ರಾಜ್ಯಕ್ಕೆ ಭಾರಿ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ.
ರಾಜ್ಯದ ಜನತೆಗೆ ಹವಾಮಾನ ಇಲಾಖೆಯು ಮಳೆಯ ಮುನ್ಸೂಚನೆ ನೀಡಿದೆ. ಈ ವಾರವಿಡೀ ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿ ಭಾಗದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ. ಮಾರ್ಚ್ 17 ಹಾಗೂ 18ರಂದು ರಾಜಧಾನಿ ಬೆಂಗಳೂರು ಸೇರಿದಂತೆ 17 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಯಾವ ಜಿಲ್ಲೆಗಳಲ್ಲಿ ಮಳೆ? ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು, ಹಾಸನ, ಮೈಸೂರು, ಚಿಕ್ಕಮಗಳೂರು, ದಾವಣಗೆರೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಮತ್ತು…

