ಮತ್ತೆ ಚಂಡಮಾರುತ ಎಫೆಕ್ಟ್, 12 ಜಿಲ್ಲೆಗಳಿಗೆ ಭಾರಿ ಅಲರ್ಟ್

ಚಂಡಮಾರುತ : ಪ್ರೀಯ ರೈತರೇ ಸದ್ಯದ ಸ್ಥಿತಿಯಲ್ಲಿ ವಾತಾವರಣ ತುಂಬಾ ಹದಗೆಟ್ಟಿದೆ. ಕೆಲವು ಕಡೆ ಧಾರಾಕಾರ ಮಳೆ ಸುರಿದಿದೆ. ಕೆಲವು ಕಡೆ ಬಿಸಿಲಿನ ತಾಪ, ತಂಪಾದ ವಾತಾವರಣ ಹೀಗೆ ಸದ್ಯದ ಸ್ಥಿತಿಯಲ್ಲಿ ವಾತಾವರಣ ಸುಧಾರಣೆ ಇಲ್ಲ. ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ. ವೇಗದ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡಿನ ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚಿನೊಂದಿಗೆ ಭಾರಿ ಮಳೆಯಾಗಲಿದೆ.

ಅದೇ ರೀತಿ ಈಗ ಈ ವಾತಾವರಣದಿಂದ ಬಳ್ಳಾರಿ ತಾಲ್ಲೂಕಿನ ಕಮ್ಮರಚೇಡು, ರೂಪನಗುಡಿ, ರಾಯಪುರ, ಎತ್ತಿನಬೂದಿಹಾಳ ಸೇರಿದಂತೆ ವಿವಿಧ ಹಳ್ಳಿಗಳಲ್ಲಿ ಹತ್ತಿ ಬೆಳೆಯಲ್ಲಿ ತಂಬಾಕು ವೈರಸ್ ರೋಗದ ಲಕ್ಷಣ ಕಾಣಿಸಿಕೊಂಡಿರುವ ಬಗ್ಗೆ ಹಗರಿಯ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿಗಳ ತಂಡ ಬುಧವಾರ ಭೇಟಿ ನೀಡಿ ನಿರ್ವಹಣಾ ಕ್ರಮಗಳ ಕುರಿತು ರೈತರಲ್ಲಿ ಸಲಹೆ ಹಾಗೂ ಜಾಗೃತಿ ಮೂಡಿಸಿದ್ದಾರೆ.

ಕರಾವಳಿ, ಮಲೆನಾಡು ಹಾಗೂ ಹಳೇ ಮೈಸೂರು ಭಾಗದ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಇಂದು, ನಾಳೆ ಭಾರೀ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲೂ ಗುರುವಾರದಿಂದ (ಅ.23) ಉತ್ತಮ ಮಳೆಯಾಗಲಿದೆ. ಕೆಲವೆಡೆ ರಭಸದ ಮಳೆಯ ಜತೆಗೆ ವೇಗದ ಗಾಳಿಯೂ ಬೀಸಲಿದೆ. ಅ.28ರವರೆಗೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ 1 ವಾರ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಹವಾಮಾನ ಇಲಾಖೇ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಹೀಗಾಗಿ ರಾಜ್ಯದಲ್ಲಿ ಅಕ್ಟೋಬರ್ 25 ರವರಗೆ ಮಳೆ ಸುರಿಯುವ ಸಾಧ್ಯತೆಯಿದೆ.

ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಸಂಜೆ ನಂತರ ಗುಡುಗು ಸಹಿತ ಮಳೆ ಸಾಧ್ಯತೆ ಇದ್ದು ಗಂಟೆಗೆ 30-40ಕಿ.ಮೀ ವೇಗದಲ್ಲಿ ಗಾಳಿ ಸಹಿತ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇನ್ನು ದಕ್ಷಿಣ, ಉತ್ತದ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.

ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ –

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಇಲ್ಲೆಲ್ಲಾ ಯೆಲ್ಲೋ ಅಲರ್ಟ್ –

ವಿಜಯನಗರ, ತುಮಕೂರು, ಶಿವಮೊಗ್ಗ, ಮೈಸೂರು, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಅ.29ರವರೆಗೆ ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆ –
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ ಪ್ರದೇಶದಲ್ಲಿ ಮಳೆ ಆರ್ಭಟವು ಭಾರೀ ಜೋರಾಗಿದೆ. ಈ ಭಾಗದಲ್ಲಿ ಒಂದೇ ದಿನದಲ್ಲಿ 21 ಸೆಂ.ಮೀ.ಗಿಂತ ಹೆಚ್ಚಿನ ಮಳೆಯಾಗಿದೆ. ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ ಕಂಡುಬರುವ ಕಡಿಮೆ ಒತ್ತಡದ ಪ್ರದೇಶವು ಕರಾವಳಿ ದಾಟಿದ ನಂತರ ತಮಿಳುನಾಡಿನ ಉತ್ತರ ಕರಾವಳಿ ತಲುಪಿದ್ದು, ಇದು ಈ ವಿವಿಧ ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ಸೃಷ್ಟಿ ಮಾಡಿದೆ. ಕರಾವಳಿ ಕರ್ನಾಟಕ, ಕೇರಳ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ.

ಪ್ರವಾಹ ಭೀತಿ: ಇನ್ನು ವಾಯುಭಾರ ಕುಸಿತದ ಕಾರಣದಿಂದ ಆಂಧ್ರಪ್ರದೇಶ, ತಮಿಳುನಾಡು ಹಾಗೂ ಕೇರಳ ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದ್ದು ವಿವಿಧ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ಆತಂಕ ಶುರುವಾಗಿದೆ. ಹೀಗಾಗಿ, ಆಂಧ್ರಪ್ರದೇಶ ಸೇರಿದಂತೆ ವಿವಿಧ ಭಾಗದಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ಮಾಡಲಾಗಿದೆ.

Spread positive news

Leave a Reply

Your email address will not be published. Required fields are marked *