಾನಿಯಾಗಿದ್ದು, ಈ ನಿಟ್ಟಿನಲ್ಲಿ 2000 ಸಾವಿರ ಕೋಟಿ ಪರಿಹಾರವನ್ನು ಸಿಎಂ ಸಿದ್ದರಾಮಯ್ಯ ಅವರು ಇಂದು ಘೋಷಣೆ ಮಾಡಿದರು. ಇದೊಂದು ಮಹತ್ವದ ನಿರ್ಧಾರ ಎಂದು ಸರ್ಕಾರ ಹೇಳುತ್ತಿದೆ.

ಈ ವರ್ಷ ಬೆಳೆಹಾನಿ ಪರಿಹಾರದ ಮೊತ್ತ ಎಷ್ಟಿದೆ?
ಮಳೆಯಾಶ್ರಿತ ಬೆಳೆ ಹಾನಿಗೆ ಪ್ರತಿ ಹೆಕ್ಟೇರ್‌ಗೆ 17,000 ರೂ.
ನೀರಾವರಿ ಪ್ರದೇಶದ ಬೆಳೆ ಹಾನಿಗೆ ಪ್ರತಿ ಹೆಕ್ಟೇರ್‌ಗೆ 25,500 ರೂ.
ದೀರ್ಘಕಾಲಿಕ ಬೆಳೆ ಹಾನಿಗೆ ಪ್ರತಿ ಹೆಕ್ಟೇರ್‌ಗೆ 31,000 ರೂ.

ಇಂದು ನಾಲ್ಕು ಜಿಲ್ಲಗಳ ಸಮೀಕ್ಷೆ ಮಾಡಲಾಗಿದೆ. ಈ ಬಾರಿ ವಾಡಿಕೆಗಿಂತ ಮಳೆ ಹೆಚ್ಚಾಗಿದೆ ಎಂದರು. ಅಲ್ಲದೇ, ಮಹಾರಾಷ್ಟ್ರದ ಜಲಾಶಯದಿಂದ ನೀರು ಬಿಡಲಾಗಿದೆ. ಇದರಿಂದ ಭೀಮಾ ತೀರದ ಗ್ರಾಮಗಳಲ್ಲಿ ಸಾಕಷ್ಟು ಹಾನಿಯಾಗಿದೆ. ಜಮೀನುಗಳು ಕೆರೆಯಂತಾಗಿ ಬೆಳೆ ನಾಶವಾಗಿದೆ. 8 ಜಿಲ್ಲೆಯಲ್ಲಿ 9 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶ ಬೆಳೆಹಾನಿಯಾಗಿದೆ. ಇನ್ನು ಹೆಚ್ಚಿನ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೂ ಮನವಿ ಮಾಡಲಾಗುವುದು ಎಂದ ಸಿಎಂ, ಕೇಂದ್ರಕ್ಕೆ ಸಚಿವರ ನಿಯೋಗವನ್ನು ಕಳುಹಿಸುವುದಾಗಿ ತಿಳಿಸಿದರು.

ಅದೇ ರೀತಿ ಈ ಪ್ರಕೃತಿ ವಿಕೋಪದ ನಡುವೆ ಮನೆ ಮುಳುಗಿದ್ರೆ, ತಕ್ಷಣವೇ 5 ಸಾವಿರ ರೂಪಾಯಿ ಪರಿಹಾರವನ್ನು ನೀಡಲಾಗುವುದು. ರಸ್ತೆ ,ಶಾಲೆ, ಸೇತುವೆ ಎಲ್ಲದಕ್ಕೂ ಪರಿಹಾರ ನೀಡುತ್ತೇವೆ. ರಾಜ್ಯದಲ್ಲಿ ಮಳೆಗೆ 422 ಜಾನುವಾರು ಬಲಿಯಾಗಿವೆ. ಯಾದಗಿರಿಯಲ್ಲಿ 245 ಜಾನುವಾರು ಮೃತಪಟ್ಟಿವೆ. ಸರ್ಕಾರದಿಂದ ಈಗಾಗಲೇ ಪರಿಹಾರ ನೀಡಲಾಗಿದೆ ಎಂದು ಹೇಳಿದರು.

ಸೆಪ್ಟೆಂಬರ್‌ನಲ್ಲಿ ಸುರಿದ ಮಳೆಯಿಂದಾಗಿ ಸುಮಾರು 30 ಹೆಕ್ಟೇ‌ರ್ ಕೃಷಿ ಭೂಮಿಗೆ ಹಾನಿಯಾಗಿದೆ. ಇದಕ್ಕೆ ಸಂಬಂದಪಟ್ಟಂತೆ ಶೀಘ್ರದಲ್ಲಿ ಸಂಪೂರ್ಣ ಬೆಳೆ ನಷ್ಟ ಸಮೀಕ್ಷೆ ಪೂರ್ಣಗೊಳಿಸಲಾಗುವುದು. ಹಾಗೂ ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡಿ ಪ್ರವಾಹ ಪೀಡಿತ ಪ್ರದೇಶಗಳಿಗೆ ದೀಪಾವಳಿ ಒಳಗೆ ಪರಿಹಾರ ಹಣವನ್ನು ಬ್ಯಾಂಕ್‌ ಖಾತೆಗೆ ಜಮಾ ಮಾಡಲಾಗುವುದು. ನಷ್ಟ ಉಂಟಾದ ಜಾಗಗಳಲ್ಲಿ ಸಾಲ ವಸೂಲಿಯನ್ನು ನಿಲ್ಲಿಸುವಂತೆ ಸೂಚಿಸಲಾಗಿದ್ದು, ಬ್ಯಾಂಕ್‌ಗಳಿಗೆ ಮುಂದಿನ ಪ್ರಕ್ರಿಯೆ ಮತ್ತು ಅಗತ್ಯ ಸೂಚನೆಗಳನ್ನು ಸರ್ಕಾರ ನೀಡಲಿದೆ ಎಂದು ವಿವರಿಸಿದರು.

Spread positive news

Leave a Reply

Your email address will not be published. Required fields are marked *