ಈ ಯೋಜನೆಯ ಅಡಿಯಲ್ಲಿ 5 ಲಕ್ಷ ಬಡ್ಡಿ ರಹಿತ ಸಾಲ.

ರೈತರೇ ನೀವು ನೋಡುತ್ತಿರುವ ಹಾಗೆ ಈಗಾಗಲೇ ಸರ್ಕಾರವು ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ. ಅದರಲ್ಲಿ ಮುಖ್ಯವಾಗಿ ಕೃಷಿ ಚಟುವಟಿಕೆಗಳನ್ನು ಉತ್ತೇಜಿಸಲು ಸಹಕಾರಿ ಬ್ಯಾಂಕುಗಳ ಮೂಲಕ ನೀಡಲಾಗುವ ಶೂನ್ಯ ಬಡ್ಡಿ ಸಾಲದ ಮಿತಿಯನ್ನು ₹5 ಲಕ್ಷಕ್ಕೆ ಹೆಚ್ಚಿಸಲಾಗಿದ್ದು, ಅರ್ಹ ರೈತರು ಇದರ ಸೌಲಭ್ಯ ಪಡೆಯಬಹುದು.

ಸಹಕಾರಿ ಕೃಷಿ ಸಾಲ ಯೋಜನೆ –
ಸರ್ಕಾರವು 2023-24ನೇ ಸಾಲಿನಿಂದ ಅನ್ವಯವಾಗುವಂತೆ ಸಾಲದ ಮಿತಿಯನ್ನು ಹೆಚ್ಚಿಸಿದೆ.
* ಅಲ್ಪಾವಧಿ ಸಾಲ: ₹3 ಲಕ್ಷದಿಂದ ₹5 ಲಕ್ಷವರೆಗೆ – ಶೂನ್ಯ ಬಡ್ಡಿದರ.
* ಮಧ್ಯಮ ಹಾಗೂ ದೀರ್ಘಾವಧಿ ಸಾಲ: ₹10 ಲಕ್ಷದಿಂದ ₹15 ಲಕ್ಷವರೆಗೆ – ಶೇ.3 ಬಡ್ಡಿದರ.

ಕರ್ನಾಟಕ ಸರ್ಕಾರವು ಸಹಕಾರಿ ಸಂಸ್ಥೆಗಳ (PACS, DCC ಬ್ಯಾಂಕ್‌ಗಳು) ಮೂಲಕ ರೈತರಿಗೆ ಕೃಷಿ ಚಟುವಟಿಕೆಗಳಿಗಾಗಿ 5 ಲಕ್ಷ ರೂ. ವರೆಗೆ ಅಲ್ಪಾವಧಿ ಬೆಳೆ ಸಾಲವನ್ನು ಶೂನ್ಯ ಬಡ್ಡಿ ದರದಲ್ಲಿ (Interest-free loan) ನೀಡುತ್ತಿದೆ. ಈ ಯೋಜನೆಯಡಿ, ಸಕಾಲದಲ್ಲಿ ಸಾಲ ಮರುಪಾವತಿ ಮಾಡುವ ರೈತರು ಬಡ್ಡಿ ರಹಿತವಾಗಿ ಸಾಲ ಪಡೆಯಬಹುದು, ಇಲ್ಲದಿದ್ದರೆ ಶೇ. 12 ರಷ್ಟು ಬಡ್ಡಿ ವಿಧಿಸಲಾಗುತ್ತದೆ.

ಅರ್ಹತೆ ಮತ್ತು ದಾಖಲೆಗಳು:
* ಕರ್ನಾಟಕದ ರೈತರಾಗಿರಬೇಕು.
* ಸಹಕಾರಿ ಸಂಘದ ಸದಸ್ಯರಾಗಿರಬೇಕು.
* ಭೂಮಿ ಹೊಂದಿರಬೇಕು (ಕನಿಷ್ಠ 5 ಗುಂಟೆ).
* ಆಧಾರ್ ಕಾರ್ಡ್, ಜಮೀನಿನ ದಾಖಲೆಗಳು (RTC), ಮತ್ತು ಭಾವಚಿತ್ರ ಅಗತ್ಯ.

ಸಹಕಾರ ವಲಯದ ಪ್ರಮುಖ ಘೋಷಣೆಗಳು:

2025-26ನೇ ಸಾಲಿನಲ್ಲಿ 37 ಲಕ್ಷ ರೈತರಿಗೆ 28,000 ಕೋಟಿ ರೂ. ಸಾಲವನ್ನು ವಿತರಿಸುವ ಗುರಿ ಹೊಂದಲಾಗಿದ್ದು, ಫೆಬ್ರವರಿ 2026ರ ಅಂತ್ಯಕ್ಕೆ 25 ಲಕ್ಷ ರೈತರಿಗೆ 22,000 ಕೋಟಿ ರೂ. ಕೃಷಿ ಸಾಲವನ್ನು ವಿತರಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 38 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ 30,000 ಕೋಟಿ ರೂ. ಕೃಷಿ ಸಾಲ ವಿತರಿಸುವ ಗುರಿ ಹೊಂದಲಾಗಿದೆ.

ಯಶಸ್ವಿನಿ ಯೋಜನೆಯಡಿ ಇದುವರೆಗೆ ರಾಜ್ಯಾದ್ಯಂತ 870 ಯಶಸ್ವಿನಿ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ 86,253 ಫಲಾನುಭವಿಗಳು ಚಿಕಿತ್ಸೆ ಪಡೆದಿದ್ದು, ಇದಕ್ಕಾಗಿ 163 ಕೋಟಿ ರೂ.ಗಳನ್ನು ಭರಿಸಲಾಗಿದೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ (PACS) ಕೇಂದ್ರ ಪುರಸ್ಕೃತ ಗಣಕೀಕರಣ ಯೋಜನೆಯಡಿ 3,863 PACS ಗಳು Go-Live ಆಗಿದ್ದು, Online ಸೇವೆಯನ್ನು ಒದಗಿಸುತ್ತಿವೆ. ಪ್ರಸಕ್ತ ಸಾಲಿನಲ್ಲಿ ಬಾಕಿ ಉಳಿದ 1,628 ಸಹಕಾರ ಸಂಘಗಳನ್ನು ಸಂಪೂರ್ಣವಾಗಿ ಗಣಕೀಕರಣಗೊಳಿಸಲು ಉದ್ದೇಶಿಸಲಾಗಿದೆ.

ಸಹಕಾರ ಕ್ಷೇತ್ರಕ್ಕೆ ಸಂಬಂಧಿಸಿ ಪ್ರಸಕ್ತ ಸಾಲಿನಲ್ಲಿ 38 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ 30,000 ಕೋಟಿ ರೂ. ಕೃಷಿ ಸಾಲ ವಿತರಿಸುವ ಗುರಿ ಹೊಂದಲಾಗಿದೆ ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ. ರೈತರು ತಮ್ಮ ಹತ್ತಿರದ ಸಹಕಾರ ಬ್ಯಾಂಕ್‌ ಅಥವಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಅಥವಾ ವ್ಯವಸಾಯ ಸೇವಾ ಸಹಕಾರಿ ಸಂಘಗಳನ್ನು ಸಂಪರ್ಕಿಸಿ ಅಲ್ಲಿ ಹೊಸದಾಗಿ ಈ ಕೃಷಿ ಸಾಲ ಪಡೆಯಬಹುದು ಅಥವಾ ಹಳೆಯ ಸಾಲವನ್ನು ನವೀಕರಿಸಬಹುದು ಎಂದು ಬಜೆಟ್‌ನಲ್ಲಿ ಘೋಷಿಸಲಾಗಿದೆ.

Spread positive news

Leave a Reply

Your email address will not be published. Required fields are marked *