ಪ್ರೀಯ ರೈತರೇ ಮೆಕ್ಕೆಜೋಳ ಬೆಳೆಗಾರರಿಗೆ ಸಿಹಿ ಸುದ್ದಿ ನೀಡಿದ ಸರ್ಕಾರ. ರೈತರ ಪರವಾಗಿ ನಿಂತು ತನ್ನ ಕೆಲಸ ಮಾಡುತ್ತಿದೆ. ಈಗಾಗಲೇ ನೀಡಿದ ಆದೇಶದ ಮೇರೆಗೆ ಸರ್ಕಾರವು ತನ್ನ ನಿರ್ಧಾರ ಮಾಡಿದ್ದು, ಸರ್ಕಾರದ ಆದೇಶ ಸಂಖ್ಯೆ ಸಿಒ 243 ಎಂಆರ್ಇ 2025 (ಭಾ-11ದಿನಾಂಕ:30.11.2025ರಂದು ಹೊರಡಿಸಿರುವ ಆದೇಶದ ಅನುಗುಣವಾಗಿ ದಿನಾಂಕ: 02.12.2025ರಲ್ಲಿನ ತಿದ್ದುಪಡಿ ಆದೇಶದಲ್ಲಿ “FRUITS ತಂತ್ರಾಂಶದಲ್ಲಿ ಲಭ್ಯವಾಗುವ ರೈತರು ಹೊಂದಿರುವ ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ಪ್ರತಿ ಎಕರೆಗೆ 12 ಕ್ವಿಂಟಾಲ್‌ನಂತೆ ಪ್ರತಿ ರೈತರಿಂದ ಗರಿಷ್ಠ 20.00 ಕ್ವಿಂಟಾಲ್ ಮೆಕ್ಕೆಜೋಳ ಉತ್ಪನ್ನವನ್ನು ಬೆಂಬಲ ಬೆಲೆ ದರ ಪ್ರತಿ ಕ್ವಿಂಟಾಲ್‌ಗೆ ರೂ.2400.00 ರಂತೆ ಖರೀದಿಸಬೇಕು ಎಂದು ಆದೇಶ ಹೊರಡಿಸಿದೆ.
ಅದೇ ರೀತಿ ಡಿಸ್ಟಿಲರಿಗಳ ಸಮೀಪದ PACS ಗಳ ಮೂಲಕ ಖರೀದಿಸಲು ಆದ್ಯತೆ ನೀಡತಕ್ಕದ್ದು” ಎಂಬುದರ ಬದಲಾಗಿ “FRUITS ತಂತ್ರಾಂಶದಲ್ಲಿ ಲಭ್ಯವಾಗುವ ರೈತರು ಹೊಂದಿರುವ ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ಪ್ರತಿ ಎಕರೆಗೆ 12 ಕ್ವಿಂಟಾಲ್‌ನಂತೆ ಪ್ರತಿ ರೈತರಿಂದ ಗರಿಷ್ಠ 50.00 ಕ್ವಿಂಟಾಲ್ ಮೆಕ್ಕೆಜೋಳ ಉತ್ಪನ್ನವನ್ನು ಬೆಂಬಲ ಬೆಲೆ ದರ ಪ್ರತಿ ಕ್ವಿಂಟಾಲ್‌ಗೆ ರೂ.2400.00 ರಂತೆ ಖರೀದಿಸತಕ್ಕದ್ದು ಮತ್ತು ಡಿಸ್ಟಿಲರಿಗಳ ಸಮೀಪದ PACS ಗಳ ಮೂಲಕ ಖರೀದಿಸಲು ಆದ್ಯತೆ ನೀಡತಕ್ಕದ್ದು” ಎಂದು ತಿದ್ದಿ ಓದಿಕೊಳ್ಳತಕ್ಕದ್ದು.
ಎಷ್ಟು ಕ್ವಿಂಟಾಲ್ ಖರಿದಿಗೆ ಏರಿಕೆ ಮಾಡಿದ್ದಾರೆ?
FRUITS ತಂತ್ರಾಂಶದಲ್ಲಿ ಲಭ್ಯವಾಗುವ ರೈತರು ಹೊಂದಿರುವ ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ಪ್ರತಿ ಎಕರೆಗೆ 12 ಕ್ವಿಂಟಾಲ್‌ನಂತೆ ಪ್ರತಿ ರೈತರಿಂದ ಗರಿಷ್ಠ 50.00 ಕ್ವಿಂಟಾಲ್ ಮೆಕ್ಕೆಜೋಳ ಉತ್ಪನ್ನವನ್ನು ಬೆಂಬಲ ಬೆಲೆ ದರ ಪ್ರತಿ ಕ್ವಿಂಟಾಲ್‌ಗೆ ರೂ.2400.00 ರಂತೆ ಖರೀದಿಸಬೇಕು ಎಂದು ಸರ್ಕಾರವು ಆದೇಶ ಹೊರಡಿಸಿದೆ.
ಮೆಕ್ಕೆಜೋಳ ಬೆಲೆ ಕುಸಿದು ಕಂಗಾಲಾಗಿರುವ ರೈತರು ಖರೀದಿ ಕೇಂದ್ರ ತೆರೆದು ಬೆಂಬಲ ಬೆಲೆ ನೀಡಲು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧ ಸಭಾಂಗಣದಲ್ಲಿ ಪಶು ಮತ್ತು ಕುಕ್ಕುಟ ಆಹಾರ ಉತ್ಪಾದಕರೊಂದಿಗೆ ನಡೆಸಿದ ಸಭೆಯಲ್ಲಿ ಮಹತ್ವ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಈ ವರ್ಷ ಅತ್ಯಧಿಕ ಪ್ರಮಾಣದಲ್ಲಿ ಮೆಕ್ಕೆಜೋಳ ಉತ್ಪಾದನೆಯಾಗಿದ್ದು, ರೈತರಿಗೆ ನೆರವಾಗುವ ಉದ್ದೇಶದಿಂದ ರಾಜ್ಯ ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಪಶು ಹಾಗೂ ಕುಕ್ಕುಟ ಆಹಾರ ಉತ್ಪಾದಕರು ಕೇಂದ್ರ ಸರ್ಕಾರ ನಿಗದಿಪಡಿಸಿರುವ ರೂ. 2400 ರ ಕನಿಷ್ಠ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳವನ್ನು ಖರೀದಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಕೇಂದ್ರ ಸರ್ಕಾರ ನಿಗದಿಪಡಿಸಿರುವ ದರ ಒಪ್ಪದ ರೈತರು
ಸರ್ಕಾರ ಕಬ್ಬಿಗೆ ಹೆಚ್ಚುವರಿ ದರ ನಿಗದಿಗೆ ಕಾರಣಗಳನ್ನೂ ಆದೇಶದಲ್ಲಿ ತಿಳಿಸಿರುವ ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ ಕಬ್ಬಿಗೆ ನಿಗದಿ ಮಾಡಿರುವ ಕನಿಷ್ಠ ಬೆಂಬಲ ಬೆಲೆಯನ್ನು ರೈತರು ಒಪ್ಪಲಿಲ್ಲ. ಅದರ ಜತೆಗೆ ಕಾರ್ಖಾನೆಗಳು ರೈತರೊಂದಿಗೆ ಸಹಕಾರ ಮನೋಭಾವದೊಂದಿಗೆ ವ್ಯವಹರಿಸಬೇಕು ಎಂಬ ಉದ್ದೇಶದಿಂದ ಕೇಂದ್ರ ನಿಗದಿ ಮಾಡಿರುವ ಬೆಂಬಲ ಬೆಲೆಗಿಂತ ಹೆಚ್ಚಿನ ದರವನ್ನು ನಿಗದಿ ಮಾಡಲಾಗುತ್ತಿದೆ. ಕಬ್ಬು ಸರಬರಾಜು ಮಾಡಿದ ರೈತರಿಗೆ ಆರ್ಥಿಕ ನೆರವು ನೀಡಲು ಹೆಚ್ಚುವರಿ ದರ ನೀಡಲಾಗುತ್ತಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಕೇಂದ್ರ ಸರ್ಕಾರ ಕಟಾವು ಮತ್ತು ಸಾಗಣೆ ವೆಚ್ಚ ಸೇರಿಸಿ ಶೇ 10.5 ಇಳುವರಿ ಪ್ರಮಾಣ ಇರುವ ಪ್ರತಿ ಟನ್ ಕಬ್ಬಿಗೆ ನ್ಯಾಯಯುತ ಮತ್ತು ಲಾಭದಾಯಕ ದರ (ಎಫ್‌ಆರ್‌ಪಿ) ₹3,550 ನಿಗದಿಪಡಿಸಿದೆ. ಸಾಗಣೆ, ಕಟಾವು ವೆಚ್ಚ ಹೊರತುಪಡಿಸಿ ಸಕ್ಕರೆ ಕಾರ್ಖಾನೆಗಳಿಗೆ ಪೂರೈಸುವ ಕಬ್ಬಿಗೆ ₹3,500 ದರ ನೀಡಬೇಕು ಎಂದು ಆಗ್ರಹಿಸಿ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಹಾವೇರಿ ಮತ್ತು ಕಲಬುರಗಿ ಸೇರಿದಂತೆ ವಿವಿಧೆಡೆ ರೈತರು ಅ.30ರಿಂದ ಪ್ರತಿಭಟನೆ ನಡೆಸುತ್ತಿದ್ದರು. ಸಚಿವರು ಸ್ಥಳಕ್ಕೆ ತೆರಳಿ ಮಾತುಕತೆ ನಡೆಸಿದರೂ ರೈತರು ಪಟ್ಟು ಸಡಿಲಿಸಿರಲಿಲ್ಲ. ಬೆಳಗಾವಿ ಜಿಲ್ಲಾಧಿಕಾರಿ ನಿಗದಿ ಮಾಡಿದ್ದ ₹3,200 ದರವನ್ನೂ ಬೆಳೆಗಾರರು ತಿರಸ್ಕರಿಸಿದ್ದರು.

