ರೈತರೇ ಸ್ವತಃ ಆಧಾರ್- ಪಹಣಿ ಜೋಡಣೆ ಮಾಡಿಕೊಳ್ಳುವ ವಿಧಾನ ಇಲ್ಲಿದೆ!
ಈಗಾಗಲೇ ಹಲವು ಯೋಜನೆಗಳಿಗೆ ಆಧಾರ್ ಕಾರ್ಡ್ ಲಿಂಕ್ (Aadhaar card linkage) ಮಾಡಿ ಸುಸ್ತಾಗಿರುವ ರೈತರು ಈಗ ಪಹಣಿಗೆ ಆಧಾರ್ ಸೀಡಿಂಗ್ (Aadhaar seeding) ಮಾಡಬೇಕಿದೆ. ಇದು ಕಡ್ಡಾಯವೂ ಆಗಿದೆ. ಆಧಾರ್ ಲಿಂಕ್ ಬಗ್ಗೆ ರೈತರಿಗೆ ಆಗುತ್ತಿರುವ ತೊಂದರೆಗಳೇನು? ಇಂದು ಆಧಾರ್ ಸಂಖ್ಯೆ ಎಂಬುದು ಅತಿ ಮುಖ್ಯವಾಗಿದೆ. ಇದು ಒಂದು ರೀತಿಯ “ಡಿಜಿಟಲ್ ಬೇಸಾಯ” ಎಂದು ಹೇಳಬಹುದಾಗಿದೆ. ಹೇಗೆ ಬೇಸಾಯದಲ್ಲಿ ಪ್ರತಿ ತಿಂಗಳು ಏನಾದರೂ ಒಂದು ಕೆಲಸವನ್ನು ಮಾಡುತ್ತಾ ಇರಬೇಕೋ ಹಾಗೇ ಇಲ್ಲಿ ಆಧಾರ್ ಸಂಖ್ಯೆಯನ್ನು ಒಂದಲ್ಲಾ…