ಈ ರೀತಿ ಮಾಡಿದರೆ ಜೂನ್ ನಿಂದ ಹಳೆ ಕಂದಾಯ ದಾಖಲೆಗಳು ಅಂಗೈನಲ್ಲೇ ಲಭ್ಯ
ಜೂನ್ ನಿಂದ ಹಳೇ ಕಂದಾಯ ದಾಖಲೆಗಳು ಅಂಗೈನಲ್ಲಿ ಲಭ್ಯವಾಗಲಿವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕಂದಾಯ ಹಾಗೂ ಸರ್ವೆ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಕಂದಾಯ ದಾಖಲೆಗಳು ಅಂಗೈನಲ್ಲಿ; ಕಂದಾಯ ಇಲಾಖೆಯ ಹಳೇ ದಾಖಲೆಗಳನ್ನು ಪಡೆಯಲು ಕಚೇರಿಗೆ ಅರ್ಜಿ ಸಲ್ಲಿಸಿ ಅಲೆದಾಡುವುದನ್ನು ತಪ್ಪಿಸಲು ಆನ್‍ಲೈನ್ ಮೂಲಕವೇ ದಾಖಲೆಗಳನ್ನು ಒದಗಿಸಲು ಇಲಾಖೆ ಮುಂದಾಗಿದ್ದು. ಈಗಾಗಲೇ ಹಳೇ ದಾಖಲೆಗಳ ಡಿಜಿಟಲೀಕರಣ ಕಾರ್ಯ ಪ್ರಗತಿಯಲ್ಲಿದೆ. ಬರುವ ಜೂನ್‍ನಿಂದ ಕಂದಾಯ…

