
ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ, ಈ ಜಿಲ್ಲೆಗಳಿಗೆ ಆರೇಂಜ್ ಅಲರ್ಟ್
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ರಾಜ್ಯದಾದ್ಯಂತ ಮುಂದಿನ 5 ದಿನಗಳವರೆಗೆ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ತಿಳಿಸಿದೆ. “ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಿಂದ, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ” ಎಂದು ಹವಾಮಾನ ಇಲಾಖೆಯು ತಿಳಿಸಿದೆ. ಮೇ 4 ರಿಂದ 6 ರವರೆಗೆ ಪಶ್ಚಿಮ ಮಧ್ಯಪ್ರದೇಶ, ಪೂರ್ವ ಮಧ್ಯಪ್ರದೇಶ,…