ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭ. ಪ್ರತಿ ಕ್ವಿಂಟಾಲ್ 2400/ ರೂಪಾಯಿ.
ಮೆಕ್ಕೆಜೋಳ ಖರೀದಿ : ಮೆಕ್ಕೆಜೋಳ ಬೆಲೆ ಕುಸಿದು ಕಂಗಾಲಾಗಿರುವ ರೈತರು ಖರೀದಿ ಕೇಂದ್ರ ತೆರೆದು ಬೆಂಬಲ ಬೆಲೆ ನೀಡಲು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧ ಸಭಾಂಗಣದಲ್ಲಿ ಪಶು ಮತ್ತು ಕುಕ್ಕುಟ ಆಹಾರ ಉತ್ಪಾದಕರೊಂದಿಗೆ ನಡೆಸಿದ ಸಭೆಯಲ್ಲಿ ಮಹತ್ವ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಈ ವರ್ಷ ಅತ್ಯಧಿಕ ಪ್ರಮಾಣದಲ್ಲಿ ಮೆಕ್ಕೆಜೋಳ ಉತ್ಪಾದನೆಯಾಗಿದ್ದು, ರೈತರಿಗೆ ನೆರವಾಗುವ ಉದ್ದೇಶದಿಂದ ರಾಜ್ಯ ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಪಶು ಹಾಗೂ ಕುಕ್ಕುಟ ಆಹಾರ ಉತ್ಪಾದಕರು ಕೇಂದ್ರ ಸರ್ಕಾರ…

