ಮುಂದಿನ 3 ದಿನದ ಹವಾಮಾನ ವರದಿ. ಭಾರಿ ಮಳೆ ಮೂನ್ಸೂಚನೆ.

ಹವಾಮಾನ ವರದಿ : ಪ್ರೀಯ ರೈತರೇ ಸದ್ಯದ ಸ್ಥಿತಿಯಲ್ಲಿ ವಾತಾವರಣ ತುಂಬಾ ಹದಗೆಟ್ಟಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇದೀಗ ಚಳಿ ಆವರಿಸಿಬಿಟ್ಟಿದೆ. ಈ ನಡುವೆಯೇ ರಾಜಧಾನಿ ಬೆಂಗಳೂರು ಸೇರಿದಂದತೆ ಹಲವೆಡೆ ಮುಂದಿನ ಮೂರು ದಿನ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ನಡುವೆ ಕೆಲವು ಕಡೆ ಧಾರಾಕಾರ ಮಳೆ ಸುರಿದಿದೆ. ಕೆಲವು ಕಡೆ ಬಿಸಿಲಿನ ತಾಪ, ತಂಪಾದ ವಾತಾವರಣ ಹೀಗೆ ಸದ್ಯದ ಸ್ಥಿತಿಯಲ್ಲಿ ವಾತಾವರಣ ಸುಧಾರಣೆ ಇಲ್ಲ.

ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ ಸುಮಾರು 25 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ತಾಪಮಾನ ಸುಮಾರು 18 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ. ಈ ವಾರ ಪೂರ್ತಿ ನಗರದಲ್ಲಿ ಚಳಿಯ ನಡುವೆ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮುಂದಿನ ಹಲವು ದಿನಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನು ಹೊರತುಪಡಿಸಿ ಬಹುತೇಕ ಜಿಲ್ಲೆಗಳಲ್ಲಿ ಭೀಕರ ಚಳಿ ಮುಂದುವರೆಯಲಿದ್ದು, ಮುಂದಿನ ದಿನಗಳಲ್ಲಿ ಇದರ ಪ್ರಮಾನ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚು ಚಳಿ ಇರಲಿದೆ ಎಂದು ಎಚ್ಚರಿಕೆ ನೀಡಿದೆ.

ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ. ವೇಗದ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡಿನ ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚಿನೊಂದಿಗೆ ಭಾರಿ ಮಳೆಯಾಗಲಿದೆ.

ಇನ್ನೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ, ಶಿವಮೊಗ್ಗ, ತುಮಕೂರು, ವಿಜಯನಗರದ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ತಿಳಿಸಿದೆ.

ಉತ್ತರ ಒಳನಾಡಿದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ. ಕಳೆದ ಕೆಲ ದಿನಗಳ ಹಿಂದೆಯಷ್ಟೇ ಬೀದರ್ನಲ್ಲಿ ರಾಜ್ಯದಲ್ಲೇ ಕನಿಷ್ಠ ತಾಪಮಾನ 10 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಮುಂದಿನ ದಿನಗಳಲ್ಲಿ ಈ ಭಾಗಳಲ್ಲಿ ಚಳಿ ಪ್ರಮಾಣ ಮತ್ತಷ್ಟು ಹೆಚ್ಚಾಗಲಿದೆ ಎನ್ನುವ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಕಾರವಾರ ಜಿಲ್ಲೆಗಳಲ್ಲಿ ಬಹುತೇಕ ಭಾಗಗಳಲ್ಲಿ ಚಳಿ ವಾತಾವರ ಇರಲಿದ್ದು, ಕೆಲವೆಡ ಮಾತ್ರ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆಯಿದೆ.

ವರುಣನ ಆರ್ಭಟ ಜೋರಾಗಿದೆ. ಎಲ್ಲಾ ಬೆಳೆಗಳು ನೀರು ಪಾಲಾಗಿ ನಿಂತಿದೆ. ಇಂತಹ ಸ್ಥಿತಿಯಲ್ಲಿ ರೈತರ ಪರವಾಗಿ ನಿಲ್ಲುವುದು ಎಲ್ಲಾ ನಾಗರಿಕರ ಕರ್ತವ್ಯವಾಗಿದೆ. ಹಾಗೂ ಸರ್ಕಾರವು ಇದರ ಬಗ್ಗೆ ಹೆಚ್ಚಿನ ಗಮನ ನೀಡಬೇಕಾಗಿದೆ. ಬೆಳೆವಿಮೆ ಹಣ ಬಿಡುಗಡೆಯ ಮಾಹಿತಿಯು ಜಿಲ್ಲೆ ಮತ್ತು ಬೆಳೆ ಹಾನಿಯ ಅವಲಂಬಿತವಾಗಿರುತ್ತದೆ. ಉದಾಹರಣೆಗೆ, ಧಾರವಾಡ ಜಿಲ್ಲೆಯಲ್ಲಿ ಕುಂದಗೋಳ ಮತ್ತು ಹುಬ್ಬಳ್ಳಿ ತಾಲೂಕಿನ ರೈತರಿಗೆ ಫಸಲ್ ಬೀಮಾ ಯೋಜನೆಯಡಿ 31.75 ಕೋಟಿ ರೂ. ಬೆಳೆವಿಮೆ ಹಣ ಬಿಡುಗಡೆಯಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾಸನ, ಶಿವಮೊಗ್ಗ, ಹಾವೇರಿ, ಕೊಪ್ಪಳ, ಹುಬ್ಬಳ್ಳಿ, ಬಳ್ಳಾರಿ, ಬಾಗಲಕೋಟೆ, ಧಾರವಾಡ, ತುಮಕೂರು, ಚಿತ್ರದುರ್ಗ ಮತ್ತು ಉಡುಪಿ ಜಿಲ್ಲೆಗಳಿಗೆ ಈ ವಾರವಿಡೀ ಭಾರೀ ಮಳೆಯ ಸೂಚನೆಯಿದೆ. ಅದರಲ್ಲೂ ಇಂದು ಮತ್ತು ನಾಳೆ ಗುಡುಗು, ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಇಂದು ಬೆಂಗಳೂರಿನಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚನೆಯಿದೆ.

Spread positive news

Leave a Reply

Your email address will not be published. Required fields are marked *