ಇ-ಸ್ವತ್ತು’ ಸಮಸ್ಯೆಗಳಿಗೆ ಸಹಾಯವಾಣಿ ಆರಂಭ, ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ.!
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಸ್ತಿಗಳಿಗೆ ಸಂಬಂಧಿಸಿದ ಇ-ಖಾತೆ ಪಡೆಯಲು ಸಾರ್ವಜನಿಕರು ಎದುರಿಸುತ್ತಿರುವ ತಾಂತ್ರಿಕ ಮತ್ತು ಆಡಳಿತಾತ್ಮಕ ಸಮಸ್ಯೆಗಳನ್ನು ಪರಿಹರಿಸಲು ಕರ್ನಾಟಕ ಸರ್ಕಾರದ ಪಂಚಾಯತ್ ರಾಜ್ ಇಲಾಖೆಯು ರಾಜ್ಯ ಮಟ್ಟದ ಮತ್ತು ಜಿಲ್ಲಾ ಮಟ್ಟದ ವಿಶೇಷ ‘ಇ-ಸ್ವತ್ತು ಸಹಾಯವಾಣಿ’ಯನ್ನು ಪ್ರಾರಂಭಿಸಿದೆ. ರಾಜ್ಯ ಮಟ್ಟದ ಮುಖ್ಯ ಸಹಾಯವಾಣಿ ಇ-ಸ್ವತ್ತು ತಂತ್ರಾಂಶದ ಮೂಲಕ ಇ-ಖಾತೆ ಪಡೆಯುವಲ್ಲಿ ಯಾವುದೇ ಅಡೆತಡೆಗಳಿದ್ದಲ್ಲಿ ಸಾರ್ವಜನಿಕರು ನೇರವಾಗಿ ಈ ಕೆಳಗಿನ ಸಂಖ್ಯೆಗೆ ಕರೆ ಮಾಡಬಹುದು: ಸಹಾಯವಾಣಿ ಸಂಖ್ಯೆ: 94834 76000 ಸಮಯ: ಸೋಮವಾರದಿಂದ ಶನಿವಾರದವರೆಗೆ, ಬೆಳಿಗ್ಗೆ 10…

