ಭಯಂಕರ ಚಳಿಗೆ ಕೆಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ.
ಭಯಂಕರ ಚಳಿ : ಸಾರ್ವಜನಿಕರೇ ಇವತ್ತು ಒಂದು ಆಶ್ಚರ್ಯಕರ ಸುದ್ದಿ ಬಗ್ಗೆ ಮಾತಾಡೋಣ. ಏನೆಂದರೆ ವಿಜಯಪುರ ನಗರ ಸೇರಿದಂತೆ ಜಿಲ್ಲೆಯಲ್ಲಿ ಶನಿವಾರ ತಾಪಮಾನ 7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ನಾಲ್ಕು ದಿನಗಳಿಂದ ತಾಪಮಾನ ತೀವ್ರವಾಗಿ ಕುಸಿತವಾಗುತ್ತಿದ್ದು, ಶೀತಗಾಳಿ ಬೀಸುತ್ತಿದೆ. ಪರಿಣಾಮ ಸಂಜೆ 6 ಗಂಟೆಯಿಂದಲೇ ಚಳಿಯ ವಾತಾವರಣ ಆವರಿಸುತ್ತಿದ್ದು, ಬೆಳಿಗ್ಗೆ 9 ಗಂಟೆಯ ವರೆಗೂ ರಸ್ತೆಗಳಲ್ಲಿ ಜನ ಸಂಚಾರ ವಿರಳವಾಗಿದೆ. ಬೆಳಿಗ್ಗೆ-ಸಂಜೆ ವಾಯು ವಿಹಾರಕ್ಕೆ ತೆರಳುವವರ ಸಂಖ್ಯೆಯೂ ವಿರಳವಾಗಿದೆ. ಚಳಿಗೆ ಜನ ತತ್ತರಿಸಿದ್ದು, ಮನೆಯಿಂದ ಹೊರಗೆ ಬರಲು…

