ರಾಜ್ಯದಲ್ಲಿ `ರೇಷನ್ ಕಾರ್ಡ್’ ತಿದ್ದುಪಡಿ, ಹೊಸ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ

ಕರ್ನಾಟಕ ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಮಹತ್ವದ ಸುದ್ದಿಯೊಂದನ್ನು ನೀಡಿದೆ. ಬಾಕಿ ಉಳಿದಿದ್ದ ಪಡಿತರ ಚೀಟಿಗಳ ತಿದ್ದುಪಡಿ ಹಾಗೂ ಹೊಸ ಅರ್ಜಿ ಸಲ್ಲಿಕೆಗೆ ಮೇ 8, 2026ರಿಂದ ಅವಕಾಶ ಕಲ್ಪಿಸಲಾಗಿದೆ.

ಈ ಕುರಿತು ಇಲಾಖೆಯು ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಪ್ರಮುಖವಾಗಿ ಇ-ಶ್ರಮ (E-Shram), ಪಿವಿಟಿಜಿ (PVTG) ಹಾಗೂ ವೈದ್ಯಕೀಯ ತುರ್ತು ಪರಿಸ್ಥಿತಿಗೆ ಸಂಬಂಧಿಸಿದ ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಕೆ ಮತ್ತು ತಿದ್ದುಪಡಿ ಮಾಡ್ಯೂಲ್‌ಗಳನ್ನು ಸಕ್ರಿಯಗೊಳಿಸಲಾಗಿದೆ.

ಪ್ರಮುಖ ಸೇವೆಗಳು ಮತ್ತು ಸಮಯ:

ಸಾರ್ವಜನಿಕರು ಈ ಕೆಳಗಿನ ಸೇವೆಗಳನ್ನು ನಿಗದಿತ ಸಮಯದಲ್ಲಿ ಪಡೆದುಕೊಳ್ಳಬಹುದು:

ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಕೆ: ಮೇ 8, 2026 ರಿಂದ ಮಾರ್ಚ್ 31, 2027 ರವರೆಗೆ ಬೆಳಿಗ್ಗೆ 10:00 ರಿಂದ ಸಂಜೆ 5:00 ರವರೆಗೆ ಅವಕಾಶವಿರುತ್ತದೆ.

ಹೊಸ ಪಡಿತರ ಚೀಟಿ FI ಅನುಮೋದನೆ: ಬೆಳಿಗ್ಗೆ 10:00 ರಿಂದ ರಾತ್ರಿ 9:00 ರವರೆಗೆ.

GSC / ತಿದ್ದುಪಡಿ ಅರ್ಜಿ ಸಲ್ಲಿಕೆ: ಮೇ 8, 2026 ರಿಂದ ಮಾರ್ಚ್ 31, 2027 ರವರೆಗೆ ಬೆಳಿಗ್ಗೆ 10:00 ರಿಂದ ಸಂಜೆ 5:00 ರವರೆಗೆ ಲಭ್ಯ.

GSC / ತಿದ್ದುಪಡಿ FI ಅನುಮೋದನೆ: ಬೆಳಿಗ್ಗೆ 10:00 ರಿಂದ ರಾತ್ರಿ 9:00 ರವರೆಗೆ.

ಗಮನಿಸಿ:
ಎಲ್ಲಾ ಮೂರು ಸರ್ವರ್‌ಗಳಲ್ಲಿ ಈ ಮಾಡ್ಯೂಲ್‌ಗಳನ್ನು ಸಕ್ರಿಯಗೊಳಿಸಲಾಗಿದ್ದು, ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ತಮ್ಮ ರೇಷನ್ ಕಾರ್ಡ್ ಕೆಲಸಗಳನ್ನು ಪೂರ್ಣಗೊಳಿಸಿಕೊಳ್ಳಲು ಇಲಾಖೆ ಕೋರಿದೆ.

ಹೆಚ್ಚಿನ ಮಾಹಿತಿಗಾಗಿ ಅಥವಾ ಅರ್ಜಿ ಸಲ್ಲಿಕೆಗಾಗಿ ಸಮೀಪದ ಕರ್ನಾಟಕ ಒನ್ ಅಥವಾ ಗ್ರಾಮ ಒನ್ ಕೇಂದ್ರಗಳನ್ನು ಭೇಟಿ ಮಾಡಬಹುದು.

Spread positive news

Leave a Reply

Your email address will not be published. Required fields are marked *