
ಉತ್ತರ ಕನ್ನಡ: ಸಿಡಿಲು ಬಡಿದು ರೈತ ಸಾವು! ಸಿಡಿಲಿನಿಂದ ತಪ್ಪಿಸಿಕೊಳ್ಳುವುದು ಹೇಗೆ?
ರೈತರೇ ಪೂರ್ವ ಮುಂಗಾರು ಮಳೆ ಅಬ್ಬರ ಮುಂದುವರಿದಿದೆ. ಕರಾವಳಿ ಜಿಲ್ಲೆಗಳು ಹಾಗೂ ಒಳನಾಡಿನ ಜಿಲ್ಲೆಗಳಾದ್ಯಂತ ಆಗಾಗ ಭಾರೀ ಮಳೆ ಆಗುತ್ತಿದೆ. ಗುಡುಗು ಸಹಿತ ಅತ್ಯಧಿಕ ಮಳೆ ಆರ್ಭಟ ಇಂದಿನಿಂದ ಮುಂದಿನ 05 ದಿನಗಳವರೆಗೆ (ಮೇ 23) ಕಂಡು ಬರಲಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಉಳುವರೆ ಗ್ರಾಮದಲ್ಲಿ ಸಿಡಿಲು ಬಡಿದು ರೈತನೊಬ್ಬರು ಮೃತಪಟ್ಟಿದ್ದಾರೆ. ಉಳುವರೆ ಗ್ರಾಮದ ರೈತ ತಮ್ಮಣ್ಣಿ ಅನಂತ ಗೌಡ (65) ಮೃತರು. ಸೋಮವಾರ ಸಂಜೆ ಮನೆ ಬಳಿ ಸಿಡಿಲುಬಡಿದು ರೈತ ಮೃತಪಟ್ಟಿರುವುದಾಗಿ ತಿಳಿದುಬಂದಿದೆ….