ಪ್ರೀಯ ರೈತರೇ ಇವತ್ತು ನಾವು ಒಂದು ಆಘಾತಕಾರಿ ಮಾಹಿತಿ ಕೊಡುತ್ತೇನೆ. ರಾಜ್ಯದಲ್ಲಿ ಎಲ್ಲಿ ನೋಡಿದರು ಅನ್ಯಾಯ ಆಗುತ್ತಿದೆ. ರೈತರು, ಸಾರ್ವಜನಿಕರು ಒದ್ದಾಡುವ ಸ್ಥಿತಿ ನಿರ್ಮಾಣವಾಗಿದೆ. ಜನರು ಕುಡಿಯಲು ಉಪಯೋಗಿಸುವ ಕರ್ನಾಟಕದ 12 ನದಿಗಳ ನೀರಿನ ಗುಣಮಟ್ಟದ ಕುರಿತು ಆಘಾತಕಾರಿ ವರದಿ ಹೊರಬಿದ್ದಿದೆ. ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ (Karnataka State Pollution Control Board) ನೀಡಿದ ವರದಿ ಬೆಚ್ಚಿ ಬೀಳಿಸುವಂತಿದೆ.
ಸಾರ್ವಜನಿಕರೆ ನೀವು ನೋಡುತ್ತಿರುವ ಹಾಗೆ ನಮ್ಮ ರಾಜ್ಯದ ರೈತರ ಜೀವನದಿ ಕಾವೇರಿ (Cauvery River), ಉತ್ತರ ಕರ್ನಾಟಕದ ಜೀವನಾಡಿ ಕೃಷ್ಣಾ ನದಿ (Krishna River) ನೀರು ಸೇರಿದಂತೆ 12 ನದಿಗಳ ನೀರು ಕುಡಿಯಲು ಯೋಗ್ಯವಲ್ಲ ಎಂದು ವರದಿ ತಿಳಿಸಿದೆ. ವರದಿಯಲ್ಲಿ ಕೃಷ್ಣಾ ನದಿ ಸಿ ದರ್ಜೆಯಲ್ಲಿ ಗುರುತಿಸಿಕೊಂಡಿರುವುದು ಉತ್ತರಕರ್ನಾಟಕ, ಹೈದರಾಬಾದ್ ಕರ್ನಾಟಕದ ಕೃಷ್ಣಾ ತೀರದ ಜನರಿಗೆ ಆತಂಕ ಮೂಡಿಸಿದೆ.
ಬಾಗಲಕೋಟೆ ಜಿಲ್ಲೆಯಲ್ಲಿ ಸಕ್ಕರೆ ಕಾರ್ಖಾನೆಗಳ ಕಲ್ಮಶ ನೀರು, ಜನರು ಬಳಸಿ ಬಿಡುವ ಮಲಿನ ನೀರು, ಚರಂಡಿ ನೀರು ಹಳ್ಳ ಕೊಳ್ಳಗಳ ಮೂಲಕ ಕೃಷ್ಣಾ ನದಿಗೆ ಸೇರ್ಪಡೆಯಾಗುತ್ತಿದೆ. ಬಾಗಲಕೋಟೆ, ಬೆಳಗಾವಿ, ವಿಜಯಪುರ, ರಾಯಚೂರು, ಯಾದಗಿರಿ ಜನರ ಜೀವನಾಡಿ ಕೃಷ್ಣಾ ನದಿಯೂ ಕಲುಷಿತವಾಗಿದೆ. ಸ್ವಚ್ಛತೆಯಲ್ಲಿ ಕೃಷ್ಣಾ ನದಿ ಸಿ ದರ್ಜೆಗೆ ಸೇರಿದ್ದು , ಶುದ್ದೀಕರಣ ಮಾಡಿಯೇ ನೀರು ಕುಡಿಯಬೇಕು. ಇಲ್ಲದಿದ್ದರೆ ಅಪಾಯ ಖಚಿತ ಎಂಬುದು ಮಾಲಿನ್ಯ ನಿಯಂತ್ರಣ ಮಂಡಳಿ ಪರೀಕ್ಷಾ ವರದಿಯಿಂದ ಗೊತ್ತಾಗಿದೆ.
ಬಾಗಲಕೋಟೆ ಜಿಲ್ಲೆಯ 205 ಹಳ್ಳಿಹಳಿಗೆ ಕೃಷ್ಣಾ ನದಿನೀರು ಜೀವಜಲವಾಗಿದೆ. ಈ ಹಳ್ಳಿಗಳ ಜನರ ದಾಹ ನೀಗಿಸುವ ಕೃಷ್ಣಾ ನದಿ ಕಲ್ಮಶವಾಗುತ್ತಿದೆ. ನೋಡಲು ತಿಳಿಯಾಗಿ ಕಂಡರೂ ಅಗೋಚರವಾಗಿರುವ ಕಲ್ಮಶ ಜನರ ದೇಹ ಸೇರುತ್ತಿದೆ ಎಂಬ ಸಂಶಯ ಶುರುವಾಗಿದೆ.
ಕೃಷ್ಣ ಮತ್ತು ಕಾವೇರಿ ನದಿಗಳ ವಿಷಯವು ಅವುಗಳ ನಡುವಿನ ನೀರಿನ ಹಂಚಿಕೆಯ ವಿವಾದಕ್ಕೆ ಸಂಬಂಧಿಸಿದೆ, ವಿಶೇಷವಾಗಿ ಕರ್ನಾಟಕ ಮತ್ತು ತಮಿಳುನಾಡಿನ ನಡುವೆ. ಕಾವೇರಿ ನದಿ ವಿವಾದವನ್ನು ಬಗೆಹರಿಸಲು 1990 ರಲ್ಲಿ ಸುಪ್ರೀಂ ಕೋರ್ಟ್ ಒಂದು ಟ್ರಿಬ್ಯೂನಲ್ ರಚಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿತು, 2018 ರಲ್ಲಿ ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ನೀಡಿತು, ಮತ್ತು ಈ ತೀರ್ಪನ್ನು ಜಾರಿಗೆ ತರಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವನ್ನು ಸ್ಥಾಪಿಸಲಾಯಿತು. ಕೃಷ್ಣಾ ನದಿಯ ನೀರು ಹಂಚಿಕೆಯ ವಿವಾದ ಕೂಡ ಇದೆ, ಅಲ್ಲಿ ನೀರು ಹಂಚಿಕೆ ಸಮಸ್ಯೆಗಳು ಉದ್ಭವಿಸುತ್ತವೆ.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಮಹಾನದಿ–ಗೋದಾವರಿ–ಕೃಷ್ಣಾ–ಕಾವೇರಿ– ಪೆನ್ನಾರ್ ನದಿಗಳ ಜೋಡಣೆಯಿಂದ ಕರ್ನಾಟಕ ರಾಜ್ಯಕ್ಕೆ ನೈಜವಾಗಿ ಸಿಗುವುದು 2.19 ಟಿಎಂಸಿ ಅಡಿ ನೀರು ಮಾತ್ರ.
ನೀರಿನ ಹಂಚಿಕೆಯಲ್ಲಿ ಭಾರಿ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಕರ್ನಾಟಕ ಸರ್ಕಾರ, ಈ ತಾರತಮ್ಯ ಸರಿಪಡಿಸದಿದ್ದರೆ ಕರಡು ಒಪ್ಪಂದಕ್ಕೆ ಸಹಿ ಹಾಕುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ರಾಜ್ಯವಾರು ನೀರಿನ ಹಂಚಿಕೆಯನ್ನು ಪುನರ್ ಪರಿಶೀಲಿಸಬೇಕು ಎಂದು ಆಗ್ರಹಿಸಿ ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರು ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆಯ ಮಹಾನಿರ್ದೇಶಕರಿಗೆ ಜೂನ್ 19ರಂದು ಪತ್ರ ಬರೆದಿದ್ದಾರೆ.
ಬಯಲುಸೀಮೆ ಜಿಲ್ಲೆಗಳು ಹನಿ ನೀರಿಗೂ ಪರದಾಡಬೇಕಾದ ಪರಿಸ್ಥಿತಿ ಇದೆ. ಎತ್ತಿನಹೊಳೆ ಯೋಜನೆಯಲ್ಲಿ ನೀರು ಹರಿಯದೇ ಹಣದ ಹೊಳೆ ಹರಿಯುತ್ತಿದೆ. ಕೃಷ್ಣಾ ನದಿಯ ಪಾಲನ್ನಾದರೂ ಕೊಡಲಿ ಎಂಬ ಬಯಲುಸೀಮೆ ಜಿಲ್ಲೆಗಳ ಬೇಡಿಕೆ ಬಗ್ಗೆ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಕೃಷ್ಣಾ ನದಿಯಿಂದ ಒಂದು ಹನಿ ನೀರು ತೆಗೆದುಕೊಂಡು ಹೋಗಲು ನಾವು ಬಿಡುವುದಿಲ್ಲ ಎನ್ನುವ ಮೂಲಕ ರಾಜ್ಯದಲ್ಲೇ ಸಂಘರ್ಷದ ಕಿಡಿ ಹೊತ್ತಿಸಿದ್ದಾರೆ

